Get Updates
Get notified of breaking news, exclusive insights, and must-see stories!

ನಾನು ಮಹಿಳೆಯರ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದೇನೆ: ಜಿ. ಪರಮೇಶ್ವರ್

ಬೆಂಗಳೂರಿನಲ್ಲಿ ನಡೆದ ವಿಷಯಕ್ಕೆ ರಿಯಾಕ್ಟ್‌ ಮಾಡಿ ಮುಜುಗರಕ್ಕೆ ಒಳಗಾಗಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ‌ ಘಟನೆಗೆ ಸಂಬಂಧಿಸಿದಂತೆ ನಾನು ಕೊಟ್ಟಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಅಥವಾ ತಪ್ಪಾಗಿ ವರದಿ ಮಾಡಲಾಗಿದೆ ಅಂತ ಹೇಳಿದ್ದಾರೆ. ಇದರೊಂದಿಗೆ ಈ ವಿಚಾರವಾಗಿ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ಕೊಟ್ಟಿದ್ದೇನೆ ಅಂತ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಆದರೆ, ಪರಮೇಶ್ವರ್‌ ಅವರ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಲ್ಲಿ ನಿರ್ಭಯಾ ಯೋಜನೆ ಸೇರಿದಂತೆ ಮಹಿಳಾ ಸುರಕ್ಷತೆಗೆ ಅನೇಕ ಯೋಜನೆಗಳನ್ನು ನೀಡಿದ್ದೇನೆ. ದೇಶದಲ್ಲಿ ಬೇರೆ ರಾಜ್ಯಗಳಿಗಿಂತ ನಿರ್ಭಯಾ ಯೋಜನೆಯ ಅನುದಾನವನ್ನು ನಾವು ಹೆಚ್ಚು ಬಳಸಿಕೊಂಡಿದ್ದು, ಅನುಷ್ಠಾನ ಮಾಡಿದ್ದೇವೆ. ನಾನು ಪ್ರತಿ ಬಾರಿ ಗೃಹ ಸಚಿವನಾದಾಗಲೂ ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಮಹಿಳಾ ಸುರಕ್ಷತೆಗೆ ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇನೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಅವರು ವಿವರಿಸಿದ್ದಾರೆ.

Home Minister G Parameshwara Said He Has Taken Strict Measures to Protect Women

ಒಂದು ಹೇಳಿಕೆಯನ್ನು ತಿರುಚಿ, ನನ್ನ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ. ನಾನು ಮಹಿಳೆಯರ ರಕ್ಷಣೆಗೆ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇನೆ. ಮಹಿಳೆಯರ ರಕ್ಷಣೆ ಆಗಬೇಕು ಎನ್ನುವ ನಂಬಿಕೆಯಲ್ಲಿದ್ದೇನೆ. ಯಾರಿಗೆ ತೊಂದರೆ ಆದರೂ ಸಹ ನಮ್ಮ ಇಲಾಖೆಯಲ್ಲಿ ನೇರವಾಗಿ ಅನೇಕರನ್ನು ಹೊಣೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರ ರಾಜಕೀಯ ಹೊರತುಪಡಿಸಿ, ಒಂದು ವೇಳೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ‌ ಎಂದು ಹೇಳಿದರು.

Home Minister G Parameshwara Said He Has Taken Strict Measures to Protect Women

ಪ್ರತಿನಿತ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿಯವರು ಇಲಾಖೆಯ ದೈನಂದಿನ ಮಾಹಿತಿಯನ್ನು ನೀಡಲು ಬಂದಾಗ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸುತ್ತೇನೆ. ಜಿಲ್ಲಾ‌ ಪೊಲೀಸ್ ಪ್ರಗತಿ ಪರಿಶೀಲನೆ ಕೈಗೊಂಡಾಗಲೂ ಇದೇ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿಯವರ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಏನೆಲ್ಲ ಆಗಿತ್ತು ಎಂಬುದನ್ನು ಅಂಕಿ ಅಂಶ ಸಮೇತ ಸದನದಲ್ಲಿ ಉತ್ತರಿಸಿದ್ದೇನೆ. ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಏನೂ ಆಗಿರಲಿಲ್ಲ. ಎಲ್ಲವೂ ಚೆನ್ನಾಗಿತ್ತು ಅಂತ ಹೇಳುವುದಕ್ಕೆ ಜನ ನಗಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.

Take a Poll

ಬೆಲೆ ಏರಿಕೆ ಮಾಡಿದ್ದಾರೆ ಎಂದು ಬಿಜೆಪಿಯವರು ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವು ಬೆಲೆ ಜಾಸ್ತಿ ಮಾಡುತ್ತದೆ ಎನ್ನುವುದು ಬಿಜೆಪಿ ಪಕ್ಷದ ನಾಯಕರಿಗೆ ಅರಿವಿಲ್ಲ. ಕೇಂದ್ರ ಸರ್ಕಾರದ ನೀತಿಗಳು ಹೇಗಿವೆ ಎನ್ನುವುದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕೇಂದ್ರ ಬಿಜೆಪಿ ಸರ್ಕಾರವು ಅಡುಗೆ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು 2 ರೂಪಾಯಿ ಹೆಚ್ಚಳ ಮಾಡಿದೆ. ಈ ವಿಷಯಗಳಿಗೆ ಮೊದಲು ಬಿಜೆಪಿ ಅವರು ಉತ್ತರಿಸಬೇಕು. ನಂತರ ಅವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸೋಣ. ರಾಜ್ಯದಲ್ಲಿ ಜನತೆ ಗಮನಿಸುತ್ತಾರೆ ಎಂದು ನಿನ್ನೆಯೇ ಹೇಳಿದ್ದೆ. ಬಿಜೆಪಿಯವರು ಜನಾಕ್ರೋಶ ಅಂತ ಹೇಳಿದ್ದರು. ಬಿಜೆಪಿ ಆಕ್ರೋಶ ಎಂದು ನಾನು ಹೇಳಿದ್ದೆ. ಜನಾಕ್ರೋಶ ಯಾತ್ರೆಯನ್ನು ಮಾಡಲು ಹೊರಟಿರುವ ಬಿಜೆಪಿಯ ನಾಯಕರು ಇದೀಗ ಈ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಎಐಸಿಸಿ ಸಭೆಗೆ ನಾನು ಹೋಗಿರಲಿಲ್ಲ. ಬೇರೆ ಬೇರೆ ಕೆಲಸಗಳಿರುವುದರಿಂದ ಹೋಗುವುದಕ್ಕೆ ಸಾಧ್ಯವಾಗಿರಲಿಲ್ಲ. ಸಭೆಯಲ್ಲಿ ಏನೆಲ್ಲ ರೆಸ್ಯೂಲೂಷನ್ ಮಾಡುತ್ತಾರೆ ಎಂಬುದನ್ನು ನೋಡಬೇಕು‌. ಎಐಸಿಸಿ ಸಭೆಗಳಾಗಿರುವ ಸಂಘಟನೆ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಅನೇಕ ಚರ್ಚೆ ಹಾಗೂ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಪಕ್ಷದ ಮುಂದಿನ ದೃಷ್ಟಿಕೋನದ ಬಗ್ಗೆ ಪ್ರಮುಖವಾದ ರೆಸ್ಯೂಲೂಷನ್‌ಗಳನ್ನು ತೆಗೆದುಕೊಳ್ಳುತ್ತಾರೆ. ಪಕ್ಷ ಸಂಘಟನೆ ಕುರಿತಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ವರ್ಕಿಂಗ್ ಕಮಿಟಿ ಏನು ತೀರ್ಮಾನ ಕೈಗೊಳ್ಳುತ್ತಾರೆ, ಅದೆಲ್ಲವನ್ನು ನಾವು ಅನುಷ್ಠಾನಗೊಳಿಸಲು ಸಿದ್ಧರಿರುತ್ತೇವೆ ಎಂದಿದ್ದಾರೆ.

"ಇದೆಲ್ಲಾ ಮಾಮೂಲಿ" ಆರ್‌. ಅಶೋಕ್‌ ವ್ಯಂಗ್ಯ!

ಜಿ ಪರಮೇಶ್ವರ್ ಅವರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿತ್ತು. ಇನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಯುವತಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನ "ಇದೆಲ್ಲಾ ಮಾಮೂಲಿ" ಎಂದು ತಿಪ್ಪೆ ಸಾರಿಸುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ತನ್ನ ಸಂವೇದನಾ ರಹಿತ, ಸ್ತ್ರೀ ವಿರೋಧಿ ಮಾನಸಿಕತೆಯನ್ನ ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ದಿನೇ ದಿನೇ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯಿಂದ ಈಗಾಗಲೇ ಬೆಂಗಳೂರು ನಗರ ಕ್ರೈಂ ಸಿಟಿ, ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವ ಹಣೆ ಪಟ್ಟಿ ಕಟ್ಟಿಕೊಳ್ಳುವ ದುಸ್ಥಿತಿಗೆ ತಲುಪಿದ್ದು, ಅಸಮರ್ಥ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂತಹ ಪ್ರಕರಣಗಳನ್ನ ಗಂಭೀರತೆಯಿಂದ ಪರಿಗಣಿಸುವ ಸಮರ್ಥರಿಗೆ ದಾರಿ ಮಾಡಿಕೊಡುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ

❌ಆಕಸ್ಮಿಕ

❌ಮಕ್ಕಳಾಟ

❌ಸಣ್ಣ ಘಟನೆ

❌ಪ್ರೇಮ ವೈಫಲ್ಯ

❌ಕುಟುಂಬ ಕಲಹ

❌ಅಲ್ಲೊಂದು ಇಲ್ಲೊಂದು ಎನ್ನುವ ಪದಗಳನ್ನು ಟ್ವೀಟ್‌ ಮಾಡಿದ್ದು. ಆಕಸ್ಮಿಕ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ರಾಜ್ಯದ ಹೆಣ್ಣುಮಕ್ಕಳ ಮೇಲೆ ನಡೆಯುವ ಪ್ರತಿಯೊಂದು ಅತ್ಯಾಚಾರ, ಮಾನಭಂಗ, ದೌರ್ಜನ್ಯ, ಹಲ್ಲೆ ಪ್ರಕರಣಗಳೆಲ್ಲವೂ ಅಲ್ಲೊಂದು ಇಲ್ಲೊಂದು ನಡೆಯುವ ಸಣ್ಣ ಘಟನೆಗಳಾಗಿ ಕಾಣಿಸುತ್ತಿರುವುದು ನಿಜಕ್ಕೂ ದುರಂತ ಎಂದಿದ್ದಾರೆ.

ಈ ನಾಲಾಯಕ್ ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿಯೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+