Get Updates
Get notified of breaking news, exclusive insights, and must-see stories!

Siddaramaiah: ಅರಸು ದಾಖಲೆ ಮುರಿದ ಸಿದ್ದರಾಮಯ್ಯ; ತಾಲೂಕು ಬೋರ್ಡ್‌ನಿಂದ ಸಿಎಂವರೆಗಿನ ಹಾದಿ: ನೇರ ನಡೆ, ಸವಾಲಿನ ರಾಜಕಾರಣ!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕುರುಬ ನಾಯಕ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈ ವರೆಗೆ ದೇವರಾಜ ಅರಸು ಅವರು ಸುದೀರ್ಘ ಸಿಎಂ ಹೆಗ್ಗಳಿಗೆ ಭಾಜನರಾಗಿದ್ದರು, ಇದೀಗ ಇಂದು ದೇವರಾಜ ಅರಸು ಅವರ ರೆಕಾರ್ಡ್‌ನ ಸಿದ್ದರಾಮಯ್ಯ ಅವರು ಬ್ರೇಕ್‌ ಮಾಡಿದ್ದಾರೆ. ಸುದೀರ್ಘ ಸಿಎಂ ಹೆಗ್ಗಳಿಗೆ ಮಾತ್ರವಲ್ಲದೇ ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಈಗಾಲೇ ಎಲ್ಲರಿಗಿಂತ ಮುಂದಿದ್ದಾರೆ.

ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದು, ದೇವರಾಜ ಅರಸು ದಾಖಲೆಯನ್ನ ಮುರಿದಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷ ಅಧಿಕಾರದಲ್ಲಿದ್ದರೆ ಸಿದ್ದರಾಮಯ್ಯ ಮೊದಲ ಅವಧಿ ಪೂರ್ಣಗೊಂಡ ಬಳಿಕ ಮತ್ತೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ.

How was Siddaramaiah Challenging Politics Which Broke The Devaraj Arasu Record

2018ರ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಫಲಿತಾಂಶ ಅತಂತ್ರವಾದ ಕಾರಣಕ್ಕೆ ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ಮೈತ್ರಿ ಸರ್ಕಾರ ರಚಿಸಿತ್ತು. ಆದರೆ ಆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು, ಆದರೆ ಕೇವಲ 14 ತಿಂಗಳಿಗೇ ಪತನವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕ್ರಮವಾಗಿ ಮುಖ್ಯಮಂತ್ರಿಗಳಾಗಿದ್ದರು. ಅದಾದ ಬಳಿಕ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ 7 ವರ್ಷ 239 ದಿನಗಳ ಕಾಲ ಪೂರೈಸಿರುವ ಸಿದ್ದರಾಮಯ್ಯ ಅವರು ಅಸರು ದಾಖಲೆಯನ್ನ ಬ್ರೇಕ್‌ ಮಾಡಿದ್ದಾರೆ.

7 ವರ್ಷ 7 ತಿಂಗಳು 20 ದಿನ ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದರು ಅರಸು ಬಳಿಕ ಪೂರ್ಣಾವಧಿ ಮುಖ್ಯಮಂತ್ರಿ ಆಗಿದ್ದು ಸಿದ್ದರಾಮಯ್ಯ ಅವರು ದೇವರಾಜ ಅರಸು ದಾಖಲೆಯನ್ನು ಮುರಿದಿದ್ದಾರೆ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಗಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದೇವರಾಜ್‌ ಅರಸು ಅವರು 1972ರ ಮಾರ್ಚ್ 77 ರಿಂದ 27ರ ಡಿಸೆಂಬರ್ 31ರವರೆಗೆ ಮೊದಲ ಅವಧಿಯಲ್ಲಿ ಐದು ವರ್ಷ ಒಂಬತ್ತು ತಿಂಗಳು 1 ದಿನ ಮುಖ್ಯಮಂತ್ರಿ ಆಗಿದ್ದರು. ನಂತರ 59 ದಿನ ಕರ್ನಾಟಕ ರಾಷ್ಟ್ರಪತಿ ಆಳ್ವಿಕೆಯಲ್ಲಿ ಇತ್ತು ಇದಾದ ನಂತರ 1978ರ ಫೆಬ್ರವರಿ 28ರಿಂದ 1980ರ ಜನವರಿ 7ರವರೆಗೆ ಅರಸು ಅವರು ಮುಖ್ಯಮಂತ್ರಿಯಾಗಿದ್ದರು.

ಇನ್ನೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ 2013ರ ಮೇ 13 ರಿಂದ 2018 ರ ಮೇ 17ರ ವರೆಗೆ ಮುಖ್ಯಮಂತ್ರಿಯಾಗದ್ದರು, ಇನ್ನೂ ಎರಡನೇ ಅವಧಿಯಲ್ಲಿ 2023ರ ಮೇ 20ರಿಂದ ಎರಡನೆಯ ಅವಧಿಗೆ ಮುಖ್ಯಮಂತ್ರಿ ಆಗಿದ್ದಾರೆ ಎರಡನೆಯ ಅವಧಿಗೆ 963 ದಿನ ಪೂರ್ಣಗೊಳಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದಿಗೆ ದಾಖಲೆ ಬರೆದಿದ್ದಾರೆ.

2023ರ ಮೇ 20ರಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. 1978 ರಲ್ಲಿ ಮೈಸೂರಿನ ತಾಲೂಕು ಬೋರ್ಡ್ ಸದಸ್ಯರಾಗಿ ಎರಡು ಬಾರಿ ಉಪಮುಖ್ಯಮಂತ್ರಿ, ಹಣಕಾಸು ಸಚಿವ, ವಿರೋಧ ಪಕ್ಷದ ನಾಯಕ, ಶಾಸಕಾಂಗ ಪಕ್ಷದ ನಾಯಕರೂ ಆಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನೇರ ನಡೆ ಹಾಗೂ ನುಡಿಗಳ ಮೂಲಕ ಗುರುತಿಸಿಕೊಂಡಿದ್ದು, ತಾಲೂಕಾ ಬೋರ್ಡ್‌ನಿಂದ ಸಿಎಂ ಹುದ್ದೆವರೆಗೂ ರಾಜ್ಯ ರಾಜಕೀಯದಲ್ಲಿ ತಮ್ಮದೇಯಾದ ವರ್ಚಸ್ಸು ಹೊಂದಿರುವ ನಾಯಕರಾಗಿದ್ದಾರೆ.

ಸಿದ್ದರಾಮಯ್ಯ ರಾಜಕೀಯ ಹಾದಿ

1978 ರಲ್ಲಿ ಸಿದ್ದರಾಮಯ್ಯ ಅವರ ಮೊದಲ ಚುನಾವಣೆ : ಮೈಸೂರಿನ ತಾಲೂಕು ಬೋರ್ಡ್ ಚುನಾವಣೆಗೆ ಭಾರತೀಯ ಲೋಕ ದಳ ಟಿಕೆಟ್ ಪಡೆದು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದರು.

1983 ವಿಧಾನಸಭೆಗೆ ಸ್ಪರ್ಧೆ: ಕರ್ನಾಟಕದ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧೆ ಮಾಡಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.

1985 ಮೊದಲ ಬಾರಿಒಲಿದು ಬಂದ ಮಂತ್ರಿ ಸ್ಥಾನ: 1985ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆ ಬಳಿಕ ಪಶುಸಂಗೋಪನೆ ಸಚಿವರನ್ನಾಗಿ ನೇಮಕ ಮಾಡಲಾಯಿತು. ಸಂಪುಟ ಪುನಾರಚನೆಯ ಬಳಿಕ ಸಿದ್ದರಾಮಯ್ಯ ಅವರು ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.

1989 ಜನತಾದಳ ಸೇರ್ಪಡೆ: 1989 ರಲ್ಲಿ ಸಿದ್ಧರಾಮಯ್ಯ ಅವರು ಜನತಾದಳ ಸೇರಿದರು. ಜನತಾದಳದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು.

1994 ಹಣಕಾಸು ಸಚಿವ: ವಿಧಾನಸಭಾ ಚುನಾವನಣೆಯಲ್ಲಿ ಗೆದ್ದು ದೇವೇಗೌಡರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾದರು.

2004-2005 ರಲ್ಲಿ ಎರಡು ಬಾರಿ ಉಪಮುಖ್ಯಮಂತ್ರಿ: 1996 -1999ವರೆಗೆ ಮೊದಲ ಬಾರಿ ದಳದಿಂದ ಹಾಗೂ 2004-2005 ರಲ್ಲಿ ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ ಎರಡು ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

2013 ರಲ್ಲಿ ಮುಖ್ಯಮಂತ್ರಿ ಸ್ಥಾನ: ಅಹಿಂದ ಸಂಘಟನೆ ಸ್ಥಾಪನೆಯ ಹಿನ್ನೆಲೆಯಲ್ಲಿ ದೇವೇಗೌಡರೊಂದಿಗಿನ ಮನಸ್ಥಾಪದಿಂದ ಜೆಡಿಎಸ್‌ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಸಿದರು. 2013 ರಲ್ಲಿ ಮುಖ್ಯಮಂತ್ರಿ ಆಗಿ ಆಯ್ಕೆಯಾದರು.

2018 ರಲ್ಲಿ ವಿರೋಧ ಪಕ್ಷದ ನಾಯಕ: 2018 ರ ವಿಧಾನಸಭೆಯ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಕಾಂಗ್ರೆಸ್ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಬಳಿಕ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸಿದ್ದಾರೆ.

Take a Poll

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+