ಕೊರೊನಾ ವಿಶೇಷ ಪ್ಯಾಕೇಜ್ ಪಡೆಯಲು ಖಾಸಗಿ ಶಾಲಾ ಶಿಕ್ಷಕರು ಏನು ಮಾಡಬೇಕು?
ಬೆಂಗಳೂರು, ಜು. 03: ಕೊರೊನಾ ಸೋಂಕಿನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸತತ ಹೋರಾಟದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೆ ಮತ್ತು ಬೋಧಕೇತರ ಸಿಬ್ಬಂದಿಗೆ ತಲಾ ಐದು ಸಾವಿರ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಘೋಷಣೆ ಮಾಡಿ ತಿಂಗಳಾದರೂ ಯಾವುದೇ ಅಧಿಕೃತ ಆದೇಶ ಬಂದಿರಲಿಲ್ಲ. ಇದೀಗ ಖಾಸಗಿ ಶಾಲಾ ಶಿಕ್ಷಕರಿಗೆ ಮತ್ತು ಬೋಧಕೇತರ ಸಿಬ್ಬಂದಿಗೆ ತಲಾ ಐದು ಸಾವಿರ ರೂ. ಪರಿಹಾರ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜು. 2 ರಂದು ಆದೇಶದ ಪ್ರತಿ ಹೊರ ಬಿದ್ದಿದ್ದು, ಖಾಸಗಿ ಶಾಲಾ ಶಿಕ್ಷಕರು ಸರ್ಕಾರದ ವಿಶೇಷ ಪ್ಯಾಕೇಜ್ ಹಣ ಪಡೆಯುವ ಬಗ್ಗೆ ಇಲ್ಲಿ ಸಮಗ್ರ ವಿವರ ನೀಡಲಾಗಿದೆ.
ಕಳೆದ ಒಂದೂ ವರೆ ವರ್ಷದಿಂಧ ಶಾಲೆಗಳು ತೆರೆದಿಲ್ಲ. ಖಾಸಗಿ ಶಾಲೆಗಳು ವೇತನ ನೀಡದೇ ಶಾಲಾ ಶಿಕ್ಷಕರಿಗೆ ಗೇಟ್ ಪಾಸ್ ನೀಡಿವೆ. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಖಾಸಗಿ ಶಾಲಾ ಶಿಕ್ಷಕರು ಶಿಕ್ಷಕ ವೃತ್ತಿಯನ್ನೇ ತೊರೆದು ಬೀದಿ ಬದಿ ವ್ಯಾಪಾರ ಸೇರಿದಂತೆ ನಾನಾ ಕೆಲಸಗಳಿಗೆ ತೆರಳಿದ್ದರು. ಇದು ಮಾಧ್ಯಮದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಖಾಸಗಿ ಶಾಲಾ ಶಿಕ್ಷಕರಿಗೂ ಕೋವಿಡ್ ವಿಶೇಷ ಪ್ಯಾಕೇಜ್ ಕೊಡಬೇಕೆಂಬ ಕೂಗು ಕೇಳಿ ಬಂತು. ಕ್ಯಾಮ್ಸ್ ಸೇರಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಶಿಕ್ಷಕರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದವು. ಮೊದಲ ಹಂತದಲ್ಲಿ ಖಾಸಗಿ ಶಾಲಾ ಶಿಕ್ಷಕರ ಮನವಿಗೆ ಸ್ಪಂದನೆ ಸಿಕ್ಕಿರಲಿಲ್ಲ. ಆ ಬಳಿಕ ಖಾಸಗಿ ಶಾಲಾ ಶಿಕ್ಷಕರಿಗೂ ಪರಿಹಾರ ನೀಡುವಂತೆ ಶಿಕ್ಷಣ ಮಂತ್ರಿ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೆ ತಲಾ ಐದು ಸಾವಿರ ರೂ. ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು. ಇದೀಗ ಜು. 2 ರಂದು ಸರ್ಕಾರದ ಅಧಿಕೃತ ಆದೇಶ ಹೊರಗೆ ಬಿದ್ದಿದೆ. ಖಾಸಗಿ ಶಾಲಾ ಶಿಕ್ಷಕರು ಕೆಲಸ ಮಾಡುವ ಶಾಲೆಯಿಂದಲೇ ಈ ಪರಿಹಾರ ಹಣ ಪಡೆಯಬಹುದು.
ಖಾಸಗಿ ಶಾಲಾ ಶಿಕ್ಷಕರಿಗೆ ಕೊರೊನಾ ವಿಶೇಷ ಪ್ಯಾಕೇಜ್ #Covid19 #teachers pic.twitter.com/iLqKwyAFWB
— oneindiakannada (@OneindiaKannada) July 3, 2021

10 ಸಾವಿರ ಲಕ್ಷ ಪರಿಹಾರ ಮೊತ್ತ
ರಾಜ್ಯದ ಸಾವಿರಾರು ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ 10,347 ಲಕ್ಷ ರೂ.ಗಳನ್ನು ಖಾಸಗಿ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಪರಿಹಾರ ಹಣ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಣವನ್ನು ಸರ್ಕಾರದ ಶಿಕ್ಷಣ ಹಕ್ಕು ಕಾಯ್ದೆ ( ಆರ್‌ಟಿಇ) ಮೊತ್ತದಿಂದ ಈ ಅನುದಾನವನ್ನು ಭರಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿದೆ. ಇಷ್ಟು ಅನುದಾನವನ್ನು ವಿಶೇಷ ಕೋವಿಡ್ ಪ್ಯಾಕೇಜ್ ಅನುದಾನವನ್ನಾಗಿ ಬಿಡುಗಡೆ ಮಾಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ( ಯೋಜನೆ) ಅವರ ಆದೇಶ ಹೊರಡಿಸಿದ್ದಾರೆ.

ಬೋಧಕೇತರ ಸಿಬ್ಬಂದಿಗೆ ಪರಿಹಾರ
ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕಿಂತಲೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಸರ್ಕಾರ ಪರಿಗಣಿಸಿರುವುದು 1.72,945 ಶಿಕ್ಷಕರಿಗೆ ಹಾಗೂ 34 ಸಾವಿರ ಬೋಧಕೇತರ ಸಿಬ್ಬಂದಿಗೆ ತಲಾ ಐದು ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದಕ್ಕಿಂತಲೂ ಹೆಚ್ಚು ಶಿಕ್ಷಕರು ಇದ್ದರೂ ಅವರಿಗೆ ಸಿಗುವುದು ಅನುಮಾನ. ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಶಿಕ್ಷಕರ ವಿವರಗಳನ್ನು ಯು ಡೈಸ್ ನಲ್ಲಿ ನೋಂದಣಿ ಮಾಡಿರುವ ಶಿಕ್ಷಕರನ್ನಷ್ಟೇ ಸರ್ಕಾರ ಪರಿಗಣಿಸಿದೆ. ನೋಂದಾವಣೆ ಮಾಡಿರುವ ಶಿಕ್ಷಕರನ್ನು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಮಾತ್ರ ಕೋವಿಡ್ ವಿಶೇಷ ಪ್ಯಾಕೇಜ್ ಪರಿಹಾರಕ್ಕೆ ಸರ್ಕಾರ ಪರಿಗಣಿಸಿದೆ.

ನೊಂದಾಯಿತ ಶಿಕ್ಷಕರಿಗೆ ನೇರ ವರ್ಗಾವಣೆ
ಖಾಸಗಿ ಶಾಲಾ ಸಂಸ್ಥೆಗಳು ತಮ್ಮ ಶಾಲೆಯಲ್ಲಿ ಕೆಲಸ ಮಾಡುವ ಶಿಕ್ಷಕರು ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರ, ವಿದ್ಯಾರ್ಹತೆ, ಅನುಭವ, ಜನ್ಮ ದಿನಾಂಕ ಮತ್ತಿತರ ವಿವರಗಳನ್ನು ಸಾಟ್ಸ್ ಮತ್ತು ಯು ಡೈಸ್ ಪೋರ್ಟ್ ಲ್ ನಲ್ಲಿ ನೋಂದಣಿ ಮಾಡಿರಬೇಕು. ಒಂದು ವೇಳೆ ನೋಂದಣಿ ಮಾಡದಿದ್ದಲ್ಲಿ, ಹಳೆಯ ಶಿಕ್ಷಕರ ಹೆಸರನ್ನು ತೆಗೆದು, ಹಾಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ವಿವರಗಳನ್ನು ನಮೂದಿಸಬೇಕು. ಹೀಗಾಗಿ ಕೆಲಸ ಮಾಡುತ್ತಿರುವ ಶಿಕ್ಷಕರು ತಮ್ಮ ಶಾಲೆಯ ಆಡಳಿತ ಮಂಡಳಿಗೆ ವಿವರಗಳನ್ನು ನೀಡಿ ಕಾಲಮಿತಿಯಲ್ಲಿ ನೊಂದಣಿ ಮಾಡಿಸಬೇಕು. ಸರ್ಕಾರ ಘೋಷಣೆ ಮಾಡಿರುವ ಕೊರೊನಾ ವಿಶೇಷ ಪ್ಯಾಕೇಜ್ ಹಣ ಬ್ಯಾಂಕ್ ಖಾತೆಗೆ ರವಾನೆಯಾಗಲಿದೆ.
Recommended Video

ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ
ಖಾಸಗಿ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೊರೊನಾ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಬಿಡುಗಡೆ ಮಾಡುವ ಹಣವನ್ನು ಅದೇ ಉದ್ದೇಶಕ್ಕಾಗಿ ಬಳಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸಿರುವ ಶಿಕ್ಷಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವಿಶೇಷ ಪ್ಯಾಕೇಜ್ ಹಣ ಪಾವತಿಯಾಗುವಂತೆ ಸೂಚಿಸಲಾಗಿದೆ. ಕೆಲವು ಶಿಕ್ಷಕರು ಒಂದು ಶಾಲೆ ಬಿಟ್ಟು ಬೇರೊಂದು ಶಾಲೆಗೆ ಹೋಗಿ ಎರಡು ಕಡೆ ನೋಂದಣಿ ಮಾಡಿದ್ದರೆ ಅಂತಹವರನ್ನು ಒಂದು ಶಾಲೆಯ ವಿವರ ಪರಿಗಣಿಸಿ ವಿಶೇಷ ಪ್ಯಾಕೇಜ್ ಪಾವತಿ ಮಾಡಬೇಕು. ಈ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಸದಂತೆ ನೋಡಿಕೊಳ್ಳಬೇಕು ಎಂದು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
-
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
PUC ಅಂಕಪಟ್ಟಿ ಇನ್ನು ಡಿಜಿಟಲ್: ಮುಂದಿನ ವರ್ಷದಿಂದ ಸಿಗಲ್ಲ ಭೌತಿಕ ಅಂಕಪಟ್ಟಿ , ಡಿಜಿಲಾಕರ್ನಲ್ಲಿ ಮಾತ್ರ ಲಭ್ಯ -
ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
PUC ಕಾಮರ್ಸ್ ಪಾಸ್ ಆದ ವಿದ್ಯಾರ್ಥಿಗಳಿಗೆ ಮುಂದೇನು? ಕೈತುಂಬಾ ಸಂಬಳ ತರುವ ಬೆಸ್ಟ್ ಕೋರ್ಸ್ಗಳ ವಿವರ ಇಲ್ಲಿದೆ -
PUC ಕಲಾ ವಿಭಾಗದಲ್ಲಿ ಪಾಸ್ ಆದವರಿಗೆ ಮುಂದೇನು? ಇಲ್ಲಿವೆ ಭವಿಷ್ಯ ರೂಪಿಸುವ ಬೆಸ್ಟ್ ಕೋರ್ಸ್ಗಳು -
PUC ವಿಜ್ಞಾನ ವಿಭಾಗದಲ್ಲಿ ಶೇ.91.69ರಷ್ಟು ದಾಖಲೆ ಫಲಿತಾಂಶ: ಇವರೇ 599 ಅಂಕ ಗಳಿಸಿದ ಟಾಪರ್ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
ದ್ವಿತೀಯ PUC ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
PUC Result 2026: ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟ












Click it and Unblock the Notifications