ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025: ಹಾಲ್ ಟಿಕೆಟ್ ತಿದ್ದುಪಡಿ, ಡೌನ್‌ಲೋಡ್ ಮಹತ್ವದ ಮಾಹಿತಿ
ಬೆಂಗಳೂರು, ಜನವರಿ 28: ವಿದ್ಯಾರ್ಥಿಗಳು 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪರೀಕ್ಷೆ -1ಕ್ಕೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 20ರಿಂದ ಆರಂಭವಾಗಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಲ್ ಟಿಕೆಟ್ ತಿದ್ದುಪಡಿ, ಡೌನ್‌ಲೋಡ್ ಕುರಿತು ಗೋಪಾಲಕೃಷ್ಣ ಹೆಚ್. ಎನ್. ನಿರ್ದೇಶಕರು (ಪರೀಕ್ಷೆಗಳು) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮುತ್ತು ಅಗತ್ಯವಿದ್ಯಲ್ಲಿ ತಿದ್ದುಪಡಿಗಳನ್ನು ಅಪ್‌ಡೇಟ್ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಸುತ್ತೋಲೆಯ ವಿವರಗಳು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಅನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಅಭ್ಯರ್ಥಿಗಳು) ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ವಿದ್ಯಾರ್ಥಿಗಳ ವಿವರಗಳಲ್ಲಿ ತಿದ್ದುಪಡಿಗಳಿದ್ದಲ್ಲಿ ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡಲು ದಿನಾಂಕ 27-01-2025 ರಿಂದ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.
ಮಂಡಳಿಯ ಜಾಲಾಣದ ಶಾಲಾ ಲಾಗಿನ್‌ನಲ್ಲಿ ಲಭ್ಯವಿರುವ ತಂತ್ರಾಂಶವನ್ನು ಬಳಸಿ ಎಲ್ಲಾ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳ ತಿದ್ದುಪಡಿಗಳನ್ನು ಅಪ್‌ಡೇಟ್ ಮಾಡಲು ಸೂಚಿಸಿದೆ. ವಿದ್ಯಾರ್ಥಿಗಳ ವಿವರ ಪರಿಶೀಲಿಸಿ, ಅಂತಿಮಗೊಳಿಸಲು ಇದು ಕೊನೆಯ ಅವಕಾಶವಾಗಿದ್ದು, ಇದೇ ವಿವರಗಳು ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರ ಹಾಗೂ ಅಂಕಪಟ್ಟಿಗಳಲ್ಲಿ ನಮೂದಾಗುತ್ತವೆ.
https://kseab.karnataka.gov.in ನ ಶಾಲಾ ಲಾಗಿನ್ ತಂತ್ರಾಂಶದಲ್ಲಿ ಹಾಲ್‌ಟಿಕೆಟ್ ಲಭ್ಯವಿದೆ. 2024-25 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ವಿದ್ಯಾರ್ಥಿಗಳ ಮಾಹಿತಿಯನ್ನು ಪರಿಶೀಲಿಸಿ ವಿದ್ಯಾರ್ಥಿಗಳ ವೈಯುಕ್ತಿಕ ಮಾಹಿತಿ ಹಾಗೂ ಪರೀಕ್ಷೆಗೆ ನೋಂದಾಯಿಸಿದ ವಿಷಯಗಳ ಪರಿಶೀಲನೆಗಾಗಿ ಕರಡು ಪ್ರವೇಶ ಪತ್ರಗಳನ್ನು ನೀಡಲಾಗಿದೆ. ಸದರಿ ಕರಡು ಪ್ರವೇಶ ಪತ್ರಗಳನ್ನು ತಿದ್ದುಪಡಿಗಳಿದ್ದಲ್ಲಿ ಅಳವಡಿಸಲು ಮಾತ್ರ ನೀಡಲಾಗಿರುತ್ತದೆ.
ಮುಂದಿನ ದಿನಗಳಲ್ಲಿ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣ ನಡೆದ ಶಾಲೆಗಳಿಗೆ ಮಾತ್ರ ಅಂತಿಮ ಪ್ರದೇಶಪತ್ರಗಳನ್ನು ನೀಡಲಾಗುವುದರಿಂದ ಮಾನ್ಯತೆ ನವೀಕರಣ ನಡೆಯದ ಶಾಲೆಗಳು ಅಂತಿಮ ದಿನಾಂಕದವರೆಗೆ ಕಾಯದೇ ಕೂಡಲೇ ಮಾನ್ಯತೆ ನವೀಕರಣ ಪಡೆದು ಮಂಡಲಿಗೆ ಸಲ್ಲಿಸಲು ಸೂಚಿಸಿದೆ. ಶಾಲೆಯ ಮುಖ್ಯಸ್ಥರು ತಮ್ಮ ಶಾಲೆಯ ಎಲ್ಲಾ ಶಿಕ್ಷಕರ ವಿವರಗಳನ್ನು Evaluators Registration - 2025 ನಲ್ಲಿ ನೋಂದಣಿ/ ಅಪ್‌ಡೇಟ್ ಮಾಡಿ Freeze ಮಾಡಿದ್ದಲ್ಲಿ ಮಾತ್ರ ಕರಡು ಪ್ರವೇಶ ಪತ್ರಗಳು ಆನ್‌ಲೋಡ್ ಆಗುತ್ತವೆ.
ಶಾಲೆಯ ಮುಖ್ಯಸ್ಥರು ತಮ್ಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ, ತಮ್ಮ ಶಾಲೆಯಲ್ಲಿ ನೋಂದಣಿಯಾದ ಎಲ್ಲಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳು ಲಭ್ಯವಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಏನಾದರೂ ವ್ಯತ್ಯಾಸವಿದ್ದಲ್ಲಿ ಮಂಡಲ್ಲಿಯಲ್ಲಿನ ಸಂಬಂಧಿಸಿದ ಜಿಲ್ಲೆಯ ಪರಿಶೀಲನಾ ಶಾಖಾಧಿಕಾರಿಗಳಿಗೆ ಲಿಖಿತವಾಗಿ ಮನವಿಯನ್ನು ಸಲ್ಲಿಸುವುದು. ಕರಡು ಪ್ರವೇಶ ಪತ್ರದಲ್ಲಿನ 8 ಅಂಶಗಳಲ್ಲಿ ತಿದ್ದುಪಡಿಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿಯ ನಂತರ ಪರಿಷ್ಕೃತ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಶಾಲಾ ಅಭ್ಯರ್ಥಿಗಳ ಎಸ್.ಎ.ಟಿ.ಎಸ್ ನಂಬರ್ (SATS NUMBER), ಖಾಸಗಿ ಅಭ್ಯರ್ಥಿಗಳ ರೆಫರೆನ್ಸ್ ನಂಬರ್ (REFERENCE NUMBER) ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು (REGISTER NUMBER) ನಮೂದಿಸಿ ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಮಾಡಬಹುದಾಗಿರುತ್ತದೆ.
ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜನ್ಮ ದಿನಾಂಕ, ಧರ್ಮ ಮತ್ತು ಲಿಂಗ ಇವುಗಳಲ್ಲಿ ಯಾವುದಾದರೂ ತಿದ್ದುಪಡಿಗಳಿದ್ದಲ್ಲಿ ಖಾಸಗಿ ವಿದ್ಯಾರ್ಥಿಗಳ (CCEPF) ವಿವರಗಳನ್ನು ನೇರವಾಗಿ ತಿದ್ದುಪಡಿ ಮಾಡಬಹುದಾಗಿರುತ್ತದೆ. ಆದರೆ, ಶಾಲಾ ವಿದ್ಯಾರ್ಥಿಗಳ (CCERF) ವಿವರಗಳನ್ನು ಮಂಡಲಿಯ ಜಾಲತಾಣದಲ್ಲಿ ನೇರವಾಗಿ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ. ಮೊದಲು ಎಸ್.ಎ.ಟಿ.ಎಸ್ ಡೇಟಾಬೇಸ್‌ನಲ್ಲಿ ತಿದ್ದುಪಡಿ ಮಾಡಿ ನಂತರ ಮಂಡಲಿಯ ಶಾಲಾ ಲಾಗಿನ್‌ನಲ್ಲಿ Update Latest SATS Data ಮೇಲೆ ಕ್ಲಿಕ್ ಮಾಡಿದಾಗ SATS ನಿಂದ Updated data fetch ಆಗುತ್ತದೆ. ನಂತರ save ಮಾಡಿ printout ತೆಗೆದಿಟ್ಟುಕೊಳ್ಳುವುದು.
ತಿದ್ದುಪಡಿ ಮಾಡಲಾದ ಪರಿಷ್ಕೃತ ಕರಡು ಪ್ರವೇಶ ಪತ್ರಗಳನ್ನು Download Provisional AT (student wise) ಆಯ್ಕೆಯ ಮೂಲಕ Individual ಆಗಿಯೇ printout ಪಡೆಯಬೇಕಾಗಿರುತ್ತದೆ. ಶಾಲಾ ವಿದ್ಯಾರ್ಥಿಗಳ ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ಫೋಟೋ ಮತ್ತು ಸಹಿಯನ್ನು ಮಂಡಲಿಯ ಶಾಲಾ ಲಾಗಿನ್‌ನಲ್ಲಿ ನೇರವಾಗಿ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications