Darmhasthala Burials Case: ಧರ್ಮಸ್ಥಳ ಪ್ರಕರಣ ಎಸ್‌ಐಟಿಗೆ; ಗೃಹ ಸಚಿವ ಪರಮೇಶ್ವರ್ ಫಸ್ಟ್ ರಿಯಾಕ್ಷನ್
ಬೆಂಗಳೂರು, ಜುಲೈ 20: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ಭಾರೀ ತಿರುವು ಪಡೆಯುತ್ತಿದೆ. ಇದೀಗ ಈ ಪ್ರಕರಣವನ್ನ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಇಂದು(ಭಾನುವಾರ) ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತದೆ. ನಾವು ಪ್ರಿಲಿಮ್ನರಿ ತನಿಖೆ ಆಗಲಿ, ಅಗತ್ಯ ಇದ್ದರೆ ಮುಂದೆ ಎಸ್‌ಐಟಿ ರಚನೆ ಮಾಡ್ತೀವಿ ಅಂದಿದ್ದೆವು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಕುಳಿತು ಈ ಬಗ್ಗೆ ತೀರ್ಮಾನ ಮಾಡಿ ಆದೇಶ ಮಾಡಿದ್ದೇವೆ ಎಂದು ಹೇಳಿದರು.

ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ಅವರನ್ನು ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್‌ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್‌ಮಿಟ್ ಮಾಡಬೇಕು. ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಸೌಜನ್ಯ ಪ್ರಕರಣ ಬಗ್ಗೆ ಇಲ್ಲ, ಈಗಿರುವ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಆಗುತ್ತೆ, ಕಂಪ್ಲೇಂಟ್ ಬಗ್ಗೆ ತನಿಖೆ ನಡೆಯುತ್ತದೆ. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದು ಹೇಳಿದರು.
ಒತ್ತಡದ ಪ್ರಶ್ನೆ ಅಲ್ಲ, ಒತ್ತಡಕ್ಕೆ ಮಣಿದು ಮಾಡುವ ಕೆಲಸ ಅಲ್ಲ, ಅಲ್ಲಿನ ಸಾಧಕ ಬಾಧಕ ವಸ್ತು ಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತದೆ. ನಾವು ಪ್ರಿಲೀಮಿನರಿಯಾಗಿ ತನಿಖೆ ಮಾಡಿ ಸ್ಟೇಷನ್ ಮಟ್ಟದಲ್ಲಿ ಅಂತ ಅವರಿಗೆ ಹೇಳಿದ್ದೆವು ಅವರು ಮಾಡುತ್ತಿದ್ದರು. ಇನ್ನೂ ಹೆಚ್ಚಿನ ರೀತಿಯ ತನಿಖೆ ಆಗಬೇಕು ಎಂಬುದು ಹೆಚ್ಚಿನ ರೀತಿಯ ಅಭಿಪ್ರಾಯಗಳು ಸರ್ಕಾರ ಇದರಲ್ಲಿ ಮುಚ್ಚಿ ಇಡುವಂತದ್ದು ಏನೂ ಇಲ್ಲ. ತೀರ್ಮಾನ ತಗೆದುಕೊಳ್ಳುವುದಕ್ಕೆ ಸ್ವಲ್ಪ ಯೋಚನೆ ಮಾಡಿ ನಾವು ತೀರ್ಮಾನ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನು ಬರುತ್ತದೆ ಅದನ್ನು ಕಾದು ನೋಡೋಣ
ಇದು ಸಣ್ಣ ವಿಚಾರ ಅಂತ ನಾವು ಪರಿಗಣಿಸಿಲ್ಲ. ಸ್ಟೇಷನ್ ಮಟ್ಟದಲ್ಲಿ ಅವರು ಕಂಪ್ಲೆಂಟ್ ಕೊಟ್ಟಾಗ ಎಫ್ ಐಆರ್ ಹಾಕಿ ಅವರು ತನಿಖೆ ಮಾಡ್ತಾರೆ, ಅದು ಹೆಚ್ಚು ಹೆಚ್ಚು ಬೆಳೆದಾಗ ತನಿಖೆ ತೀವ್ರತೆಯನ್ನು ಪಡೆಯುತ್ತೆ
ಹಾಗಾಗಿ ಉನ್ನತ ಮಟ್ಟದ ತನಿಖೆ ಮಾಡಬೇಕು ಅಂತ ಮಾಡಿದ್ದೇವೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ತಿಳಿಸಿದರು.












Click it and Unblock the Notifications