• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ: ರಿಸಲ್ಟ್‌ ನೋಡುವುದು ಹೇಗೆ?

|
Google Oneindia Kannada News

ಬೆಂಗಳೂರು, ಜುಲೈ 19: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರಂದು ಪ್ರಕಟಗೊಳ್ಳಲಿದೆ. ಎಸ್​ಎಸ್​ಎಲ್​ಸಿ ಮೊದಲ ಪರೀಕ್ಷೆಯ ಮರುದಿನವೇ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಜು.19 ರಂದು 10ನೇ ತರಗತಿ ಮೊದಲ ಪರೀಕ್ಷೆ ನಡೆಯಲಿದೆ. ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ

ಈ ಬಾರಿ ಯಾವುದೇ ರಾಂಕ್​ ಇರುವುದಿಲ್ಲ. ಸಿಬಿಎಸ್​ಇ ಮಾದರಿಯಲ್ಲಿ ಎಸ್​ಎಸ್​ಎಲ್​ಸಿ, ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಗ್ರೇಡ್​ ಬದಲು ಅಂಕಗಳ ಆಧಾರದಲ್ಲಿ ದ್ವಿತೀಯ ಪಿಯು ಫಲಿತಾಂಶವನ್ನು ಕೊಡಲಾಗುತ್ತದೆ.

 ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರು ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರು

ಯಾವುದೇ ಗೊಂದಲಗಳಾಗದಂತೆ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಪರೀಕ್ಷೆ‌ ಇಲ್ಲದೇ ಫಲಿತಾಂಶ ಪ್ರಕಟಕ್ಕೆ‌ ಪಿಯು ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಆದರೆ ಇನ್ನೂ ಸಹ ಫಲಿತಾಂಶ ಹೇಗೆ ನೀಡಬೇಕು ಎಂಬ ಗೊಂದಲ ಬಗೆಹರಿದಿಲ್ಲ. ದೊಡ್ಡ ಸವಾಲೊಂದು ಪಿಯು ಬೋರ್ಡ್​ ಮುಂದಿದೆ.

ಪ್ರತೀ ವರುಷ ಪರೀಕ್ಷೆಗೆ ಕೊಟ್ಟ ರಿಜಿಸ್ಟರ್​ ನಂಬರ್​ ಮೇಲೆ ಫಲಿತಾಂಶ ಸಿಗುತ್ತಿತ್ತು. ಅಂದರೆ ಪಿಯು ಬೋರ್ಡ್​​ ವೆಬ್​ಸೈಟ್​ಗೆ ಹೋಗಿ ವಿದ್ಯಾರ್ಥಿಯ ರಿಜಿಸ್ಟರ್ ನಂಬರ್ ಹಾಕಿದರೆ ಆಗ ಫಲಿತಾಂಶ ಸಿಗುತ್ತಿತ್ತು. ಆದರೆ ಈ ಬಾರಿ ಪರೀಕ್ಷೆಯೇ ನಡೆಸಿಲ್ಲವಾದ್ದರಿಂದ ರಿಜಿಸ್ಟರ್​ ನಂಬರ್​ ಸಿಕ್ಕಿಲ್ಲ.

-ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್​ ಸ್ಪಷ್ಟನೆ ನೀಡಿದೆ. ಪ್ರತಿ ವರ್ಷ ಪರೀಕ್ಷೆ‌ಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ‌ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್‌ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

-ಫಲಿತಾಂಶದ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್‌ ನಂಬರ್ ಜನರೇಟ್ ಮಾಡಲು ಪಿಯು ಬೋರ್ಡ್​​ ವ್ಯವಸ್ಥೆ ಮಾಡಿದೆ. ಅದರಂತೆ ಬೋರ್ಡ್​ ನೀಡಿದ ರಿಜಿಸ್ಟರ್​ ನಂಬರ್​​​(Know my number)ನ್ನು ಪಿಯು ವೆಬ್ ಸೈಟ್​​​ನಲ್ಲಿ ಹಾಕಿ ಆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಈ ಕುರಿತು ಫಲಿತಾಂಶದ ಮಾಹಿತಿ ನೀಡಲಾಗುತ್ತದೆ.

      ಮುಂಗಾರು ಅಧಿವೇಶನಕ್ಕೂ ಮುನ್ನ ಹೊಸಮುಖಗಳಿಗೆ ಮಣೆ ಹಾಕಿದ Sonia Gandhi | Oneindia Kannada

      -ಫಲಿತಾಂಶ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್​ನ್ನು ಐಡೆಂಟಿಫೈ ಮಾಡಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್‌ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ.

      English summary
      Karnataka 2nd PUC Result 2021 – Department of Pre-University Education (PUE), Karnataka has released the Karnataka 2nd PUC Result 2021 Date & Time. karresults.nic.in 2021 2nd PUC Result will be declared on 20th July 2021. 2nd PUC Result 2021 Karnataka Result link will be activated at karresults.nic.in & www.pue.kar.nic.in.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X