Karnataka Budget 2025: ಪಿಡಿಎಫ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?
ಬೆಂಗಳೂರು, ಮಾರ್ಚ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. 4 ಲಕ್ಷ ಕೋಟಿ ರೂಪಾಯಿ ಗಿಂತಲೂ ಹೆಚ್ಚಿನ ಗಾತ್ರದ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಗೆ ಪ್ರಸಕ್ತ ಬಜೆಟ್ನಲ್ಲಿ 51 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ರಾಜ್ಯ ಬಜೆಟ್ ಕೇಂದ್ರೀಕರಿಸಿದೆ.

2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಏನಿದೆ? ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ ಇರುವವರು ಒನ್ ಇಂಡಿಯಾ ಕನ್ನಡ ವೆಬ್‌ಸೈಟ್‌ಗೆ ಭೇಟಿ ನೀಡಿ ರಾಜ್ಯ ಬಜೆಟ್ 2025ರ ಪಿಡಿಎಫ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇಲ್ಲಿ ಬಜೆಟ್‌ಗೆ ಸಂಬಂಧಿಸಿದ ದಾಖಲೆಗಳು ಲಭ್ಯವಿರುತ್ತವೆ. ರಾಜ್ಯ ಬಜೆಟ್ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಲಭ್ಯವಿದೆ. ಇದು ಎಲ್ಲಾ Android ಮತ್ತು iOS ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಲಭ್ಯವಿದೆ.
Download











Click it and Unblock the Notifications