Get Updates
Get notified of breaking news, exclusive insights, and must-see stories!

ಬಿಜೆಪಿಯಿಂದ ಶರತ್ ಬಚ್ಚೇಗೌಡ ಉಚ್ಛಾಟನೆ: ಯಡಿಯೂರಪ್ಪ

ಬೆಂಗಳೂರು, ನವೆಂಬರ್ 19: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪುತ್ರ ಹೊಸಕೋಟೆ ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಯಡಿಯೂರಪ್ಪ ಅವರು ಈ ಬಗ್ಗೆ ಮೌಖಿಕ ಆದೇಶ ಹೊರಡಿಸಿದ್ದು, ಅಧಿಕೃತ ಆದೇಶ ಇನ್ನಷ್ಟೆ ಹೊರಬೀಳಬೇಕಿದೆ. ಶರತ್ ಬಚ್ಚೇಗೌಡ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಉಚ್ಛಾಟಿಸಲಾಗಿದೆ.

ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಅಧಿಕಾರ ಪಕ್ಷದ ರಾಜ್ಯಾಧ್ಯಕ್ಷ ನಳಿಕ ಕಟೀಲ್ ಅವರಿಗಿದ್ದು, ಅವರು ಈ ವರೆಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ, ಅಥವಾ ಅಧಿಕೃತ ಆದೇಶ ಹೊರಡಿಸಿಲ್ಲ.

Hosakote BJP Leader Sharath Bachegowda Expelled From BJP

ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಈ ಬಾರಿ ಪಕ್ಷೇತರರಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜು ವಿರುದ್ಧ ಕಣಕ್ಕೆ ಇಳಿದಿರುವ ಕಾರಣ, ಶರತ್ ವಿರುದ್ಧ ಯಡಿಯೂರಪ್ಪ ತೀವ್ರ ಅಸಮಾಧಾನಗೊಂಡಿದ್ದು, ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸಿದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎನ್.ಬಚ್ಚೇಗೌಡ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಯಡಿಯೂರಪ್ಪ ಅವರು ಶರತ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ.

ಶರತ್ ಬಚ್ಚೇಗೌಡ ಹಾಗೂ ಅವರ ತಂದೆ ಸಂಸದ ಬಿ.ಎನ್.ಬಚ್ಚೇಗೌಡ ಅವರ ಬಹುಕಾಲದ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜು ಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ. ಹಾಗಾಗಿ ಶರತ್ ಬಚ್ಚೇಗೌಡ ಅವರು ಪಕ್ಷೇತರರಾಗಿ ಹೊಸಕೋಟೆಯಿಂದ ಉಪಚುನಾವಣೆ ಕಣಕ್ಕೆ ಇಳಿದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+