ದೆಹಲಿ ಭೇಟಿ ರಹಸ್ಯ ಬಿಚ್ಚಿಟ್ಟ ಸಚಿವ ಜಿ. ಪರಮೇಶ್ವರ್!
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಇದರ ನಡುವೆ ರಾಜ್ಯದ ದಲಿತ ಸಚಿವರು ಹಾಗೂ ನಾಯಕರು ಸೇರಿ ಚರ್ಚೆ ಮಾಡುತ್ತಿರುವುದು ಹಾಗೂ ಸಭೆ ನಡೆಸುತ್ತಿರುವುದು ತೀವ್ರ್ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ ರಾಜ್ಯದ ದಲಿತ ನಾಯಕರು ಸರಣಿ ಹಾದಿಯಲ್ಲಿ ದೆಹಲಿ ಪ್ರವಾಸವನ್ನು ಮಾಡುತ್ತಿದ್ದಾರೆ. ದೆಹಲಿಗೆ ರಾಜ್ಯ ಕಾಂಗ್ರೆಸ್‌ನ ದಲಿತ ನಾಯಕರು ಭೇಟಿ ನೀಡುತ್ತಿರುವುದು ಹಲವು ಕುತೂಹಲ ಹಾಗೂ ಅಚ್ಚರಿಗೆ ಕಾರಣವಾಗಿದೆ. ರಾಜ್ಯದಲ್ಲಿ ತೆರೆಮರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ ಎನ್ನುವ ಅನುಮಾನಕ್ಕೆ ಇದು ದಾರಿ ಮಾಡಿಕೊಟ್ಟಿದೆ. ಇದೀಗ ದೆಹಲಿ ಪ್ರವಾಸ ಮಾಡಿರುವುದು ಯಾವ ಕಾರಣಕ್ಕಾಗಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ದೆಹಲಿಗೆ ಈಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ರಾಜ್ಯದ ದಲಿತ ನಾಯಕರನ್ನು ಕರೆಸಿಕೊಂಡು ಸಭೆ ನಡೆಸುತ್ತಿದೆ. ಇದೀಗ ಈ ವಿಚಾರವಾಗಿ ಮಾತನಾಡಿರುವ ಜಿ. ಪರಮೇಶ್ವರ್ ಅವರು, ನಾನು ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹೊಸ ಕಚೇರಿ ನೋಡಲು ಹೋಗಿದ್ದೆ. ಈ ವೇಳೆ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದೇನೆ. ಅವರನ್ನು ಹಿರತುಪಡಿಸಿ ಬೇರೆ ಯಾರನ್ನು ಭೇಟಿ ಮಾಡಿಲ್ಲ. ರಾಜಕೀಯದ ಅಜೆಂಡಾ ಇಟ್ಟುಕೊಂಡು ಹೋಗಿರಲಿಲ್ಲ ಎಂದಿದ್ದಾರೆ.

ಆದರೆ, ಈ ಸಮಯದಲ್ಲಿ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಿ ಚರ್ಚೆ ಮಾಡಿರುವುದು ಖಚಿತ ಎಂದೇ ಹೇಳಲಾಗುತ್ತಿದೆ. ಮುಂದುವರಿದು ಮಾತನಾಡಿರುವ ಜಿ. ಪರಮೇಶ್ವರ್ ಅವರು, ನಾನು ದೆಹಲಿ ಪ್ರವಾಸ ಮಾಡಿದ್ದು ಸಂಪೂರ್ಣವಾಗಿ ಖಾಸಗಿ ಕೆಲಸಗಳಿಗೆ. ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ. ನಿಮ್ಮ ನಿಮ್ಮ ದೃಷ್ಟಿಕೋಮದಲ್ಲಿ ವ್ಯಾಖ್ಯಾನ ಮಾಡಿದ್ದಕ್ಕೆ ಅಭಿನಂದನೆಗಳು. ನಾನು ಅಂತಹ ಯಾವುದೇ ಬೆಳವಣಿಗೆ ಇಲ್ಲ.ಯಾವುದನ್ನು ಅವರೊಂದಿಗೆ ಮಾತನಾಡಿಲ್ಲ. ಮುಚ್ಚಿಡುವ ವಿಷಯ ಏನೂ ಇಲ್ಲ ಇದರಲ್ಲಿ. ಜನ ಸಮುದಾಯಕ್ಕೆ ಗೊತ್ತಾಗುವಂತ ವಿಚಾರಗಳೇ ರಾಜಕೀಯ ಅಂತ ಅವರು ಹೇಳಿದ್ದಾರೆ.
ನಾನು ಒಂದು ವೇಳೆ ಅಜೆಂಡಾ ಇಟ್ಟುಕೊಂಡು ಹೋಗಿದ್ದರೆ ನಿಮ್ಮ ಜೊತೆ ಹಂಚಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಇಬಹುದು ಅಥವಾ ಮುಖ್ಯಮಂತ್ರಿ ವಿಚಾರ ಇರಬಹುದು ಯಾವುದನ್ನು ಎಲ್ಲಿಯೂ ಮಾತನಾಡಿಲ್ಲ. ಇದು ನಿಮ್ಮಗಮನಕ್ಕೆ ಇರಲಿ. ಶೋಷಿತ ಸಮಾವೇಶದ ಬಗ್ಗೆಯೂ ಮಾತನಾಡಿಲ್ಲ. ಯಾವುದೇ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ. ಆ ರೀತಿ ಅಜೆಂಡಾ ಇದ್ದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದೆ ಎಂದು ಸ್ಪಷ್ಟೀಕರಣ ನೀಡಲು ಬಯಸುತ್ತೇನೆ ಎಂದೂ ಅವರು ಹೇಳಿದ್ದಾರೆ.
ರಾಜ್ಯದ ರಾಜಕೀಯ ವಿಚಾರಗಳ ಬಗ್ಗೆ ಮಾತಾಡಿದ್ದರೆ ನಿಮ್ಮ ಮುಂದೆ ಮುಚ್ಚಿಡುವಂಥದ್ದು ಏನಿದೆ. ಎಲ್ಲವನ್ನು ಮುಕ್ತವಾಗಿ ಹೇಳಲಿ ಆಗುವುದಿಲ್ಲ ಎಂಬುದು ಬೇರೆ ವಿಚಾರ. ಮಾತಾಡಿದ್ದರೆಹೇಳುತ್ತಿದ್ದೆ. ಕದ್ದು ಮುಚ್ಚಿ ಮಾಡುವಂಥದ್ದು ಏನು ಇಲ್ಲ ಅಂತಲೂ ಹೇಳಿದ್ದಾರೆ.












Click it and Unblock the Notifications