• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು

|

ಬೆಂಗಳೂರು, ಸೆಪ್ಟೆಂಬರ್ 16 : ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ.

   ಗೃಹ ಸಚಿವ Basavaraj Bommaiಗೆ ಕೋವಿಡ್ ಸೋಂಕು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಶಿಗ್ಗಾವಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಸಚಿವ ಬಸವರಾಜ ಬೊಮ್ಮಾಯಿ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸಹ ಪರೀಕ್ಷೆಗೆ ಒಳಪಟ್ಟಿದ್ದರು.

   ಜೆಡಿಎಸ್ ಶಾಸಕ ಡಿ. ಸಿ. ಗೌರಿಶಂಕರ್‌ಗೆ ಕೋವಿಡ್ ಸೋಂಕು

   ಸಚಿವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. "ನನಗೂ ಸಹ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದೇನೆ" ಎಂದು ಸಚಿವರು ಹೇಳಿದ್ದಾರೆ.

   ಕರ್ನಾಟಕದ ಆಹಾರ ಸಚಿವ ಕೆ. ಗೋಪಾಲಯ್ಯರಿಗೆ ಕೊವಿಡ್-19

   ಸಚಿವರು ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. "ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ" ಎಂದು ಮನವಿ ಮಾಡಿದ್ದಾರೆ.

   ಕಳೆದ ಒಂದು ವಾರದಿಂದ ಸಚಿವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ವಿಧಾನಸೌಧದಲ್ಲಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪಾಲ್ಗೊಂಡಿದ್ದರು.

   ಮನೆಯಲ್ಲೇ ಕೊಪ್ಪಳದಲ್ಲಿ ಕೋವಿಡ್ ಗೆದ್ದ 105ರ ವೃದ್ಧೆ

   ಮಂಗಳವಾರ ಕರ್ನಾಟಕದಲ್ಲಿ 7,576 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4,75,265. ಸಕ್ರಿಯ ಪ್ರಕರಣಗಳ ಸಂಖ್ಯೆ 98,536.

   English summary
   Home minister of Karnataka Basavaraj Bommai tested positive for COVID 19. As per the doctor advise minister in home isolation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X