ಲ್ಯಾಪ್ ಟಾಪ್ ಖರೀದಿ ಹಗರಣದ ತನಿಖೆಗೆ ಸದನ ಸಮಿತಿ ರಚನೆ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 22 : ಲ್ಯಾಪ್ ಟಾಪ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಲಾಗಿದೆ. ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಸದನ ಸಮಿತಿ ಅಧ್ಯಕ್ಷರಾಗಿದ್ದಾರೆ.

ಬಿಜೆಪಿಯ ರಘುನಾಥ ಮಲ್ಕಾಪುರೆ ಕಾಲೇಜು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದ ಲ್ಯಾಪ್ ಟಾಪ್ ಖರೀದಿಯಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿದ್ದರು. ಸಭಾಪತಿ ಡಿ.ಎಚ್. ಶಂಕರಮೂರ್ತಿ ತನಿಖೆಗೆ ಸದನ ಸಮಿತಿ ರಚನೆ ಮಾಡುವುದಾಗಿ ಹೇಳಿದ್ದರು.

ರಾಜ್ಯದ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಭಾಗ್ಯ

House panel to probe laptop purchase scam

2016-17ನೇ ಸಾಲಿಗಿಂತ ಪ್ರತಿ ಲ್ಯಾಪ್‌ ಟಾಪ್‌ಗೆ 10 ಸಾವಿರ ರೂ. ಹೆಚ್ಚಿನ ದರ ನೀಡಿ ಖರೀದಿ ಮಾಡಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿತ್ತು.

ಪರಿಶಿಷ್ಟ ಪಿಯು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ

ಈ ಬಗ್ಗೆ ತನಿಖೆ ನಡೆಸಲು ಕೆ.ಸಿ.ಕೊಂಡಯ್ಯ ನೇತೃತ್ವದಲ್ಲಿ ವಿಧಾನಪರಿಷತ್ ಸದನ ಸಮಿತಿ ರಚನೆ ಮಾಡಲಾಗಿದೆ. 15 ದಿನದಲ್ಲಿ ಸದನ ಸಮಿತಿ ತನ್ನ ವರದಿಯನ್ನು ನೀಡಲಿದೆ.

2016-17ನೇ ಸಾಲಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿನ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿತ್ತು. ಲ್ಯಾಪ್ ಟಾಪ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬುದು ಆರೋಪ.

ಸದನ ಸಮಿತಿ ಸದಸ್ಯರು : ಐವಾನ್ ಡಿಸೋಜಾ (ಕಾಂಗ್ರೆಸ್), ಶರಣಪ್ಪ ಮಟ್ಟೂರು (ಕಾಂಗ್ರೆಸ್), ಆರ್.ಪ್ರಸನ್ನ ಕುಮಾರ್ (ಕಾಂಗ್ರೆಸ್), ರಘುನಾಥ ಮಲ್ಕಾಪುರೆ (ಬಿಜೆಪಿ), ಅರುಣ ಶಹಾಪುರ (ಬಿಜೆಪಿ), ಕೆ.ಟಿ.ಶ್ರೀಕಂಠೇಗೌಡ (ಜೆಡಿಎಸ್).

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The state Legislative Council constituted a House Committee to look into the alleged irregularities in purchase of laptops. Department of Higher Education distributed laptops to scheduled caste and tribe students of Govt polytechnics in 2016-17.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ