HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್‌ಲೈನ್‌-ಮಾಹಿತಿ ಇಲ್ಲಿದೆ

HSRP Number Plate: 2019ರ ಏಪ್ರಿಲ್ 1ರ ಹಿಂದೆ ರಾಜ್ಯದಲ್ಲಿ ನೋಂದಣಿ ಆಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಸಿ ನಂಬರ್‌ ಪ್ಲೇಟ್ ಅಳವಡಿಕೆ ಮಾಡುವುದಾಗಿ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಬಳಿಕ ಗಡುವು ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಗಡುವು ನೀಡಿದೆ. ವಾಹನ ಸವಾರರು ಮಾಹಿತಿಯನ್ನು ಇಲ್ಲಿ ಗಮನಿಸಿ.

ರಾಜ್ಯದಲ್ಲಿ ಈಗಾಗಲೇ ಹಲವರು ಸಾರಿಗೆ ಇಲಾಖೆ ಸೂಚಿಸಿದಂತೆ ಎಚ್​ಎಸ್​ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಅಳವಡಿಕೆ ಮಾಡಿದ್ದು, ಕೆಲವರು ಗಡುವು ನೀಡುತ್ತಾ ಬಂದಿದ್ದರೂ ಕೂಡ ಅಳವಡಿಕೆ ಮಾಡಿಕೊಂಡಿಲ್ಲ. ಆದ್ದರಿಂದ ಸಾರಿಗೆ ಇಲಾಖೆ ಮಹತ್ವದ ನಿರ್ಧಾರಕ್ಕೆ ಬಂದಿದೆ.

HSRP number plate Adaptation extended till September 15th

ಇದೀಗ ಮತ್ತೆ ಸೆಪ್ಟೆಂಬರ್ 15ರವರೆಗೆ ಚ್​ಎಸ್​ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಅವಕಾಶ ಕಲ್ಪಿಸಿದೆ. ಇದನ್ನು ಮೀರಿ HSRPಗಳನ್ನು ಅಳವಡಿಕೆ ಮಾಡದ ವಾಹನ ಮಾಲೀಕರು ಸೆಪ್ಟೆಂಬರ್‌ 16ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಾರಿಗೆ ಇಲಾಖೆಯಿಂದ ಮಾಹಿತಿ ಹೊರಬಿದ್ದಿದೆ ಎಂದು ತಿಳಿದುಬಂದಿದೆ.

ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುಂಚಿತವಾಗಿ ನೋಂದಣಿ ಆಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿಯನ್ನು ಸಾರಿಗೆ ಇಲಾಖೆಯಿಂದ ಕಡ್ಡಾಯ ಮಾಡಲಾಗಿದೆ.

ಇನ್ನು ಸಾರಿಗೆ ಇಲಾಖೆ ಪೊಲೀಸ್ ಇಲಾಖೆ ಜೊತೆ ಸೇರಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಹಾಕಲು ನಿರ್ಧರಿಸಿದೆ. ಅವಧಿಯೊಳಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದಿದ್ದರೆ, 500-1,000 ರೂಪಾಯಿ ವರೆಗೆ ದಂಡ ವಿಧಿಸಲಿದೆ ಎಂದು ಎನ್ನುವ ಮಾಹಿತಿ ಲಭ್ಯವಾಗಿದೆ.

HSRP ಅಳವಡಿಕೆಗೆ ಸುಲಭ ವಿಧಾನಗಳು

* ಎಚ್‌ಎಸ್‌ಆರ್‌ಪಿ ಎಂದು ಟೈಪ್‌ ಮಾಡಿ ಅದರ ಮೇಲೆ ಕ್ಲಿಕ್ ಮಾಡಿ
* ಬಳಿಕ ವಾಹನದ ವಿವರಗಳನ್ನು ಭರ್ತಿ ಮಾಡಿ.
* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿದರೆ, ಅವರೇ ಬ೦ದು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಫಿಟ್ ಮಾಡಲಿದ್ದಾರೆ.

ಒಟ್ಟಿನಲ್ಲಿ ಇದೀಗ ಸಾರಿಗೆ ಇಲಾಖೆ ಕೊಟ್ಟಿರುವ ಕೊಟ್ಟಿರುವ ಗಡುವು ಕೊನೆಯ ಗಡುವು ಆಗಿದೆ ಎಂದು ತಿಳಿದುಬಂದಿದ್ದು, ಇದರೊಳಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳದಿದ್ದರೆ, ದಂಡಾಸ್ತ್ರ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+