ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾ.ಪಂ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಹೇಗೆ ನಡೆಯಲಿದೆ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 30: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾ.ಪಂ ಚುನಾವಣಾ ಮತದಾನ ಮುಗಿದಿದ್ದು, ಡಿ.30 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಆಯಾ ತಾಲೂಕಿನಲ್ಲಿ ಬೆಳಗ್ಗೆ 8ಕ್ಕೆ ಮತ ಪೆಟ್ಟಿಗೆಗಳನ್ನು ಇಟ್ಟಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾಧಿಕಾರಿಗಳು ಭದ್ರತೆಯೊಂದಿಗೆ ಅಭ್ಯರ್ಥಿಗಳ ಎಜೆಂಟರ ಎದುರಿನಲ್ಲಿ ತೆರೆಯಲಾಗುವುದು.

ಡಿ.30 ರಂದು ಬೆಳಗ್ಗೆ 8ಕ್ಕೆ ಆರಂಭವಾಗುವ ಮತ ಎಣಿಕೆ ಪ್ರಕ್ರಿಯೆ ಮೂರು ಹಂತಗಳಲ್ಲಿ ಮುಗಿಯಲಿದೆ. ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನಂತರ ಎರಡು ಹಂತಗಳಲ್ಲಿ ಮತ ಎಣಿಕೆ ನಡೆಯಲಿದೆ. ಒಟ್ಟು 30 ಜಿಲ್ಲೆಗಳ 5,728 ಗ್ರಾಮ ಪಂಚಾಯಿತಿಗಳ 35,884 ಕ್ಷೇತ್ರಗಳಿಂದ ಒಟ್ಟು 92,121 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಸರಾಸರಿ ಶೇಕಡಾ 81.42 ರಷ್ಟು ಮತದಾನವಾಗಿದೆ.

ಕರ್ನಾಟಕ ಗ್ರಾ.ಪಂ ಚುನಾವಣಾ ಫಲಿತಾಂಶ 2020: ಡಿ.30 ರಂದು ಮತ ಎಣಿಕೆಕರ್ನಾಟಕ ಗ್ರಾ.ಪಂ ಚುನಾವಣಾ ಫಲಿತಾಂಶ 2020: ಡಿ.30 ರಂದು ಮತ ಎಣಿಕೆ

ರಾಜ್ಯದ ಎಲ್ಲ 30 ಜಿಲ್ಲೆಗಳ 226 ತಾಲೂಕುಗಳ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದ್ದು, ಒಟ್ಟು 5,728 ಪಂಚಾಯಿತಿಗಳ 91,339 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಎರಡು ಹಂತಗಳಲ್ಲಿ ನಡೆದ ಚುನಾವಣೆಗೆ ಒಟ್ಟು 3,11,887 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಅವರಲ್ಲಿ 2,97,281 ಅಭ್ಯರ್ಥಿಗಳ ನಾಮಪತ್ರ ಕಮಬದ್ಧವಾಗಿದ್ದವು. ಕೊನೆಗೆ 74,467 ಅಭ್ಯರ್ಥಿಗಳು ನಾಮಪತ್ರ ವಾಪಾಸ್ ಪಡೆದಿದ್ದರಿಂದ 8,074 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು.

How Is The Gram Panchayat Electoral Vote Count Process

ವಿವಿಧ ಕಾರಣಗಳಿಂದಾಗಿ ಒಟ್ಟು 648 ಸ್ಥಾನಗಳಿಗೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ. ಹೀಗಾಗಿ ಅಷ್ಟು ಸ್ಥಾನಗಳಿಗೆ ಚುನಾವಣೆ ನಡೆಯದೆ ಖಾಲಿ ಉಳಿದಿವೆ. ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದ್ದು ಒಟ್ಟು 2,22,814 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Recommended Video

ಬೆಂಗಳೂರು: 'ಗ್ರಾ.ಪಂ ಮಟ್ಟದಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದೆ'-ಆರ್.ಆಶೋಕ್ | Oneindia Kannada

English summary
The Gram Panchayat election voting has been completed in two phases in the state and the counting will be held on the Dec 30th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X