ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಪದಗ್ರಹಣ: ಶಿಷ್ಯನಿಗೆ ಅಧಿಕಾರ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು, ಮಾರ್ಚ್ 18: ಯುವ ಕಾಂಗ್ರೆಸ್ಗೆ ಹೊಸ ಚೖತನ್ಯ ಸಿಕ್ಕಿದೆ. ಯುವ ಕಾಂಗ್ರೆಸ್ ಹೊಸ ತಂಡಕ್ಕೆ ಮಹತ್ವದ ಜವಾಬ್ದಾರಿ ಸಿಕ್ಕಿದ್ದು, ಅರಮನೆ ಮೈದಾನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಪದಗ್ರಹಣ ಕಾರ್ಯಕ್ರಮ ನಡೆಸುವ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಶಕ್ತಿ ಪ್ರದರ್ಶನವನ್ನ ಮಾಡಿದರು. ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.
ಅರಮನೆ ಮೈದಾನದಲ್ಲಿ ಸೋಮವಾರ ನಡೆದ "ಯುವ ಸಂಕಲ್ಪ" ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಡಿ.ಕೆ. ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೊಹಮದ್ ಹ್ಯಾರಿಸ್ ನಲಪಾಡ್ ಅವರು ನೂತನ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಕರ್ನಾಟಕ ರಾಜ್ಯದಲ್ಲಿ 25 ಲಕ್ಷ ಯುವ ಕಾಂಗ್ರೆಸ್ ಸದಸ್ಯತ್ವ ಮಾಡಲಾಗಿದೆ ಎಂಬ ವರದಿ ಬಂದಿದೆ. ಇಲ್ಲಿ 15-20 ಸಾವಿರ ಸದಸ್ಯರು ಬಂದಿದ್ದೀರಿ. ಉಳಿದ ಸದಸ್ಯರು ಎಲ್ಲಿ ಹೋದರು ಎಂದು ಕೇಳಲು ಬಯಸುತ್ತೇನೆ. 25 ಲಕ್ಷ ಸದಸ್ಯತ್ವ ದೊಡ್ಡ ಮಟ್ಟದಲ್ಲಿ ತಾಲೂಕು ಮಟ್ಟದ ಅಧ್ಯಕ್ಷರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಇಂತಹುದೇ ಪದಗ್ರಹಣ ಕಾರ್ಯಕ್ರಮ ಮಾಡಬೇಕು. ಆ ಕಾರ್ಯಕ್ರಮಕ್ಕೆ ಆ ತಾಲೂಕಿನ ಯುವ ಕಾಂಗ್ರೆಸ್ ಸದಸ್ಯರನ್ನು ಆಹ್ವಾನಿಸಬೇಕು. ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸದಸ್ಯತ್ವ ಪಡೆದವರಿಂದ ಮತ ಹಾಕಿಸಿಕೊಂಡು ನಂತರ ಅವರನ್ನು ಬಿಡುವುದಲ್ಲ. ಸದಸ್ಯತ್ವ ಪಡೆದವರು ಕಾಂಗ್ರೆಸ್ ಪಕ್ಷದ ಲೆಕ್ಕದಲ್ಲಿರಬೇಕು. ಆಗ ಯಾರೆಲ್ಲಾ ನಿಜವಾದ ಸದಸ್ಯರು ಎಂಬುದು ತಿಳಿಯುತ್ತದೆ ಎಂದು ತಿಳಿಸಿದರು.
ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ. ಇಂದು ನೀವೆಲ್ಲರೂ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳಿದ್ದೀರಿ. ನಿಮಗೆಲ್ಲರಿಗೂ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಪರವಾಗಿ ತುಂಬು ಹೃದಯದ ಶುಭಾಶಯ ಅರ್ಪಿಸಲು ಬಯಸುತ್ತೇನೆ.
ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ. ಯಾರು ಪ್ರಾಮಾಣಿಕವಾಗಿ ಪಕ್ಷವನ್ನು ಶಿಸ್ತಿನಿಂದ ಸಂಘಟನೆ ಮಾಡುತ್ತಾರೋ, ಕಾಂಗ್ರೆಸ್ ತತ್ವ ಸಿದ್ಧಾಂತ ಬೆಳೆಸಿಕೊಂಡು, ದೇಶದ ಸಮಗ್ರತೆ, ಐಕ್ಯತೆ ಕಾಪಾಡಿಕೊಂಡು ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತಿ ಕಾಪಾಡುವವರು ನಿಜವಾದ ನಾಯಕ. ಅವರೇ ನಿಜವಾದ ಕಾಂಗ್ರೆಸಿಗ ಎಂದು ತಿಳಿಸಿದರು.
ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಪಿಯುಸಿ ಚುನಾವಣೆಯಲ್ಲಿ ಗೆದ್ದಿದ್ದೆ. ಪದವಿಯಲ್ಲಿದ್ದಾಗ ಚುನಾವಣೆಯಲ್ಲಿ ಸೋತಿದ್ದೆ. ಆನಂತರ ನನ್ನ ಗೆಲುವು ಆರಂಭವಾಯಿತು. ನಂತರ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸೋತೆ. ಆನಂತರ ಸತತವಾಗಿ ಗೆಲ್ಲುತ್ತಾ ಬಂದಿದ್ದೇನೆ. ನಾನು ಬಂಗಾರಪ್ಪನವರ ಸಂಪುಟದಲ್ಲಿ ಮಂತ್ರಿಯಾದಾಗ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿದ್ದೆ. ಆ ನಂತರ ನಾರಾಯಣಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದೆ. ನಾನು ಹಾಗೂ ವಿನಯ್ ಕುಮಾರ್ ಸೊರಕೆ ಒಟ್ಟಾಗಿ ಎನ್ಎಸ್ ಯುಐ, ಯುವ ಕಾಂಗ್ರೆಸ್ ಸಂಘಟನೆ ಮಾಡಿಕೊಂಡು ಹಂತ ಹಂತವಾಗಿ ಇಲ್ಲಿಯವರೆಗೂ ಬಂದಿದ್ದೇವೆ ಎಂದು ತಿಳಿಸಿದರು.
2028ರಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ
ಸಾಧನೆ ಮಾಡಲು ಹೋರಾಡುವವನಿಗೆ ದಾರಿಯಲ್ಲಿ ನೂರಾರು ಅಡೆತಡೆಗಳು ಇರುತ್ತವೆ. ನಾವು ಶಕ್ತಿಶಾಲಿಯಾಗಿದ್ದಷ್ಟು ಶತ್ರುಗಳು ಜಾಸ್ತಿ, ಕಡಿಮೆ ಶಕ್ತಿಶಾಲಿಗಳಾದರೆ ಕಡಿಮೆ ಶತ್ರುಗಳು, ಶಕ್ತಿಶಾಲಿಗಳೇ ಅಲ್ಲದಿದ್ದರೆ ಶತ್ರುಗಳೇ ಇರುವುದಿಲ್ಲ. ಯುವಕರ ನಡೆ ಹಳ್ಳಿ, ಬೂತ್ ಕಡೆ, ನಿಮ್ಮ ನಡೆ ಗ್ಯಾರಂಟಿ ಕಡೆ ಇರಬೇಕು. ಆಮೂಲಕ 2028ರಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನ ಇರಬೇಕು. ನಿಮ್ಮ ಪದಾಧಿಕಾರಿಗಳ ಸಭೆಗೆ ಬಂದು ಮತ್ತಷ್ಟು ಸಲಹೆ ನೀಡುತ್ತೇನೆ. ಯಾರು ವಿದ್ಯಾರ್ಥಿ ಹಾಗೂ ಯುವ ಕಾಂಗ್ರೆಸ್ ಸದಸ್ಯರಾಗುತ್ತಾರೋ ಅವರಲ್ಲಿ 90% ಜನ ಕಾಂಗ್ರೆಸ್ ಪಕ್ಷದಲ್ಲೇ ಉಳಿದುಕೊಳ್ಳುತ್ತಾರೆ. ಸಧ್ಯದಲ್ಲೇ ಮಹಿಳಾ ಮೀಸಲಾತಿ ಜಾರಿಯಾಗಲಿದೆ. ಆಗ ಮುಂದಿನ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಹಾಗೆಂದು ನನ್ನ ಮಕ್ಕಳು, ಪತ್ನಿಯನ್ನು ಕಣಕ್ಕಿಳಿಸುವುದು ನನ್ನ ಗುರಿಯಲ್ಲ. ನೀವು ಕಾರ್ಯಕರ್ತರು ಟಿಕೆಟ್ ಪಡೆಯಲು ಶಕ್ತಿಶಾಲಿಗಳಾಗಬೇಕು ಎಂದು ತಿಳಿಸಿದರು.
ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ದೇವರು ನಿಮಗೆ ಕೊಟಟಿರುವ ನಾಯಕತ್ವದ ಅವಕಾಶವನ್ನು ಬಳಸಿಕೊಂಡು ದೊಡ್ಡ ಭವಿಷ್ಯ ರೂಪಿಸಿಕೊಳ್ಳಬೇಕು. ನಿಮ್ಮ ಆಲೋಚನೆಗಳು ನಿಮ್ಮ ನಾಯಕತ್ವ ರೂಪಿಸುತ್ತದೆ. ಗೆದ್ದವರು, ಸೋತವರನ್ನು, ಸೋತವವರು ಗೆದ್ದವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದರೆ ನಿಮಗೆ ಈ ಡಿ.ಕೆ. ಶಿವಕುಮಾರ್ ಮತ್ತೆ ಯಾವುದೇ ಅವಕಾಶ ನೀಡುವುದಿಲ್ಲ. ನಿಮ್ಮ ವೈಯಕ್ತಿಕ ವಿಚಾರ ಬಿಟ್ಟು ಪಕ್ಷದ ಕೆಲಸ ಮಾಡುತ್ತೀರೋ ಅಂತಹವರಿಗೆ ಪಕ್ಷ ಗೌರವ ನೀಡಲಿದೆ ಎಂದು ಸಂದೇಶ ರವಾನಿಸಿದರು.
ಪಕ್ಷ ಇದ್ದರೆ, ಸರ್ಕಾರ, ನೀವುಗಳಿದ್ದರೆ ನಾವು. ಪಕ್ಷವೇ ಮೊದಲು ಎಂಬ ಕಾರಣಕ್ಕೆ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನನಗೆ ವಿಶ್ವಾಸವಿದೆ 2028ರಲ್ಲಿ ರಾಜ್ಯದಲ್ಲಿ ಹಾಗೂ 2029ರಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ದೇಶದಲ್ಲಿ ಕಾಂಗ್ರೆಸ್ ಬಾವುಟ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ರಾಜಕೀಯದಲ್ಲಿ ಯಾವುದೂ ಶಾಶ್ವತವಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವಾಗ ಒಂದು ಮಾತು ಕೊಟ್ಟಿದೆ. ಮಹಿಳೆಯರು ಹಾಗೂ ಯುವಕರಿಗಾಗಿ ಕಾರ್ಯಕ್ರಮ ನೀಡುವುದಾಗಿ ಹೇಳಿದ್ದೆ. ಅದರಂತೆ ಯುವ ನಿಧಿ ಹಾಗೂ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಬಿಜೆಪಿಯವರು ಭಾವನೆ ಮೇಲೆ ರಾಜಕೀಯ ಮಾಡಿದರೆ, ಕಾಂಗ್ರೆಸ್ ಪಕ್ಷ ಬದುಕಿನ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಹೇಳಿದರು.
-
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications