ಹಿಂದುಳಿದ ವರ್ಗಗಳಿಗೆ ಹಾಸ್ಟೆಲ್, ಉದ್ಯೋಗದಲ್ಲಿ ಮೀಸಲಾತಿ: ಜೆ.ಪಿ.ನಡ್ಡಾ ಅಭಿಮತ

ಬೆಂಗಳೂರು, ಜೂ. 18: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗಾಗಿ ಪ್ರತ್ಯೇಕ ಹಾಸ್ಟೆಲ್‍ಗಳು, ಪ್ರತ್ಯೇಕ ವಸತಿ ಶಾಲೆಗಳು, ಉದ್ಯೋಗ ನೀಡುವಂತಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.

ಹಿಂದುಳಿದ ವರ್ಗಗಳಿಗೆ ಅದ್ಯತೆ ನೀಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತದೆ. ಪ್ರತಿಯೊಂದು ಪ್ರದೇಶಗಳ ಒಬಿಸಿ ಬಗ್ಗೆ ಎಲ್ಲಾ ಪ್ರದೇಶಗಳಿಗೂ ತಿಳಿದಿರಬೇಕು. ಹೀಗಾಗಿ ದೇಶದ ಪ್ರತಿಯೊಂದು ಪ್ರದೇಶದಲ್ಲಿ ಹಿಂದುಳಿದ ವರ್ಗಗಳಿಗೆ ಆದ ಕೆಲಸಗಳ ಮಾಹಿತಿ ನೀಡುವಂತೆ ರಾಷ್ಟ್ರೀಯ ಒಬಿಸಿ ಮೋರ್ಚಾದ ಅಧ್ಯಕ್ಷ ಡಾ.ಲಕ್ಷ್ಮಣ್ ಅವರಿಗೆ ನಡ್ಡಾ ಅವರು ಸೂಚಿಸಿದರು.

ಯಲಹಂಕ ಬಳಿಯ ಸಿಂಗನಾಯಕನಹಳ್ಳಿ ಖಾಸಗಿ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

Hostel for Backward Classes, Reservation in Employment: JP Nadda

ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಹೇಳುವ ಬೊಮ್ಮಾಯಿ ಅವರೊಬ್ಬ ಜಾಗೃತ ನಾಯಕರೆಂಬುದನ್ನು ತೋರಿಸುತ್ತದೆ. ಈ ವರ್ಗಗಳ ಬಗ್ಗೆ ಅವರು ಆಲೋಚಿಸುತ್ತಿದ್ದಾರೆ ಎಂಬುದನ್ನು ತೋರಿಸುವುದೇ ಜಾಗೃತಾವಸ್ಥೆ. ರಾಜಕೀಯ ಕಾರ್ಯಕರ್ತರ ಜೀವನ ಪಕ್ಷವಾಗಬೇಕು. ತಮ್ಮತಮ್ಮ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಕಾರ್ಯಕರ್ತರು ಅರಿತಿರಬೇಕು. ಕಾರ್ಯಕರ್ತರು ಸದಾ ಸಕ್ರಿಯರಾಗಿರಬೇಕು. ನಮ್ಮ ಪರಿಚಯವೇನೆಂಬುದು ಕೇಳಿದರೆ ಅದು ಬಿಜೆಪಿಯಾಗಬೇಕು. ಎಲ್ಲರ ಜಾತಿ ಬಿಜೆಪಿಯಾಗಬೇಕು. ಇಂತಹ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಬಿಜೆಪಿ ಎನ್ನುವ ಜಾತಿಯೊಂದಿಗೆ ಎಲ್ಲರೂ ತಮ್ಮನ್ನು ಜೋಡಿಸಿಕೊಳ್ಳಬೇಕು. ಎಲ್ಲರ ಜಾತಿಯೇ ಬಿಜೆಪಿಯೇ ಆಗಬೇಕು. ನಾವು ವಿಶೇಷ ಚಿಕಿತ್ಸೆ ನೀಡುವುದಿಲ್ಲ. ನಮ್ಮ ಜಾತಿಯ ವ್ಯಕ್ತಿ ಬಿಜೆಪಿಯಲ್ಲಿದ್ದಾನೆ ಎಂಬ ಹೆಮ್ಮೆ ಜಾತಿ ಸಮುದಾಯದಲ್ಲಿ ಬರಬೇಕು. ಹಿಂದುಳಿದ ವರ್ಗಗಳ ಸಮುದಾಯ ಬಹಳ ದೊಡ್ಡ ಸಮುದಾಯವಾಗಿದೆ. ಈ ವರ್ಗದಿಂದ ಯಾರೊಬ್ಬರೂ ಬಿಜೆಪಿಯಿಂದ ದೂರ ಉಳಿಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಾಮಾಜಿಕ ನ್ಯಾಯವಷ್ಟೇ ಅಲ್ಲ, ಸಾಮಾಜಿಕ ಅವಕಾಶ ನೀಡುವಂತಾಗಬೇಕು. ಬೊಮ್ಮಾಯಿ ಅವರ ಸರ್ಕಾರ ಸಾಮಾಜಿಕ ನ್ಯಾಯವಷ್ಟೇ ಅಲ್ಲ, ಸಾಮಾಜಿಕ ಅವಕಾಶವನ್ನೂ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆ ಭಾರತದ ಬಡತನರೇಖೆಗಿಂತ ಕೆಳಗಿನ ಮಟ್ಟ 22% ಇಂದ 10% ಕ್ಕೆ ಕಡಿಮೆಯಾಗಿದೆ. ಕೋವಿಡ್ ಕಾಲದಲ್ಲಿಯೂ ಸರ್ಕಾರ ಮಾಡಿದ ಸಾಧನೆ ಸೇರಿದಂತೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಎಲ್ಲಾ ನಾಯಕರು ಇಡಬೇಕು ಎಂದರು.

Hostel for Backward Classes, Reservation in Employment: JP Nadda

ಸಮಾರೋಪ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ರಾಜ್ಯದ ಸಚಿವರು, ಆಹ್ವಾನಿತ ಪ್ರತಿನಿಧಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+