ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ, ಸಮೀಕ್ಷೆ ವಿವರ
ಬೆಂಗಳೂರು, ಅಕ್ಟೋಬರ್ 06: 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ನಡುವೆ ನೇರ ಹಣಾಹಣಿ ನಡೆಯಲಿದ್ದು, ಈ ಪ್ರಕಾರ ಕರ್ನಾಟಕದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಜೆಡಿಎಸ್ ಎಷ್ಟು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಮಾಡಿದೆ.
ಈ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 2 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ. ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಶೇ. 44 ಮತಗಳನ್ನು ಪಡೆದರೆ ಕಾಂಗ್ರೆಸ್ ಶೇ. 40 ಮತ್ತು ಜೆಡಿಎಸ್ ಶೇ.11ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಸ್ಥಾನಗಳ ಪ್ರಕಾರ ಬಿಜೆಪಿ 16, ಕಾಂಗ್ರೆಸ್ 10 ಮತ್ತು ಜೆಡಿಎಸ್ 2 ಗೆಲ್ಲುವ ಸಾಧ್ಯತೆಯಿದೆ ಎನ್ನಲಾಗಿದೆ. 2019 ರ ಫಲಿತಾಂಶಕ್ಕೆ ಹೋಲಿಸಿದರೆ ಇಂದು ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ 9 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಬಹುದು ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗಳಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯದೊಂದಿಗೆ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಈಗಾಗಲೇ ತನ್ನ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದೆ. ಈ ಪೈಕಿ ನಾಲ್ಕು ಈಗಾಗಲೇ ಜಾರಿಯಲ್ಲಿದ್ದು, ಯುವನಿಧಿ ಚಾಲನೆಗೊಳ್ಳಬೇಕಿದೆ.

ವಿಧಾನಸಭೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದರಿಂದ ತಮ್ಮ ಪಕ್ಷದಲ್ಲೇ ಹಲವಾರು ನಾಯಕರು ಹೈಕಮಾಂಡ್ ವಿರುದ್ಧ ಮಾತನಾಡಿದ್ದರು. ಇದರಿಂದ ಇನ್ನು ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡುವ ಬಗ್ಗೆ ಕೇಂದ್ರ ಬಿಜೆಪಿ ತಂಡ ವಿಪಕ್ಷ ನಾಯಕನ್ನು ನೇಮಕ ಮಾಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿಯು ಪಕ್ಷದ ಒಳಗೆ ಅನೇಕ ಗಾಯಗಳನ್ನು ಮಾಡಿಕೊಂಡಿದೆ. ಇದರಿಂದ ಹೊರ ಬಂದು ಲೋಕಸಭೆಗೆ ತಯಾರಿ ಮಾಡಲು ಅವರಿಗೆ ತ್ರಾಣ ಸಾಕಾಗುತ್ತಿಲ್ಲ. ಆದ್ದರಿಂದ ಪ್ರಧಾನಿ ಮೋದಿಯೇ ಈ ಚುನಾವಣೆಗೂ ಅವರಿಗೆ ಮತ ಗಳಿಸಿಕೊಂಡುವ ಏಕೈಕ ದೈವವಾಗಿದ್ದಾರೆ.
ವಿಧಾನಸಭಾ ಚುನಾವಣೆಗೆ ನಾವು 135ರಿಂದ 140 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಿಖರವಾಗಿ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಲೋಕಸಭೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಕೇಳಿದ್ದಕ್ಕೆ ಸಮಯ ಬಂದಾಗ ಹೇಳುತ್ತೇನೆ ಎಂದು ನಕ್ಕಿದ್ದರು. ಆದರೆ ಈ ಬಗ್ಗೆ ಹಲವಾರು ಕಾಂಗ್ರೆಸ್ ನಾಯಕರು ನಾವು ಈ ಬಾರಿ ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದರು, ಈ ಪೈಕಿ ನೋಡುವುದಾದರೆ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಜನರ ಒಲವು ಕಂಡು ಬರುತ್ತಿದೆ.
ಕರ್ನಾಟಕದಲ್ಲಿ ತಾನು ಕೊಟ್ಟ ಗ್ಯಾರಂಟಿಗಳಿಂದ ಸಿಕ್ಕ ಅಭೂತಪೂರ್ವ ಗೆಲುವಿನಿಂದ ಉತ್ಸುಕವಾಗಿರುವ ಕಾಂಗ್ರೆಸ್ ಇದೇ ಮಾದರಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಿಂದ ಈಗಾಗಲೇ ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಪಕ್ಷ ಗೆಲ್ಲುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ.
ಆದರೆ ದೇಶದಲ್ಲಿ ಮೋದಿ ಅಲೆ ಇನ್ನೂ ಇದ್ದು, ಲೋಕಸಭಾ ಚುನಾವಣೆಯಲ್ಲಿ ಅದನ್ನು ಮೀರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಕಂಡುಬರುತ್ತಿದೆ. ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ, ಶೇಕಡ 70 ರಷ್ಟು ಹಿಂದುಳಿದ ಜಾತಿಗಳ ಮತದಾರರು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಲು ಬಯಸುತ್ತಾರೆ ಮತ್ತು ರಾಹುಲ್ ಗಾಂಧಿ ಅವರಿಗೆ 12 ಪ್ರತಿಶತದಷ್ಟು ದೂರದ ಎರಡನೇ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದೆ.
ಅವರಲ್ಲಿ ಶೇಕಡಾ 6 ರಷ್ಟು ಜನರು ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿಯಾಗಿ ನೋಡಲು ಬಯಸುತ್ತಾರೆ ಮತ್ತು ಕೇವಲ 4 ಪ್ರತಿಶತದಷ್ಟು ಜನರು ಮಮತಾ ಬ್ಯಾನರ್ಜಿ ಅವರನ್ನು ಆಯ್ಕೆ ಮಾಡಬಹುದು ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಸುಮಾರು 52 ಪ್ರತಿಶತ ಮುಸ್ಲಿಂ ಮತದಾರರು ರಾಹುಲ್ ಗಾಂಧಿಯನ್ನು ದೇಶದ ಮುಂದಿನ ಪ್ರಧಾನಿಯಾಗ ಬಯಸಿದ್ದಾರೆ.
ಅವರಲ್ಲಿ 14 ಪ್ರತಿಶತದಷ್ಟು ಜನರು ಅರವಿಂದ್ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಶೇ. 8 ಪ್ರತಿಶತದಷ್ಟು ಜನರು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಆಯ್ಕೆ ಮಾಡಬಹುದು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಶೇಕಡಾ 3 ಜನರು ನರೇಂದ್ರ ಮೋದಿ ಅವರನ್ನು ತಮ್ಮ ಪ್ರಧಾನಿಯಾಗಿ ನೋಡಲು ಬಯಸುತ್ತಾರೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹಣೆ ತಿಳಿಸಿದೆ.












Click it and Unblock the Notifications