ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದಿಂದ ಕಾಸು ಕೊಟ್ಟವರಿಗೆ ಮನೆ: ಗಂಭೀರ ಆರೋಪ!

ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಮುಜುಗರ ಎದುರಾಗಿದೆ. ಕರ್ನಾಟಕ ಸರ್ಕಾರದ ಶಾಸಕರೇ ಸರ್ಕಾರದ ವಿರುದ್ಧವಾಗಿ ನೀಡಿರುವ ಹೇಳಿಕೆಯು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರವು ವಸತಿ ವಿಚಾರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಕಾಸಿಗಾಗಿ ಮನೆ ಎನ್ನುವ ವಿಚಾರವು ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರದ ಬಗ್ಗೆ ಭಾರೀ ಚರ್ಚೆ ನಡೆದಿದೆ. ಇದರ ನಡುವೆ ಸರ್ಕಾರಕ್ಕೆ ಭಾರೀ ಮುಜುಗರವಾಗುವ ಘಟನೆಯೊಂದು ನಡೆದಿದೆ.

ಹಣ ಕೊಟ್ಟವರಿಗೆ ಮಾತ್ರ ವಸತಿ ನಿಗಮದಲ್ಲಿ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಮತ್ತು ಅಳಂದ ಶಾಸಕ ಬಿ.ಆರ್.ಪಾಟೀಲ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಬಿ.ಆರ್‌ಪಾಟೀಲ ಅವರದ್ದು ಎನ್ನಲಾಗಿರುವ ಆಡಿಯೊದಲ್ಲಿ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ.

Houses given to those who were given money by government by Congress MLAs Serious allegations

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಡುವವರಿಗೆ ಮಾತ್ರ ಮನೆಗಳನ್ನು ನೀಡಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫ್‌ರಾಜ್ ಖಾನ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ಇದು ಸರ್ಕಾರಕ್ಕೆ ಭಾರೀ ಮುಜುಗರವನ್ನು ತಂದೊಡಿದೆ.

ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ: ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್‌ ಅಹಮದ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಟ್ವೀಟ್ ಮಾಡಿದ್ದಾರೆ.

ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ಕರ್ನಾಟಕ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ

ಸಿದ್ದರಾಮಯ್ಯ ನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+