ಗೃಹಲಕ್ಷ್ಮಿ ಯೋಜನೆ; ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸುವುದು ಹೇಗೆ, ದಾಖಲೆಗಳು
ಬೆಂಗಳೂರು, ಜುಲೈ 16: ಕರ್ನಾಟಕ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಅವರು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ವಿವಿಧ ದಾಖಲೆಗಳ ಮೂಲಕ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಮಾಡಲು ಅನುಕೂಲವಾಗುವಂತೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಯೋಜನೆಯಡಿ ಈಗ ಲಿಂಗತ್ವ ಅಲ್ಪಸಂಖ್ಯಾತರು ಸೌಲಭ್ಯ ಪಡೆಯಬಹುದಾಗಿದ್ದು, ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವ-ಯಾವ ದಾಖಲೆಗಳು ಬೇಕು?: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‍ಜೆಂಡರ್ ಪರ್ಸನ್ (NATIONAL PORTAL FOR TRANS GENDER PERSON) ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರ ಅನುಮೋದನೆ ನೀಡಿದೆ, ತಂತ್ರಾಂಶದಲ್ಲಿ ಈ ಕುರಿತು ಮಾರ್ಪಾಡು ಮಾಡಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್‍ಪೋರ್ಟ್ ಸೈಜ್ ಪೋಟೊ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.
ಮಾಸಿಕ 2 ಸಾವಿರ ರೂ.ಗಳು: ಕರ್ನಾಟಕ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ. 2000 ಗಳನ್ನು ನೀಡುವುದು ಗೃಹಲಕ್ಷ್ಮಿ ಯೋಜನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 27ರಂದು ಬೆಳಗಾವಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್‌ನಲ್ಲಿ ನಮೂದಿಸಿರುವಂತೆ ಕುಟುಂಬದ ಅರ್ಹ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ಡಿಬಿಟಿ ಮೂಲಕ ಆರ್ಥಿಕ ಸೌಲಭ್ಯ ನೀಡುವ ಯೋಜನೆ ಇದಾಗಿದೆ.
ಕುಟುಂಬದ ಯಜಮಾನಿಯು ಅರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ. ಆದ್ದರಿಂದ ಈ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಾತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆ ಕುರಿತು ಮಾತನಾಡಿದ್ದಾರೆ. "ಯೋಜನೆಯನ್ನು ಕರ್ನಾಟಕದಲ್ಲಿ ಮಹಿಳೆಯರನ್ನ ಆರ್ಥಿಕವಾಗಿ ಸಬಲೀಕರಣಗೊಳಿಸಲು ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆಯನ್ನು ಮಾಡಿದ್ದರು. ಇದು ಡಿ. ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾಗಿದೆ. ಯೋಜನೆಯಡಿ ನೋಂದಾಯಿತರಾದ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾವಣೆಯಾಗುತ್ತದೆ" ಎಂದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications