HSRP: ದಂಡ ಪಾವತಿಯಿಂದ ಪಾರಾಗುವುದು ಹೇಗೆ?

ಬೆಂಗಳೂರು, ಫೆಬ್ರವರಿ 13: ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಫೆಬ್ರವರಿ 17ರ ಗಡುವು ನೀಡಿದೆ. ಈ ಗಡುವು ವಿಸ್ತರಣೆಯಾಗಲಿದೆ ಎಂದು ಚರ್ಚೆಗಳು ನಡೆಯುತ್ತಿವೆ.

ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ಇರುವ ಗಡುವು ವಿಸ್ತರಣೆಯಾಗಲಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಕುರಿತು ಸಭೆಯನ್ನು ನಡೆಸಿ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಅಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ.

HSRP Number Plate How To Escape From Paying Fine

ಫೆಬ್ರವರಿ 17ರ ಬಳಿಕವೂ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡದ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ ಎಂಬ ಸುದ್ದಿ ಇದೆ. ಇದಕ್ಕಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ಸಂಚಾರಿ ಪೊಲೀಸರ ನೆರವು ಪಡೆಯಲಿದ್ದಾರೆ. ಆದರೆ ದಂಡದಿಂದ ಪಾರಾಗಲು ವಾಹನ ಸವಾರರಿಗೆ ದಾರಿ ಇದೆ.

ದಂಡದಿಂದ ಪಾರಾಗುವುದು ಹೇಗೆ?; ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅವಳಡಿಕೆ ಮಾಡಲು ಹೆಚ್ಎಸ್ಆರ್‌ಪಿ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಸ್ಥಳಕ್ಕೆ ಅನುಗುಣವಾಗಿ ಡೀಲರ್‌ ಸ್ಥಳವನ್ನು ಆಯ್ಕೆ ಮಾಡಬೇಕು.

ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿ ಮಾಡಿದರೆ, ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಅನುಕೂಲಕ್ಕೆ ತಕ್ಕಂತೆ ದಿನಾಂಕ ಮತ್ತು ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು. ಶುಲ್ಕ ಪಾವತಿ ಮಾಡಿದ ಬಳಿಕ ರಶೀದಿಯನ್ನು ಜೋಪಾನವಾಗಿ ಇಟ್ಟುಕೊಳ್ಳಿ.

ಸಾರಿಗೆ ಇಲಾಖೆ ಮಾಹಿತಿ ಪ್ರಕಾರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದ್ವಿಚಕ್ರ ವಾಹನಗಳಿಗೆ 390 ರಿಂದ 440 ರೂ.ಗಳು. ಮತ್ತು 4 ಚಕ್ರದ ವಾಹನಗಳಿಗೆ 680 ರಿಂದ 690 ರೂ.ಗಳ ದಂಡ ವಿಧಿಸಲಾಗುತ್ತದೆ.

ಕಾನೂನಿನಲ್ಲಿ ಮೊದಲ ಸಲ 1000 ರೂ., 2ನೇ ಸಲ 2 ಸಾವಿರ ರೂ. ತನಕ ದಂಡ ವಿಧಿಸಲು ಸಹ ಅವಕಾಶವಿದೆ. ಆದರೆ ಸಾರಿಗೆ ಇಲಾಖೆ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ನೋಂದಣಿ ಮಾಡಿದ 30 ದಿನಗಳ ಕಾಲ ರಶೀದಿ ತೋರಿಸಿದರೆ ದಂಡ ಹಾಕದಿರಲು ತೀರ್ಮಾನಿಸಿದೆ. ಆದ್ದರಿಂದ ಈಗಲೇ ನೋಂದಣಿ ಮಾಡಿಸಿ ದಂಡ ಕಟ್ಟುವುದರಿಂದ ವಾಹನ ಸವಾರರು ಪಾರಾಗಬಹುದು.

2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾದ ಎಲ್ಲಾ ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು. ಇಲಾಖೆಯ ಮಾಹಿತಿ ಪ್ರಕಾರ ಇನ್ನೂ 1.88 ಕೋಟಿ ವಾಹನಗಳಿಗೆ ನಂಬರ್ ಪ್ಲೇಟ್ ಆಳವಡಿಕೆ ಮಾಡಬೇಕಿದೆ. ಇದರಲ್ಲಿ ಸರ್ಕಾರಿ ವಾಹನಗಳು ಸೇರಿವೆ.

ಕೋಟ್ಯಾಂತರ ವಾಹನಗಳು ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕಾದ ಕಾರಣ ಸಾರಿಗೆ ಇಲಾಖೆ ಫೆಬ್ರವರಿ 17ರ ಗಡುವು ವಿಸ್ತರಣೆ ಮಾಡುವುದು ಬಹುತೇಕ ಖಚಿತವಾಗಿದೆ. ಸುಮಾರು 3 ತಿಂಗಳ ಕಾಲ ಗಡುವು ವಿಸ್ತರಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

ಸಾರಿಗೆ ಇಲಾಖೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಈಗಾಗಲೇ ಎರಡು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೆ ಈಗ ಎಲ್ಲರೂ ಒಟ್ಟಿಗೆ ನೋಂದಣಿಗೆ ಮುಂದಾಗುತ್ತಿದ್ದು, ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷವೂ ಉಂಟಾಗಿದೆ. ಆದ್ದರಿಂದ ಗಡುವು ವಿಸ್ತರಣೆ ಮಾಡುವುದು ಖಚಿತ ಎಂಬ ಮಾಹಿತಿ ಇದೆ.

ಅಲ್ಲದೇ ಎರಡು ಬಾರಿ ಗಡುವು ನೀಡಿರುವುದರಿಂದ ಸಾರಿಗೆ ಇಲಾಖೆ ದಂಡ ಪ್ರಯೋಗವನ್ನು ಆರಂಭಿಸಬಹುದು. ವಿಶೇಷ ಕಾರ್ಯಾಚರಣೆ ಮೂಲಕ ವಾಹನಗಳನ್ನು ಹಿಡಿದು ನಂಬರ್ ಪ್ಲೇಟ್ ಪರಿಶೀಲನೆ ನಡೆಸಬಹುದು. ಆದರೆ ನಂಬರ್ ಪ್ಲೇಟ್ ಆಳವಡಿಕೆ ಮಾಡಲು ನೋಂದಣಿ ಮಾಡಿದ್ದರೆ ದಂಡದಿಂದ ಪಾರಾಗಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+