HSRP: ವಾಹನ ಸವಾರರಿಗೆ ಗುಡ್ ನ್ಯೂಸ್; ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ಮತ್ತೆ ವಿಸ್ತರಣೆ-ಇಲ್ಲದೆ ಮಾಹಿತಿ
HSRP: 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಇಲ್ಲಿವರೆಗೂ ಹಲವು ಬಾರಿ ಬಾರಿ ಗಡುವು ನೀಡಿತ್ತು. ಇದೀಗ ಮತ್ತೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದೆ.
ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್ ಅಳವಡಿಕೆ ಮಾಡದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ಎಚ್‌ಎಸ್‌ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದೆಂದು ತಿಳಿಸಿದೆ.

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಇದಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಮಧ್ಯಂತರ ಆದೇಶ ಚಾಲ್ತಿಯಲ್ಲಿರಿಸಿ ಏಕಸದಸ್ಯ ನ್ಯಾಯಪೀಠವೇ ಪ್ರಕರಣ ನಿರ್ಧರಿಸಬಹುದು ಎನ್ನುವ ಅಡ್ವೊಕೇಟ್ ಜನರಲ್ ಸಲಹೆ ಬಗ್ಗೆ ಪರಿಶೀಲಿಸಬೇಕೆಂದು ಮೇಲ್ಮನವಿದಾರರ ಪರ ವಕೀಲ ಆದಿತ್ಯ ಸೋಂಧಿ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಅಡ್ವೊಕೇಟ್ ಕೆ.ಶಶಿಕಿರಣ್ ಶೆಟ್ಟಿ ಅವರು, ಏಕ ಸದಸ್ಯ ನ್ಯಾಯ ಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈಗಾಗಲೇ ಚಾಲ್ತಿಯಲ್ಲಿರುವ ಮಧ್ಯಂತರ ಆದೇಶ ಮುಂದುವರೆಯಲಿದೆ. ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ. * ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.












Click it and Unblock the Notifications