ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್‌

ಶಿವಮೊಗ್ಗ, ಜುಲೈ 20: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ಬಿಎಸ್‌ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ ನೀಡಲಾಗುತ್ತದೆ.

ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಶುಕ್ರವಾರ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪಾಲ್ಗೊಳ್ಳಲಿದ್ದು, ಈ ಸಮಯದಲ್ಲಿ ಬಿಎಸ್‌ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್‌ ಅನ್ನು ಪ್ರಧಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಜಗದೀಶ್‌ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

Honorary doctorate to former Chief Minister BS yediyurappa

ಸುದೀರ್ಘ ರಾಜಕೀಯ ಅನುಭವವಿರುವ ರಾಜ್ಯ ಹಿರಿಯ ಮತ್ಸದ್ಧಿ ಬಿಎಸ್‌ ಯಡಿಯೂರಪ್ಪ ಅವರು ಈಗ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಯಡಿಯೂರಪ್ಪ ಅವರು ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇದ್ದು, ರಾಜ್ಯದಲ್ಲಿ ಬಿಜೆಪಿ ಪಡೆಗೆ ಬೆನ್ನೆಲುಭಾಗಿ ನಿಲ್ಲುವುದಾಗಿ ತಿಳಿಸಿದ್ದಾರೆ.

ಅವರು ಮುಖ್ಯಮಂತ್ರಿಯಾಗಿದ್ದಾಗಲೆ ಅವರು 2023ರ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದರು, ಅವರು ನಿವೃತ್ತಿ ಘೋಷಿಸಿದ ಬಳಿಕ ರಾಜ್ಯದಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಸಿಎಂ ಹುದ್ದೆಗೆ ಬಸವರಾಜ ಬೊಮ್ಮಾಯಿ ಅವರನ್ನು ಸೂಚಿಸಿದ್ದೇ ಯಡಿಯೂರಪ್ಪ ಅವರಾಗಿದ್ದಾರೆ ಎಂದು ವರದಿಗಳು ತಿಳಿಸಿದ್ದವು.

ಕರ್ನಾಟಕದಲ್ಲಿ ಲಿಂಗಾಯತ ನಾಯುಕರಾಗಿಯೂ ಗುರುತಿಸಿಕೊಂಡಿದ್ದ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದಾಗ ಹಲವಾರು ಲಿಂಗಾಯತ ಮಠಗಳ ಸ್ವಾಮೀಜಿಗಳು ಆಕ್ರೋಶಗೊಂಡಿದ್ದರು, ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್‌ ಮಂಡಿಸಿದ್ದ ಬಿಎಸ್ ಯಡಿಯೂರಪ್ಪ ಅವರು ಸದಾ ರೈತಪರ ಕಾಳಜಿ ವಹಿಸುವ ತಮ್ಮ ರಾಜಕೀಯ ಜೀವನ ಹಲವಾರು ರಾಜಕೀಯ ಮುಖಂಡರಿಗೆ ಪ್ರೇರಣಾದಾಯಕವಾಗಿದೆ.

Honorary doctorate to former Chief Minister BS yediyurappa

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್‌ಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಸಚಿವ ಸಿಎನ್‌ ಅಶ್ವತ್ಥ್‌ ನಾರಾಯಣ ಟ್ವೀಟ್‌ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+