ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KSRTC; ಕಾರ್ಮಿಕರು ಉಚಿತ ಬಸ್‍ಪಾಸ್ ಪಡೆಯಲು ಬೇಕಾದ ದಾಖಲೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 07; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್‌ಪಾಸ್‌ ನೀಡುತ್ತಿದೆ.

ಬಸ್‌ ಪಾಸ್‌ಗಳನ್ನು ಪಡೆಯಲು ಕಾರ್ಮಿಕರು ಇಡಿಸಿಎಸ್ ಇಲಾಖೆಯ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಗ್ರಾಮಸೇವಾ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕರೆ ನೀಡಿದ್ದಾರೆ.

ಕಾರ್ಮಿಕರಿಗೆ ಉಚಿತ ಬಸ್ ಪಾಸ್; ದರ, ನಿಯಮಗಳು, ಅರ್ಹತೆಕಾರ್ಮಿಕರಿಗೆ ಉಚಿತ ಬಸ್ ಪಾಸ್; ದರ, ನಿಯಮಗಳು, ಅರ್ಹತೆ

ಈ ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿಯೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಬಹುದಾಗಿದೆ.

Freedom Struggle- ಬ್ರಿಟಿಷರ ಟ್ರಕ್‌ಗೆ ಎದೆಕೊಟ್ಟು ನಿಂತ ಕಾರ್ಮಿಕ ಬಾಬು ಗೇನು ಬಲಿದಾನದ ಕಥೆ Freedom Struggle- ಬ್ರಿಟಿಷರ ಟ್ರಕ್‌ಗೆ ಎದೆಕೊಟ್ಟು ನಿಂತ ಕಾರ್ಮಿಕ ಬಾಬು ಗೇನು ಬಲಿದಾನದ ಕಥೆ

How To Get KSRTC Bus Pass For Labour

ಅಗತ್ಯ ದಾಖಲೆಗಳು; ಬಸ್‍ಪಾಸ್‍ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು.

ಇ-ಬಸ್ ಒಪ್ಪಂದದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಚಾಲಕ, ನಿರ್ವಾಹಕರಿಗೆ ಆಪತ್ತು!?ಇ-ಬಸ್ ಒಪ್ಪಂದದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಚಾಲಕ, ನಿರ್ವಾಹಕರಿಗೆ ಆಪತ್ತು!?

ಪಾಸುದಾರರು ನಗರ, ಸಾಮಾನ್ಯ/ ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ, ಪಾಸಿನಲ್ಲಿ ನಮೂದಿಸಲಾದ ಪ್ರಾರಂಭಿಕ ಸ್ಥಳ/ ಪ್ರಾರಂಭಿಕ ಬಸ್ ನಿಲ್ದಾಣದಿಂದ 7 ಹಂತಗಳವರೆಗೆ (ಗರಿಷ್ಟ 45 ಕಿ. ಮೀ.) ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.

How To Get KSRTC Bus Pass For Labour

ಈ ಬಸ್‍ ಪಾಸ್‌ನ ಮಾನ್ಯತಾ ಅವಧಿಯು ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯವಾಗುವ ಕೊನೆಯ ದಿನಾಂಕಕ್ಕಿಂತ 15 ದಿನಗಳ ಮೊದಲು ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್‌ ಮೂಲಕ ಬಸ್‍ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.

ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್‌ ಮೂಲಕ ಬಸ್‍ಪಾಸ್ ಪಡೆಯುವಾಗ ವಿಳಾಸವನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.

ರಾಜ್ಯಾದ್ಯಂತ ವಿಸ್ತರಣೆ; ಮೊದಲು ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ನೀಡುವ ಸೌಲಭ್ಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯಾಪ್ತಿಯಲ್ಲಿ ಜಾರಿಯಲ್ಲಿತ್ತು. ಈಗ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ.

ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್‌ನಲ್ಲಿ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಈ ಯೋಜನೆ ವಿಸ್ತರಿಸಲು ಅನುಮೋದನೆ ನೀಡಿ ಕಳೆದ ವಾರ ಆದೇಶ ಹೊರಡಿಸಲಾಗಿತ್ತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿ ಕೇಂದ್ರ ಕಛೇರಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ನೋಂದಾಯಿತ ಕಟ್ಟಡ ಮತ್ತುಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಪಾಸುಗಳ ದರ, ಪಾಸು ಪಡೆಯುವುದು ಸೇರಿದಂತೆ ಇತರ ನಿರ್ದೇಶನಗಳನ್ನು ನೀಡಿತ್ತು.

ಪಾಸು ತೋರಿಸುವುದು ಕಡ್ಡಾಯ; ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಪಾಸ್‌ಗಳ ವಿನ್ಯಾಸವನ್ನು ಮಾಡಿವೆ.

ಪಾಸುದಾರರು ಪ್ರಯಾಣಿಸುವಾಗ ಚಾಲನಾ ಸಿಬ್ಬಂದಿಗಳಿಗೆ/ ತನಿಖಾಧಿಕಾರಿಗಳು ಕೇಳಿದಾಗ ಪಾಸ್ ತೋರಿಸುವುದು ಕಡ್ಡಾಯ. ಚಾಲನಾ ಸಿಬ್ಬಂದಿಗಳು ಪಾಸುಗಳ ಮಾನ್ಯತಾ ಅವಧಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.

ಚಾಲನಾ ಸಿಬ್ಬಂದಿಗಳು ಹಾಗೂ ತನಿಖಾ ಸಿಬ್ಬಂದಿಗಳು ನಮೂನೆಯ ಮಾದರಿಯನ್ನು ಗಮನದಲ್ಲಿರಿಸಿಕೊಂಡು ಪ್ರಯಾಣದ ಸಂದರ್ಭದಲ್ಲಿ ಪರಿಶೀಲನೆ ಮಾಡಬೇಕು. ಈ ಪಾಸ್ ವಿತರಣೆ, ನಿರ್ವಹಣೆ ಹಾಗೂ ನವೀಕರಣ ಕೆಲಸವನ್ನು ರಾಜ್ಯದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ವಹಣೆ ಮಾಡಲಿದೆ.

English summary
Labour in Karnataka will get free bus pass. How to get Karnataka State Road Transport Corporation (KSRTC) bus pass and what document need for it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X