ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ: ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ
ಬೆಂಗಳೂರು, ಅಕ್ಟೋಬರ್ 17: ಇಂದು ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರು ಸೇರಿದಂತೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಇಂದು ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆಸಲಾಯಿತು. ಬೆಂಗಳೂರು ವಿಶ್ವವಿದ್ಯಾಲಯ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಇಂದು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಡಾಕ್ಟರೇಟ್ ಪದವಿ ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. "ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ. ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ" ಎಂದರು.
ಇಸ್ರೋ ಅಧ್ಯಕ್ಷ ಸೋಮನಾಥ್ ಡಾಕ್ಟರೇಟ್ ಪ್ರದಾನ ಮಾಡಲು ತೀರ್ಮಾನಿಸಿತ್ತು. ಆದ್ರೆ, ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ಘಟಿಕೋತ್ಸವಕ್ಕೆ ಗೈರಾಗಿದ್ದಾರೆ. ಇನ್ನು ಗೈರಾಗಿರುವುದಕ್ಕೆ ಸೋಮನಾಥ್ ವಿಡಿಯೋ ಸಂದೇಶ ರವಾನಿಸಿದ್ದು, "ಗೌರವ ಡಾಕ್ಟರೇಟ್ ಪದವಿಗೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ಇದು ನನಗೆ ಮಾತ್ರವಲ್ಲ, ಇಸ್ರೋಗೆ ಸಂದಿರುವ ಗೌರವ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ಸಂತಸ ತಂದಿದೆ"
"ಬೆಂಗಳೂರು ವಿವಿ ನೀಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ನಾನು ಅತ್ಯಂತ ಸಂತೋಷದಿಂದ ಸ್ವೀಕರಿಸುತ್ತೇನೆ. ಇಂದಿನ ಹಲವು ಪ್ರಮುಖ ಕಾರ್ಯಕ್ರಮಗಳ ನಿಮಿತ್ತ ನಾನು ಅಲ್ಲಿಗೆ ಬಂದು ಪದವಿ ಸ್ವೀಕರಿಸಲು ಸಾಧ್ಯವಾಗಿಲ್ಲ. ಸಾಮಾನ್ಯ ಮನುಷ್ಯನಿಗೂ ಬಾಹ್ಯಾಕಾಶ ಕ್ಷೇತ್ರದ ಪ್ರತಿ ಕಾರ್ಯವೂ ಉಪಯೋವಾಗಲು ಇಸ್ರೋ ಶ್ರಮಿಸಲಿದೆ" ಎಂದು ಸಂದೇಶ ಕಳುಹಿಸಿದ್ದರು.

58ನೇ ಘಟಿಕೋತ್ಸವದಲ್ಲಿ 13,707 ವಿದ್ಯಾರ್ಥಿಗಳು ಹಾಗೂ 15,164 ವಿಧ್ಯಾರ್ಥಿನಿಯರು ಸೇರಿದಂತೆ ಒಟ್ಟು 28,871 ಅಭ್ಯರ್ಥಿಗಳಿಗೆ ಪದವಿ ನೀಡಲಾಯಿತು. ಈ ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಯಿತು.
ಜೊತೆಗೆ ಇದೇ ವೇಳೆ 204 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. 20 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್‌ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಿರುವ ಚಿನ್ನದ ಪದಕಗಳನ್ನು ಈ ಬಾರಿ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಸ್ನಾತಕೋತ್ತರ ವಿಭಾಗದಲ್ಲಿ ಆಕ್ಸ್‌ಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ವಿನುತಾ, ಜೆ.ಅತಿಹೆಚ್ಚು ಅಂದರೆ 8 ಚಿನ್ನದ ಪದಕ ಹಾಗೂ 3 ನಗದು ಬಹುಮಾನ, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಉದಯ ಕುಮಾರ ಮುರಗೋಡ ಅವರು 8 ಚಿನ್ನದ ಪದಕಗಳನ್ನು ಪಡೆದುಕೊಂಡರು.

ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಅಸ್ಮಾ ಬಾನು ಡಬ್ಲ್ಯೂ, ಗಣಿತಶಾಸ್ತ್ರ ವಿಭಾಗದ ದಿವ್ಯ ಟಿ.ಎಂ., ಪ್ರಾಣಿಶಾಸ್ತ್ರ ವಿಭಾಗದ ನಮ್ರತಾ ಎ. ಸಂಸ್ಕೃತ ವಿಭಾಗದ ಭವಿಷ್ಯ ತಲಾ ಆರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.
ಇನ್ನೂ, ಸ್ನಾತಕ ವಿಭಾಗದಲ್ಲಿ ಎಎಸ್‌ಸಿ ಪದವಿ ಕಾಲೇಜಿನ ದೀಕ್ಷಿತ ಆರ್. ನಾಯಕ್ ಹಾಗೂ ವಿಶ್ವಚೇತನ ಪದವಿ ಕಾಲೇಜಿನ ರವಿಕುಮಾರ ಎಸ್.ಎಂ., ಯುವಿಸಿಇಯಮೆಕ್ಯಾನಿಕಲ್ ಯೋಗೇಶ್ವರನ್ ತಲಾ 5 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದು ಜಿಂದಾಲ್ ಮಹಿಳಾ ಕಾಲೇಜಿನ ಚೈತ್ರ ಎಸ್, ಬೆಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ದಿವ್ಯ, ಟಿ.ಎಂ. ಹಾಗೂ ವಿಜಯನಗರಸಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ವೇತಾ ಉದಯ ಕುಮಾ ಮುರಗೋಡ ಅವರು ಬಾಬಾ ಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯವು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಹಾಗೂ ಶಿಕ್ಷಣದಲ್ಲಿ ಹೊಸ ವಿಧಾನಗಳನ್ನು ಜಾರಿಗೆ ತರುವಲ್ಲಿ ಸದಾ ಮುಂದಿದ್ದು. ಈ ಪರಂಪರೆಯ ಮುಂದುವರೆದ ಭಾಗವಾಗಿ ಈ ಬಾರಿ ಪದವಿ ಪ್ರಮಾಣ ಪತ್ರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವ 28,871 ವಿದ್ಯಾರ್ಥಿಗಳೂ ಘಟಿಕೋತ್ಸವದ ನಂತರ ತಮ್ಮ ಪ್ರಮಾಣ ಪತ್ರಗಳನ್ನು ಮಾಡಿಕೊಳ್ಳಬಹುದಾಗಿದೆ.
ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್









Click it and Unblock the Notifications