
ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ: ಸಿಎಂ
ನವದೆಹಲಿ, ನವೆಂಬರ್ 29: ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಇನ್ನೂ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು.
ರೌಡಿ ಶೀಟರ್ ಸೈಲೆಂಟ್ ಸುನೀಲ್ ಜತೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು: ಕಾಂಗ್ರೆಸ್ ಕಿಡಿ
ಅಲ್ಲದೇ ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ , ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ಸಂಸದರು ವೇದಿಕೆ ಹಂಚಿಕೆ ಕಾಂಗ್ರೆಸ್ ತರಾಟೆ.
ಬಿಜೆಪಿ ನಾಯಕರು ಸೈಲೆಂಟ್ ಸುನೀಲ್ನೊಂದಿಗೆ ವೇದಿಕೆ ಹಂಚಿಕೊಂಡ ಬಗ್ಗೆ ಕಾಂಗ್ರೆಸ್ ಕಿಡಿಕಾರಿದೆ. ''ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿಅಪರಾಧ ಪ್ರಕರಣ ಸಂಖ್ಯೆ ಏರದೇ ಇರುತ್ತದೆಯೇ? ಗೃಹ ಸಚಿವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ?,'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನೀಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್ . ಗೃಹ ಸಚಿವರೇ ಸೈಲೆಂಟ್ ಸುನೀಲನಿಗಾಗಿ ಪೊಲೀಸರು ಹುಡುಕುತ್ತಿರಲಿಲ್ಲವೇ. ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರಿರಲಿಲ್ಲವೇ. ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಪ್ರಶ್ನಿಸಿದೆ.

ಚಾಮರಾಜಪೇಟೆಯ ಬಿ.ಎಸ್. ವೆಂಕಟರಾಮ್ ಕಲಾಭವನದಲ್ಲಿಸೈಲೆಂಟ್ ಸುನೀಲ್ ಭಾನುವಾರ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಬಿಜೆಪಿ ಶಾಸಕ ಉದಯ್ ಗರುಡಾಚಾರ್, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ಹಾಗೂ ಇತರರು ಸೈಲೆಂಟ್ ಸುನೀಲ್ ಜತೆಗೆ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ವ್ಯಾಪಕ ಆಕ್ಷೇಪ ಕೇಳಿಬಂದಿದೆ.
ಬಿಜೆಪಿ ನಾಯಕರು ರೌಡಿ ಸೈಲೆಂಟ್ ಸುನೀಲ್ ಜತೆ ವೇದಿಕೆಯಲ್ಲಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಹಲವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಕೂಡ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಕುಟುಕಿದೆ.
ರೌಡಿಶೀಟರ್ ಸೈಲೆಂಟ್ ಸುನೀಲ್ ರಾಜಕೀಯ ಕ್ಷೇತ್ರ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾನೆ. ಚಾಮರಾಜಪೇಟೆ ಕ್ಷೇತ್ರದ ವಾರ್ಡ್ವೊಂದರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗುತ್ತಿದ್ದಾನೆ ಎಂಬ ಮಾತುಗಳ ಬೆನ್ನಲ್ಲೇ ಬಿಜೆಪಿ ನಾಯಕರು ಸುನೀಲ್ ಜತೆಗೆ ವೇದಿಕೆ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.