ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದೇಶಗಳಿಂದ ಬಂದವರಿಗೆ ಹೋಟೆಲ್‌ಗಳಲ್ಲಿ ಕ್ವಾರಂಟೈನ್

|
Google Oneindia Kannada News

ಬೆಂಗಳೂರು, ಜ.4: ವಿದೇಶಗಳಿಂದ ಬರುವಂತ ಪ್ರತಿಯೊಬ್ಬ ಪ್ರಯಾಣಿಕರಿಗೂ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತದೆ. ಆರ್‌ಟಿಪಿಸಿಆರ್ ಪರೀಕ್ಷೆ ಬಳಿಕ ಪಾಸಿಟಿವ್ ಬಂದರೆ ಅವರನ್ನು ಹೋಟೆಲ್‌ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ. ಪ್ರತಿ ಪ್ರಯಾಣಿಕರನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅವರು ಮಂಗಳವಾರ ನಡೆದ ಕೋವಿಡ್ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕ್ವಾರಂಟೈನ್‌ಗೆ ಒಳಪಡುವವರಿಗೆ 2 ಸ್ಟಾರ್ ಅಥವಾ 3 ಸ್ಟಾರ್ ಹೋಟೆಲ್‌ಗಳಲ್ಲಿ ಅವಕಾಶ ಮಾಡಲಾಗುವುದು. ನಗರದಲ್ಲಿ ಹೋಟೆಲ್‌ಗಳನ್ನು ಗುರುತಿಸುವಂತೆ ಈಗಾಗಲೇ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಹೋಟೆಲ್‌ಗಳ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

Hotel quarantine for foreign passengers: Dr Sudhakar

ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ರಾಜ್ಯಕ್ಕೆ ಬರುವಂತಹ ಎಲ್ಲ ಪ್ರಯಾಣಿಕರ ಮಾಹಿತಿಯೂ ಸರ್ಕಾರದ ಬಳಿ ಲಭ್ಯ ಇರಲಿದೆ ಎಂದು ಹೇಳಿದರು.

ಇನ್ನು ವಿಮಾನ ನಿಲ್ದಾಣದಲ್ಲಿ ಅನುಸರಿಸಬಹುದಾದ ಕೋವಿಡ್ ನಿಯಮಗಳ ಕುರಿತು ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಈಗಾಗಲೇ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದನ್ನೇ ಇಲ್ಲಿಯೂ ಅನುಸರಿಸಲಾಗುವುದು ಎಂದು ಹೇಳಿದರು.

Recommended Video

ತಜ್ಞರ ಜೊತೆ ಮಹತ್ವದ ಸಭೆ ಮಾಡಲಿರುವ ಮುಖ್ಯ ಮಂತ್ರಿ! | Oneindia Kannada

English summary
RTPCR test is mandatory for every travelers from hierisk countries. Who are tested positive, they are quarantined in a hotels.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X