ರಾಜ್ಯದಲ್ಲಿ ಕೊರೊನಾ 3ನೇ ಅಲೆ ಎದುರಿಸಲು ಆಮ್ಲಜನಕ ಶೇಖರಣೆ
ಬೆಂಗಳೂರು, ಆಗಸ್ಟ್ 07: ಕೊರೊನಾ ಎರಡನೇ ಅಲೆ ಏಕಾ ಏಕಿ ಆರಂಭವಾಗಿದ್ದ ಸಂದರ್ಭದಲ್ಲಿ ವೈದ್ಯಕೀಯ ಆಮ್ಲಜನಕಕ್ಕಾಗಿ ಆಸ್ಪತ್ರೆ ಸೇರಿದಂತೆ ರೋಗಿಗಳ ಪೋಷಕರು ತುಂಬಾ ಪರದಾಡುವಂತಾಯಿತು.
ಆದರೆ ಈ ಬಾರಿ ಹಾಗಾಗದಂತೆ ನೋಡಿಕೊಳ್ಳಲು ಆಮ್ಲಜನಕ ಶೇಖರಣೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಕೊರೊನಾ ಮೂರನೇ ಅಲೆ ರಾಜ್ಯವನ್ನು ಪ್ರವೇಶಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಆಸ್ಪತ್ರೆಗಳು ಈ ನಿರ್ಧಾರಕ್ಕೆ ಬಂದಿದ್ದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿವೆ.
ಸಾಕಷ್ಟು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕವನ್ನು ನಿರ್ಮಿಸಲು ಜಾಗವೇ ಇಲ್ಲ. ನ್ಯಾಯಾಲಯದ ಆದೇಶದ ಬಳಿಕ 1200 ಎಂಟಿ ಎಲ್‌ಎಂಒವನ್ನು ರಾಜ್ಯಕ್ಕೆ ಹಂಚಲಾಯಿತು. ಆದರೆ ಪ್ರತಿದಿನ ಕಳುಹಿಸುವ ಮೊತ್ತದಲ್ಲಿ ಭಾರೀ ಕೊರತೆ ಇದೆ. ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂ ಅಸೋಸಿಯೇಷನ್ ಸದಸ್ಯರಾಗಿರುವ ಎರಡು ಮೂರು ಆಸ್ಪತ್ರೆಗಳನ್ನು ಒಳಗೊಂಡಂತೆ ಅವುಗಳಲ್ಲಿ ಹೆಚ್ಚಿನವು ಆಮ್ಲಜನಕ ಸ್ಥಾವರಗಳನ್ನು ನಿರ್ಮಿಸಿಲ್ಲ ಏಕೆಂದರೆ ಇದು ಅಪ್ರಾಯೋಗಿಕ ಎಂದು ಅವರು ನಂಬಿದ್ದಾರೆ.

ಫನಾದ ಕಾರ್ಯದರ್ಶಿ ಡಾ. ರಾಜಶೇಖರ್ ವೈಎಲ್ ಅವರು ಹೇಳುವ ಪ್ರಕಾರ 60 ರಿಂದ 70 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಬಳಿಕ ಅದರ ಹೊರೆ ರೋಗಿಗಳ ಮೇಲೆ ಬೀಳುತ್ತದೆ. ಹೀಗಾಗಿ ಆರೋಗ್ಯ ಸೇವೆ ಸುಲಭವಾಗಿ ರೋಗಿಗಳಿಗೆ ಕೈಗೆಟಕುವುದಿಲ್ಲ.
ಸಣ್ಣ ಆಸ್ಪತ್ರೆಗಳಲ್ಲಿ ಅಗತ್ಯವಾದ ಸ್ಥಳವಿಲ್ಲ, ಆಮ್ಲಜನಕ ಸ್ಥಾವರ ನಿರ್ಮಿಸಲು ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಕಾರ್ಯಗಳು ಸಾಧ್ಯವಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.
ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತೆಗಾಗಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆ. 6) ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಗೈಡ್‌ಲೈನ್ಸ್ ಪ್ರಕಟಿಸಿದ್ದಾರೆ.
ಇನ್ನು ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದಲೇ ಶನಿವಾರ ಮತ್ತು ಭಾನುವಾರ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು. ಕೇರಳ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ ನಲ್ಲಿ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.
ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 10ರ ಬದಲಿಗೆ 9 ಗಂಟೆಯಿಂದ ಮುಂಜಾನೆ 5ರವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಇರಲಿದ್ದು, ಇಂದಿನಿಂದಲೇ ಜಾರಿಯಾಗಲಿದೆ. ಇನ್ನು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ.
ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಬರುವ ಕಲಬುರಗಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಬೆಳಗಾವಿ, ಚಾಮರಾಜನಗರ ಹಾಗೂ ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಆ ವೇಳೆ, ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಖರೀದಿಗೆ ಅವಕಾಶ ನೀಡಲಾಗುತ್ತದೆ. ಇನ್ನು ಬೆಂಗಳೂರಿನಲ್ಲಿ ಯಾವುದೇ ವೀಕೆಂಡ್ ಕರ್ಫ್ಯೂ ಇರುವುದಿಲ್ಲ. ಆದರೆ, ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಇರಲಿದೆ.
ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್ ಪ್ರಕಟ
Recommended Video
* ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ.
* ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್‌ಗೆ ಮಾತ್ರ ಅವಕಾಶ
* ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುತ್ತದೆ.
* ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ.
* ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.
* ವೀಕೆಂಡ್‌ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತೆ.
* ರೈಲು, ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
* ಮದುವೆಯಲ್ಲಿ 100 ಜನರು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನಕ್ಕೆ ಭಾಗಿಯಾಗಲು ಅವಕಾಶ
* ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.












Click it and Unblock the Notifications