HSRP; ನಂಬರ್ ಪ್ಲೇಟ್ ಇಲ್ಲವಾದಲ್ಲಿ ದಂಡ ಕಟ್ಟಬೇಕು

ಬೆಂಗಳೂರು, ಜನವರಿ 29: ಕರ್ನಾಟಕದ ಸಾರಿಗೆ ಇಲಾಖೆ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಿದೆ. ಗಡುವು ಮೀರಿದರೂ ಸಹ ನಂಬರ್ ಪ್ಲೇಟ್‌ ಅಳವಡಿಕೆ ಮಾಡದ ವಾಹನ ಸವಾರರಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಸಾರಿಗೆ ಇಲಾಖೆ ಮೊದಲು High Security Registration Plates (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು 2023ರ ನವೆಂಬರ್ 17ರ ಗಡುವು ಕೊಟ್ಟಿತ್ತು. ಬಳಿಕ ಅದನ್ನು 2024ರ ಫೆಬ್ರವರಿ 17ರ ತನಕ ವಿಸ್ತರಣೆ ಮಾಡಲಾಗಿದೆ.

vehicle

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸುವುದು ಕಡ್ಡಾಯವಾಗಿದೆ. ಈಗ ಫೆಬ್ರವರಿ 17ರ ಬಳಿಕವೂ ನಂಬರ್ ಪ್ಲೇಟ್ ಹಾಕಿಸಿಲ್ಲ ಎಂದರೆ ದಂಡ ಹಾಕಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಎಷ್ಟು ದಂಡ ಕಟ್ಟಬೇಕು?; ಲಕ್ಷಾಂತರ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಆದ್ದರಿಂದ ದಂಡ ಪ್ರಯೋಗದ ಮೂಲಕ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದ್ದು, ದಂಡ ಶುಲ್ಕವನ್ನು ಸಹ ನಿಗದಿ ಮಾಡಿದೆ.

ದ್ವಿಚಕ್ರ ವಾಹನಗಳಿಗೆ 390 ರಿಂದ 440 ರೂ.ಗಳು, 4 ಚಕ್ರದ ವಾಹನಗಳಿಗೆ 680 ರಿಂದ 690 ರೂ.ಗಳ ದಂಡವನ್ನು ವಿಧಿಸಲಾಗುತ್ತದೆ. ಇದಕ್ಕಾಗಿ ಸಾರಿಗೆ ಇಲಾಖೆ ಸಂಚಾರಿ ಪೊಲೀಸರ ನೆರವನ್ನು ಪಡೆಯಲಿದ್ದಾರೆ. ಕಾನೂನಿನಲ್ಲಿ ಮೊದಲ ಸಲ 1000 ರೂ., 2ನೇ ಸಲ 2 ಸಾವಿರ ರೂ. ತನಕ ದಂಡ ವಿಧಿಸಲು ಸಹ ಅವಕಾಶವಿದೆ.

ಈ ಹಿಂದೆ ಮಾತನಾಡಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, "ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ನವೆಂಬರ್ 17 ಕೊನೆಯ ದಿನವಾಗಿತ್ತು. ನಾವು ಈ ಅವಧಿಯನ್ನು ಫೆಬ್ರವರಿ 17ರ ತನಕ ವಿಸ್ತರಣೆ ಮಾಡಿದ್ದೇವೆ" ಎಂದು ಹೇಳಿದ್ದರು.

ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಕೆಯಾಗಿತ್ತು. ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಅಧಿಸೂಚನೆ ಜಾರಿ ಮಾಡುವುದಕ್ಕೆ 90 ದಿನಗಳ ಕಾಲಮಿತಿ ವಿಸ್ತರಣೆ ಮಾಡಬೇಕು ಎಂದು ಕೋರಿ ಎಸ್. ಗೌರಿಶಂಕರ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಮುಂದಿನ 15 ದಿನಗಳಲ್ಲಿ ನಂಬರ್ ಫಲಕ ಉತ್ಪಾದಕರನ್ನು ಅಂತಿಮ ಗೊಳಿಸುವಂತೆ ಸೂಚನೆಯನ್ನು ಸೆಪ್ಟೆಂಬರ್‌ನಲ್ಲಿ ನೀಡಿತ್ತು.

2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳು 90 ದಿನಗಳ ಒಳಗಾಗಿ ಹೆಚ್‌ಎಸ್‌ಆರ್‌ಪಿ ಫಲಕ ಹೊಂದಬೇಕು ಎಂದು ಕರ್ನಾಟಕ ಸರ್ಕಾರ 2023ರ ಆಗಸ್ಟ್ 18ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯನ್ನು ಭಾರತೀಯ ಅತಿ ಸರಕ್ಷಿತ ನಂಬರ್ ಫಲಕಗಳ ಉತ್ಪಾದಕರ ಒಕ್ಕೂಟ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು.

ನಂಬರ್ ಪ್ಲೇಟ್ ಹೊಂದುವ ಕುರಿತು ಸರ್ಕಾರ ಸರಿಯಾಗಿ ಮಾಹಿತಿ ನೀಡಿಲ್ಲ, ವಾಹನಗಳಿಗೆ ದಂಡ ವಿಧಿಸುವುದರಿಂದ ಸವಾರರಿಗೆ ತೊಂದರೆಯಾಗಲಿದೆ. ಹೊರ ರಾಜ್ಯದಿಂದ ಬರುವ ವಾಹನಗಳಿಗೆ ಯಾವ ರೀತಿಯಲ್ಲಿ ಕ್ರಮ ವಹಿಸಬೇಕು? ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ವಿವರಣೆ ನೀಡಲಾಗಿತ್ತು.

ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ಹಾಕುವ ಸಾರಿಗೆ ಇಲಾಖೆ ನಿರ್ಧಾರಕ್ಕೆ ವಾಹನ ಸವಾರರು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ಇಲಾಖೆ ನಂಬರ್ ಪ್ಲೇಟ್ ಆಳವಡಿಕೆ ಮಾಡುವ ಗಡುವನ್ನು ಮತ್ತಷ್ಟು ವಿಸ್ತರಣೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+