ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಿಂದ ಶರತ್ ಬಚ್ಚೇಗೌಡ ಉಚ್ಛಾಟನೆ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ನವೆಂಬರ್ 19: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪುತ್ರ ಹೊಸಕೋಟೆ ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಯಡಿಯೂರಪ್ಪ ಅವರು ಈ ಬಗ್ಗೆ ಮೌಖಿಕ ಆದೇಶ ಹೊರಡಿಸಿದ್ದು, ಅಧಿಕೃತ ಆದೇಶ ಇನ್ನಷ್ಟೆ ಹೊರಬೀಳಬೇಕಿದೆ. ಶರತ್ ಬಚ್ಚೇಗೌಡ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಉಚ್ಛಾಟಿಸಲಾಗಿದೆ.

ಎಂಟಿಬಿ ಗೆದ್ದರೆ 24 ಗಂಟೆಯಲ್ಲೇ ಸಚಿವ: ಯಡಿಯೂರಪ್ಪಎಂಟಿಬಿ ಗೆದ್ದರೆ 24 ಗಂಟೆಯಲ್ಲೇ ಸಚಿವ: ಯಡಿಯೂರಪ್ಪ

ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಅಧಿಕಾರ ಪಕ್ಷದ ರಾಜ್ಯಾಧ್ಯಕ್ಷ ನಳಿಕ ಕಟೀಲ್ ಅವರಿಗಿದ್ದು, ಅವರು ಈ ವರೆಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ, ಅಥವಾ ಅಧಿಕೃತ ಆದೇಶ ಹೊರಡಿಸಿಲ್ಲ.

Hosakote BJP Leader Sharath Bachegowda Expelled From BJP

ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಈ ಬಾರಿ ಪಕ್ಷೇತರರಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜು ವಿರುದ್ಧ ಕಣಕ್ಕೆ ಇಳಿದಿರುವ ಕಾರಣ, ಶರತ್ ವಿರುದ್ಧ ಯಡಿಯೂರಪ್ಪ ತೀವ್ರ ಅಸಮಾಧಾನಗೊಂಡಿದ್ದು, ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಹೊಸಕೋಟೆ ಉಪ ಚುನಾವಣೆ; ಶರತ್ ಬಚ್ಚೇಗೌಡ ಸ್ಫೋಟಕ ಹೇಳಿಕೆಹೊಸಕೋಟೆ ಉಪ ಚುನಾವಣೆ; ಶರತ್ ಬಚ್ಚೇಗೌಡ ಸ್ಫೋಟಕ ಹೇಳಿಕೆ

ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸಿದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎನ್.ಬಚ್ಚೇಗೌಡ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಯಡಿಯೂರಪ್ಪ ಅವರು ಶರತ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ.

ಶರತ್ ಗೆ ಪಕ್ಷದಿಂದ ಗೇಟ್ ಪಾಸ್: ಆರ್. ಅಶೋಕ್ ಫೈನಲ್ ವಾರ್ನಿಂಗ್ಶರತ್ ಗೆ ಪಕ್ಷದಿಂದ ಗೇಟ್ ಪಾಸ್: ಆರ್. ಅಶೋಕ್ ಫೈನಲ್ ವಾರ್ನಿಂಗ್

ಶರತ್ ಬಚ್ಚೇಗೌಡ ಹಾಗೂ ಅವರ ತಂದೆ ಸಂಸದ ಬಿ.ಎನ್.ಬಚ್ಚೇಗೌಡ ಅವರ ಬಹುಕಾಲದ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜು ಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ. ಹಾಗಾಗಿ ಶರತ್ ಬಚ್ಚೇಗೌಡ ಅವರು ಪಕ್ಷೇತರರಾಗಿ ಹೊಸಕೋಟೆಯಿಂದ ಉಪಚುನಾವಣೆ ಕಣಕ್ಕೆ ಇಳಿದಿದ್ದಾರೆ.

English summary
Hoskote BJP leader Sharath Bache Gowda expelled from the party. Yediyurappa yesterday cleared about Sharath's expel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X