ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

By Nayana
|
Google Oneindia Kannada News

ಬೆಂಗಳೂರು, ಮೇ 17: ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯಾದ್ಯಂತ ಅವಧಿ ಪೂರ್ವ ಮುಂಗಾರು ಆರಂಭಗೊಂಡಿದೆ.ಅಲ್ಲಲ್ಲಿ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಪ್ರತಿನಿತ್ಯವೂ ಸಿಡಿಲಿಗೆ ಬಲಿಯಾದ ಘಟನೆಗಳನ್ನು ನೋಡುತ್ತಲೇ ಇರುತ್ತೇವೆ.

ಮಳೆಗಾಲ ಎದುರಿಸಲು ಇನ್ನೂ ಸಿದ್ಧವಾಗದ ಬಿಬಿಎಂಪಿ ಮಳೆಗಾಲ ಎದುರಿಸಲು ಇನ್ನೂ ಸಿದ್ಧವಾಗದ ಬಿಬಿಎಂಪಿ

ಹಾಗಾದರೆ ಈ ಸಿಡಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ ಎನ್ನುವುದರ ಕುರಿತು ಸ್ವಲ್ಪ ಆಲೋಚಿಸಬೇಕಿದೆ. ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ. ಅದರಿಂದಾಗುವ ಸಾವು ನೋವು ಗಳನ್ನು ತಪ್ಪಿಸಬಹುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಕೆಲವು ಸಲಹೆಗಳನ್ನು ನೀಡಿದೆ.

How to rescue from thunderstorms in rainy days ?

ರಕ್ಷಣೆ ಹೇಗೆ?:

1) ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ.ನಿಲ್ಲ ಬೇಡಿ

2) ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ,ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.

3) ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗ ಹೊರಬರುವುದು ಒಳ್ಳೆಯದು.(ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.)

4) ಎತ್ತರದ ಗುಡ್ಡದ ಮೇಲಿದ್ದರೆ ಕೆಳಗಡೆ ಇಳಿಯಿರಿ

5) ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, ( ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.)

6) ಕೆರೆಯಲ್ಲಿ ಈಜುವುದು,ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ .

7) ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.

8) ತಂತಿಬೇಲಿ, ಬಟ್ಟೆ ಒಣಹಾಕುವ ತಂತಿ, ಇವುಗಳಿಂದ ದೊರವಿರಿ

9) ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ.

10) ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.

11) ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಾಹಸವೂ ಬೇಡ.

12) ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.

13) ಕಂಪ್ಯೂಟರ್ ಗಳಿಂದ ದೂರ ಇರಿ

14) ಮನೆಯ ಕಾಂಕ್ರೀಟ್‌ ಗೋಡೆಗಳನ್ನು ಸ್ಪೆರ್ಶಿಸದೆ.ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ.

English summary
State natural disaster management wing of department of revenue has issued a public notice to take precautionary measures during thunderstorms during this rainy season.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X