HSRP: ಹೊಸ ನಂಬರ್ ಪ್ಲೇಟ್ ಅಳವಡಿಕೆ: ವಾಹನ ಸವಾರರಿಗೆ ಸಂತಸದ ಸುದ್ದಿ!
ವಾಹನ ಸವಾರರಿಗೆ ದೀಪಾವಳಿ ಸಂದರ್ಭದಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸಂತಸದ ಸುದ್ದಿ ನೀಡಿದ್ದಾರೆ. ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ನವೆಂಬರ್ 17ರಂದು ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳಲು ಕೊನೆಯ ದಿನವಾಗಿತ್ತು, ಈಗ 2024ರ ಫೆಬ್ರವರಿ 17ರವರೆಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವಧಿಯನ್ನು ವಿಸ್ತರಣೆ ಮಾಡಲು ಚಿಂತನೆ ಮಾಡಿದ್ದೇವೆ, ಫೆಬ್ರವರಿ 17ರವರೆಗೆ ಅವಧಿಯನ್ನು ವಿಸ್ತರಿಸಲಾಗುವುದು, ಇಂದು ಅಥವಾ ನಾಳೆ ಈ ಬಗ್ಗೆ ಅಧಿಕೃತ ಗೆಜೆಟ್ ನೋಟಿಫಿಕೇಷನ್ ಬರುತ್ತದೆ ಎಂದು ಹೇಳಿದರು.

ಏನಿದು ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್?
ರಾಜ್ಯ ಸಾರಿಗೆ ಇಲಾಖೆಯು 2019ರ ಏಪ್ರಿಲ್ 1ರ ಮೊದಲು ನೋಂದಣಿಯಾಗಿರುವ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.
ನವೆಂಬರ್ 17ರ ನಂತರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಲಾಗಿತ್ತು. ಈಗ ಅವಧಿ ವಿಸ್ತರಣೆ ಮಾಡಿರುವುದು ವಾಹನ ಸವಾರರ ಆತಂಕ ದೂರಾಗಿಸಿದೆ.
ಆಗಸ್ಟ್ 17 ರಂದು, ರಾಜ್ಯ ಸರ್ಕಾರವು ಮೂಲ ಉಪಕರಣ ತಯಾರಕರ (OEM) ಅಧಿಕೃತ ಡೀಲರ್‌ಗಳಿಂದ ಪ್ರತ್ಯೇಕವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸುವ ಅಧಿಸೂಚನೆ ಹೊರಡಿಸಿತ್ತು.
ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಕೆ ಬಗ್ಗೆ ಸಾರ್ವಜನಿಕರಿಗೆ ಕೂಡ ಹೆಚ್ಚಿನ ಮಾಹಿತಿ ಇಲ್ಲವಾಗಿದೆ. ಅಲ್ಲದೆ ಆನ್‌ಲೈನ್ ಮೂಲಕವೇ ಹೊಸ ನಂಬರ್ ಪ್ಲೇಟ್‌ಗೆ ಅರ್ಜಿ ಸಲ್ಲಿಕೆ ಮಾಡಬೇಕು, ಹಣ ಪಾವತಿ ಮಾಡಬೇಕು ಇದು ಗ್ರಾಮೀಣ ಭಾಗದ ವಾಹನ ಸವಾರರಿಗೆ ಕಠಿಣ ಕೆಲಸವಾಗಿದೆ. ರಾಜ್ಯಾದ್ಯಂತ ಸುಮಾರು ಎರಡು ಕೋಟಿ ವಾಹನ ಮಾಲೀಕರು ಹೊಸ ನಂಬರ್ ಪ್ಲೇಟ್‌ಗಳನ್ನು ಪಡೆಯಬೇಕಿದೆ.
ಎಚ್‌ಎಸ್‌ಆರ್‌ಪಿ ಪಡೆಯುವುದು ಹೇಗೆ
1) ಕರ್ನಾಟಕ ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು 'Book HSRP' ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
2) ನಂಬರ್ ಪ್ಲೇಟ್ ಪಡೆಯುವ ವಾಹನ ತಯಾರಕರನ್ನು ಆಯ್ಕೆಮಾಡಿ ಮತ್ತು ನಿಮ್ಮ ವಾಹನದ ವಿವರವನ್ನು ಭರ್ತಿ ಮಾಡಬೇಕು.
3) ಎಚ್‌ಎಸ್‌ಆರ್‌ಪಿ ಜೋಡಣೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ ಮತ್ತು ಆನ್‌ಲೈನ್‌ನಲ್ಲಿ ಎಚ್‌ಎಸ್‌ಆರ್‌ಪಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. (ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿ ಮಾಡಬೇಕು).
4) ವಾಹನ ಮಾಲೀಕರ ಮೊಬೈಲ್‌ಗೆ ಒಟಿಪಿ ಸಂಖ್ಯೆ ಬರುತ್ತದೆ. ಮಾಲೀಕರು ಅವರ ಅನುಕೂಲಕ್ಕೆ ಮತ್ತು ವೆಬ್‌ಸೈಟ್‌ಗೆ ಅನುಗುಣವಾಗಿ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು.
5) ಮಾಲೀಕರು ನಂತರ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್ ಪಿ ಅಳವಡಿಸಲು ವಾಹನ ತಯಾರಕರು ಅಥವಾ ಡೀಲರ್ ಬಳಿ ಭೇಟಿ ನೀಡಬೇಕು.












Click it and Unblock the Notifications