Government Employee: HRMS ಬಗ್ಗೆ ಮಹತ್ವದ ಮಾಹಿತಿ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದಿದೆ. HRMS ಪೋರ್ಟಲ್‌ನಲ್ಲಿ ನೌಕರರು ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಈ ಕುರಿತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ-2.0 ನಿರ್ದೇಶನಾಲಯ, ಆರ್ಥಿಕ ಇಲಾಖೆ ಯೋಜನಾ ವ್ಯವಸ್ಥಾಪಕರು ಹೆಚ್.ಆರ್.ಎಂ.ಎಸ್-2.0 ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಸುತ್ತೋಲೆಯು ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ), ಆರ್ಥಿಕ ಇಲಾಖೆ, ಇವರ ಸುತ್ತೋಲೆಯನ್ನು ಉಲ್ಲೇಖ ಮಾಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ. ಸದರಿ, ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದೆ.
ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ, ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ವರ್ಗದವರು ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಯ ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಯೋಜನೆಗಳಡಿ ಮಾಡಿಸಿದ ವಿಮಾ ಪಾಲಿಸಿಗಳ ಮಾಹಿತಿಯನ್ನು HRMS-ESS Login ನಲ್ಲಿ ಭರ್ತಿ ಮಾಡಲು ಸಹ ಈಗಾಗಲೇ ತಿಳಿಸಿರುತ್ತಾರೆ.
ಆದ್ದರಿಂದ ರಾಜ್ಯ ಸರ್ಕಾರದ ಪ್ರತಿ ಸಿಬ್ಬಂದಿಗಳ ತಮ್ಮದೇ ಆದ ವೇತನ ಚೀಟಿ, ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸದುಪಯೋಗವನ್ನು ಪಡೆದುಕೊಳ್ಳಲು HRMSESS Login (https://hrmsess.karnataka.gov.in) ನ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಿದೆ.
ಪ್ರತಿ ಸಿಬ್ಬಂದಿಗಳು ESS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು, ಸದರಿ ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು ಖಚಿತಪಡಿಸಿಕೊಳ್ಳಲು ಈ ಮೂಲಕ ತಿಳಿಸಿದೆ ಹಾಗೂ ತಮ್ಮ ಎಲ್ಲಾ ಉದ್ಯೋಗಿಗಳು ಮೇ-2024 ರ ಮೊದಲು ಈ ಪೋರ್ಟಲ್‌ನಲ್ಲಿ ನೋಂದಾಯಿಸಲು ಅನುವು ಮಾಡಿಕೊಡುವ ಜವಾಬ್ದಾರಿ ಡಿಡಿಓರವರದಾಗಿರುತ್ತದೆ ಎಂದು ಸುತ್ತೋಲೆ ಹೇಳಿದೆ.
HRMS ಸೌಲಭ್ಯಗಳ ಪಟ್ಟಿ
* ವೇತನ ಚೀಟಿ: ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು (Pay Slip) ಅನ್ನು ಪಡೆಯಬಹುದು.
* ರಜೆ ಬಾಕಿ: ನೌಕರರು ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು.
* ಸಾಲ/ಮುಂಗಡ (Loan/Advance): ನೌಕರರು ಸಾಲ/ಮುಂಗಡದ ವಿವರಗಳನ್ನು ವೀಕ್ಷಿಸಬಹುದು.
* ಕಡಿತದ ವಿವರಗಳು - (Deduction Details): ನೌಕರರು ತಮ್ಮ ಕಡಿತಗಳಾದ ಆದಾಯ ತೆರಿಗೆ (IT), ಕೆಜಿಐಡಿ, ಸಾಮಾನ್ಯ ಭವಿಷ್ಯ ನಿಧಿ (GPF), ಎನ್‌ಪಿಎಸ್, ಮುಂತಾದವುಗಳನ್ನು ವೀಕ್ಷಿಸಬಹುದು.
* ವಿಮೆ (Insurance): ನೌಕರರು ತಮ್ಮ ವಿಮೆಗಳಾದ ಕೆಜಿಐಡಿ, ಜಿಪಿಎಪ್ ಮುಂತಾದ ವಿವರಗಳನ್ನು ಸಹ ವೀಕ್ಷಿಸಬಹುದು.
* ಇ-ಸೇವಾ ಪುಸ್ತಕ (Service Register Book): ನೌಕರರ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿ (ESR) ಯಲ್ಲಿ ಅಪ್‌ಲೋಡ್ ಮಾಡಿ ಪಬ್ಲಿಷ್ ಮಾಡಿದ ಇ-ಸೇವಾ ಪುಸ್ತಕವನ್ನು ಈ ಪರದೆಯಲ್ಲಿ ವೀಕ್ಷಿಸಬಹುದು.
* ಹೆಚ್‌ಆರ್‌ಎಂಎಸ್ ಟಿಕೆಟ್ (Ticket Status): ನೌಕರರು ಹೆಚ್‌ಆರ್‌ಎಂಎಸ್‌ನಲ್ಲಿ ಸೃಜಿಸಿದ ಟಿಕೇಟ್‌ನ ವಿವರಗಳನ್ನು ವೀಕ್ಷಿಸಬಹುದು.
* ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನೆ (ಪಿಎಂಜೆಜೆಬಿವೈ), ಪ್ರಧಾನ ಮಂತ್ರಿ ಸುರಕ್ಷಾ, ಬಿಮಾ ಯೋಜನೆ (ಪಿಎಂಎಸ್‌ಬಿ): ಪಿ ಎಂ ಜೆ ಜೆ ಬಿ ವೈ ಮತ್ತು ಪಿ ಎಂ ಎಸ್ ಬಿ ವೈ ಯೋಜನೆಗಳಲ್ಲಿ ಸಿಬ್ಬಂದಿಗಳು ನೋಂದಣಿಯಾದ ವಿವರಗಳನ್ನು ವೀಕ್ಷಿಸಬಹುದು ಹಾಗೂ ಮುದ್ರಿಸಬಹುದು. ಪ್ರತಿ ಸಿಬ್ಬಂದಿಗಳು ಹಾಗೂ ಡಿಡಿಓಗಳು ಈ ಯೋಜನೆಯನ್ನು ಖಚಿತವಾಗಿ ಪಡೆದುಕೊಳ್ಳುವುದು ಹಾಗು ಇಎಸ್‌ಎಸ್ ಪೋರ್ಟಲ್‌ನಲ್ಲಿ ಈ ದಾಖಲೆಯನ್ನು ನವೀಕರಿಸುವುದು ಅವರ ಜವಾಬ್ದಾರಿಯಾಗಿರುತ್ತದೆ. ದಯವಿಟ್ಟು ತಮ್ಮ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಫಲಾನುಭವಿಗಳನ್ನು ಅಪ್‌ಡೇಟ್ ಮಾಡಿದ್ದಲ್ಲಿ ಮಾತ್ರ ಯೋಜನೆಯ ಸದುಪಯೋಗವನ್ನು ಸಿಬ್ಬಂದಿಗಳು ಹಾಗೂ ಅವರ ಕುಟುಂಬವು ಪಡೆಯಬಹುದು.
* ಕೆಜಿಐಡಿ ವಿಮಾ ಪತ್ರಗಳ ಪರಿಶೀಲನೆ: ಈ ಪರದೆಯಲ್ಲಿ ಸಿಬ್ಬಂದಿಗಳು ತಮ್ಮ ಕೆಜಿಐಡಿ ವಿಮಾ ಪತ್ರಗಳ ಹೆಚ್‌ಆರ್‌ಎಂಎಸ್‌ನಲ್ಲಿನ ಮಾಹಿತಿ ಹಾಗೂ ಕೆಜಿಐಡಿಯಲ್ಲಿನ ಮಾಹಿತಿಯನ್ನು ವೀಕ್ಷಿಸಬಹುದು. ಸಿಬ್ಬಂದಿಗಳು ಎರಡು ಅಂಕಣಗಳನ್ನು ಪರಿಶೀಲಿಸಿ ತಾಳೆ ಮಾಡಿ ಸರಿಯಾಗಿದ್ದಲ್ಲಿ ಸರಿಯಾಗಿ ಕಂಡು ಬಂದಿದೆ ಎಂಬ ಚೆಕ್ ಬಾಕ್ಸ್ ಅನ್ನು ಕ್ಲಿಕ್ ಮಾಡಿ ಉಳಿಸಬೇಕು (Save). ಒಂದು ವೇಳೆ ಯಾವುದಾದರೂ ವಿಮಾ ಮಾಹಿತಿಯು ತಪ್ಪಾಗಿದ್ದಲ್ಲಿ ಅದನ್ನು ಸೂಚಿಸಬಹುದಾಗಿದೆ. ಅದಲ್ಲದೇ ಯಾವುದಾದರೂ ವಿಮಾ ವಿವರಗಳು ಬಿಟ್ಟು ಹೋದಲ್ಲಿ ಅದನ್ನು ಸೇರಿಸಬಹುದು. ಕೊನೆಯದಾಗಿ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿದ ನಂತರ ಇ-ಸಹಿ ಯನ್ನು ಮಾಡಬೇಕು.
* ಪ್ರಮುಖ ಲಿಂಕ್‌ಗಳು: ರಾಜ್ಯ ಸರ್ಕಾರದ ಪ್ರಮುಖ ಜಾಲತಾಣವಾದ ಕೆಜಿಐಡಿ, ಮಹಾಲೇಖಪಾಲರು-ಸಾಭನಿ, ಖಜಾನೆ-2, ಎನ್‌ಎಸ್‌ಡಿಎಲ್, ಮಹಾಲೇಖಪಾಲರು-ಜಿಇ, ಹೆಚ್‌ಆರ್‌ಎಂಎಸ್ ಅಪ್ಲಿಕೇಷನ್ ಗಳ ಪ್ರಮುಖ ಲಿಂಕ್‌ಗಳನ್ನು ಒದಗಿಸಲಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications