ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿಗೆ ಕರ್ನಾಟಕದಿಂದ ಹರಿಸಬೇಕಾದ ನೀರಿನ ಪ್ರಮಾಣವೆಷ್ಟು?

|
Google Oneindia Kannada News

ಬೆಂಗಳೂರು, ಜೂನ್ 25: ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕಕ್ಕೆ ಸದ್ಯಕ್ಕೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಆದರೆ, ಜೂನ್ ಹಾಗೂ ಜುಲೈ ತಿಂಗಳುಗಳಲ್ಲಿ ತಮಿಳುನಾಡಿಗೆ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಯಾವುದೆ ಬದಲಾವಣೆ ಮಾಡಿಲ್ಲ.

ಕೇಂದ್ರ ಜಲ ಆಯೋಗದ ಕಚೇರಿಯಲ್ಲಿ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಅವರ ನೇತೃತ್ವದ ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ತಮಿಳುನಾಡಿಗೆ ಕರ್ನಾಟಕದಿಂದ ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕು ಎಂಬುದನ್ನು ಚರ್ಚಿಸಲಾಯಿತು.

ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು, ಕರ್ನಾಟಕಕ್ಕೆ ನೆಮ್ಮದಿ ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು, ಕರ್ನಾಟಕಕ್ಕೆ ನೆಮ್ಮದಿ

ಕಾವೇರಿ ನದಿ ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರತಿ ತಿಂಗಳು ಇಂತಿಷ್ಟು ನೀರು ಹರಿಸಬೇಕು ಎಂದು ನಿಗದಿಯಾಗಿದೆ. ಅದರಂತೆ ಜೂನ್ ತಿಂಗಳಿನಲ್ಲಿ 9.19 ಟಿಎಂಸಿ ಹಾಗೂ ಜುಲೈ ತಿಂಗಳಿನಲ್ಲಿ 31.24 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಕರ್ನಾಟಕ ಹರಿಸಬೇಕಾಗಿದೆ.

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸಭೆಯಲ್ಲಿ ತಮಿಳುನಾಡಿನಿಂದ ಬಂದ ಬೇಡಿಕೆ ಮಾತ್ರ ಇದಾಗಿದೆ. ಕೇರಳ, ಪುದುಚೇರಿ ರಾಜ್ಯಗಳಿಂದ ಯಾವುದೇ ಬೇಡಿಕೆ ಬಂದಿಲ್ಲ. ನೀರು ಹಂಚಿಕೆ ಸಂಬಂಧ ಪುದುಚೇರಿ ಹಾಗೂ ತಮಿಳುನಾಡಿನ ನಡುವೆ ಆಗಿರುವ ಒಪ್ಪಂದ ಮುಂದುವರೆಯಲಿದೆ ಎಂದು ಹುಸೇನ್ ಹೇಳಿದ್ದಾರೆ.

ನೀರಿನ ಪ್ರಮಾಣದ ಅಂಕಿ ಅಂಶ

ನೀರಿನ ಪ್ರಮಾಣದ ಅಂಕಿ ಅಂಶ

ಜೂನ್ 1 ರಿಂದ ಜೂನ್ 20ರ ಅವಧಿಯಲ್ಲಿ ಕೃಷ್ಣರಾಜಸಾಗರದಲ್ಲಿನ ನೀರಿನ ಪ್ರಮಾಣದ ಅಂಕಿ ಅಂಶ ಗಮನಿಸಲಾಗಿದೆ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ಹಂತ ತಲುಪಿದ್ದು, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ ಎಂಬುದನ್ನು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ.ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು 14 ಟಿಎಂಸಿ ನೀರಿದ್ದು, ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇದೆ.

ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ

ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ

ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರುಮಳೆ ಪ್ರವೇಶ ವಿಳಂಬವಾಗಿದೆ.ಲಭ್ಯ ನೀರಿನ ಪ್ರಮಾಣ, ಮಳೆ ಮುನ್ಸೂಚನೆ, ಬರ ಪರಿಸ್ಥಿತಿ, ಜಲ ನಿರ್ವಹಣೆ, ನೀರು ಹಂಚಿಕೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗಿದೆ. ತಮಿಳುನಾಡಿನಲ್ಲಿ ಮುಂಗಾರು ಪೂರ್ವ ಮಳೆ ಕೂಡಾ ಕೈಕೊಟ್ಟಿದ್ದರಿಂದ ರಾಜ್ಯದ ಪ್ರಮುಖ ನೀರಿನ ಮೂಲಗಳಾದ ಪೂಂಡಿ, ರೆಡ್ ಹಿಲ್, ಶೋಲಾವರಂ ಮತ್ತು ಚೆಂಬರಂಬಕ್ಕಂನ ಕೆರೆಗಳು ಬತ್ತಿ ಹೋಗಿವೆ. ಕೆಲ ಕೆರೆಗಳಲ್ಲಿ ಮಾತ್ರ ಅಲ್ಪಪ್ರಮಾಣದ ನೀರಿದ್ದು, ನೀರಿನ ಪೂರೈಕೆ ಮಾಡಬೇಕಾಗಿದೆ.

ಮಳೆ ಕೊರತೆ, ಮುಂಗಾರು ವಿಳಂಬ, ಜಲಾಶಯಗಳು ಖಾಲಿ ಖಾಲಿ ಮಳೆ ಕೊರತೆ, ಮುಂಗಾರು ವಿಳಂಬ, ಜಲಾಶಯಗಳು ಖಾಲಿ ಖಾಲಿ

ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ

ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ

ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ. ಒಟ್ಟಾರೆ, ಕರ್ನಾಟಕದ ಕಾವೇರಿ ಜಲನಯನ ಪ್ರದೇಶದಲ್ಲಿ 3 ರಿಂದ 4 ಟಿಎಂಸಿ ಇರಬಹುದು, ಇದರಲ್ಲಿ ಮುಂದಿನ ಮಳೆಗಾಲದವರೆಗೂ ಕುಡಿಯುವ ನೀರಿನ ಪೂರೈಕೆಗೆ ಬಳಸಬೇಕಾಗುತ್ತದೆ,ತಕ್ಷಣವೇ ನೀರು ಬಿಡುವ ಒತ್ತಡ ಹೇರಿಲ್ಲದ ಕಾರಣ, ಸದ್ಯಕ್ಕೆ ರಾಜ್ಯಕ್ಕೆ ಆತಂಕವಿಲ್ಲ, ಆದರೆ, ಸುಪ್ರೀಂಕೋರ್ಟಿನ ಅಂತಿಮ ತೀರ್ಪು ಮುಂದಿನ 14 ವರ್ಷಗಳ ತನಕ ಪಾಲಿಸಬೇಕಿದೆ ಎಂದು ಕರ್ನಾಟಕದ ಜಲ ಸಂಪನ್ಮೂಲ ಕಾರ್ಯದರ್ಶಿ ರಾಕೇಶ್ ಸಿಂಗ್ ವಾದಿಸಿದ್ದಾರೆ.

ಕಾವೇರಿ ಅಂತಿಮ ತೀರ್ಪು : ತಮಿಳುನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿ ಕಾವೇರಿ ಅಂತಿಮ ತೀರ್ಪು : ತಮಿಳುನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿ

ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು

ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು

ಕರ್ನಾಟಕದಿಂದ ತಮಿಳುನಾಡಿಗೆ ವಾರ್ಷಿಕವಾಗಿ 177 ಟಿಎಂಸಿ ಅಡಿ ಕಾವೇರಿ ಬಿಡಬೇಕು, ಆದರೆ, ಅಗತ್ಯಕ್ಕೆ ತಕ್ಕಂತೆ ಕರ್ನಾಟಕ ರಾಜ್ಯವು ತನ್ನ ನೀರಾವರಿ ಸಂಪತ್ತನ್ನು ವಿಸ್ತರಿಸಿಕೊಳ್ಳಬಹುದು ಎನ್ನಲಾಗಿದೆ. ಹೀಗಾಗಿ ಅಣೆಕಟ್ಟು ನಿರ್ಮಾಣದ ಕರ್ನಾಟಕದ ಪ್ರಸ್ತಾವನೆಗೆ ಬಲ ಸಿಕ್ಕಿದೆ.ಆದರೆ, ಪ್ರಸ್ತಾವಿತ ಮೇಕೇದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ, ಪ್ರಧಾನಿ ಮೋದಿ ಅವರಿಗೆ ತಮಿಳುನಾಡು ಸರ್ಕಾರ ಪತ್ರ ಬರೆದಿದೆ. ಒಟ್ಟಾರೆ, ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪಿನಂತೆ ವಾರ್ಷಿಕ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಲಭ್ಯವಾಗಿದೆ. ಇದರಲ್ಲ್ 4.75 ಟಿಎಂಸಿ ನೀರು ಬೆಂಗಳೂರಿನ ಕುಡಿಯುವ ನೀರಿಗೆ ಬಳಕೆ ಮಾಡಬಹುದು.

ಟೈಮ್ ಲೈನ್ : ಕಾವೇರಿ ವಿವಾದ ತೀರ್ಪು 15 ವರ್ಷಗಳ ತನಕ ಬದ್ಧ ಟೈಮ್ ಲೈನ್ : ಕಾವೇರಿ ವಿವಾದ ತೀರ್ಪು 15 ವರ್ಷಗಳ ತನಕ ಬದ್ಧ

English summary
The Cauvery Water Management Authority on Tuesday (June 26) directed Karnataka to release water from Cauvery basin reservoirs to Mettur in Tamil Nadu only when it rains heavily and inflow of water is enough. What amount of water is to be released to TN in next two months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X