HSRP: ವಾಹನ ಸವಾರರಿಗೆ ಹೈಕೋರ್ಟ್ ಗುಡ್‌ನ್ಯೂಸ್; ಎಚ್‌ಎಸ್‌ಆರ್‌ಪಿ ಅಳವಡಿಕೆ ಬಗ್ಗೆ ಸಾರಿಗೆ ಇಲಾಖೆ ಮುಂದಿನ ನಡೆ ಏನು?
HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ನೀಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡುವ ಮೂಲಕ ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸುವ ಯೋಜನೆಯಲಿದ್ದ ಸಾರಿಗೆ ಇಲಾಖೆಗೆ ಈ ಆದೇಶ ನಿರಾಸೆ ಮೂಡಿಸಿದೆ.
2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಇಲ್ಲಿವರೆಗೂ ಹಲವು ಬಾರಿ ಬಾರಿ ಗಡುವು ನೀಡಿತ್ತು. ಇದೀಗ ಮತ್ತೆ ಕೋರ್ಟ್ ಆದೇಶ ಬರುವವರೆಗೂ ಯಾವುದೇ ದಂಡ ವಿಧಿಸುವಂತಿಲ್ಲ. ಇದರಿಂದ ವಾಹನ ಸವಾರರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ರಾಜ್ಯದಲ್ಲಿ ಕೆಲವರು ಮನೆಗೊಂದರಂತೆ ವಾಹನಗಳನ್ನು ಖರೀದಿ ಮಾಡಿದರೆ, ಇನ್ನು ಕೆಲವು ಮನೆಗಳ ಪ್ರತಿ ಸದಸ್ಯರು ಕೂಡ ವಾಹನಗಳನ್ನು ಖರೀದಿಸಿದ್ದಾರೆ. ಇನ್ನು ಇತ್ತೀಚಿನ ದಿನಗಳಲ್ಲಿ ಎಲ್ಲವೂ ಡಿಜಿಟಲ್ ಯುಗ ಆಗಿಬಿಟ್ಟಿದೆ. ಇದಕ್ಕೆ ಪೂರಕ ಆಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019ರ ಏಪ್ರಿಲ್ 1ರ ಮೊದಲ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಕಡ್ಡಾಯ ಮಾಡಿತ್ತು.
ಆದರೆ ಈಗಲೂ ತುಂಬಾ ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿಲ್ಲ ಎಂದು ತಿಳಿದುಬಂದಿದೆ. ಈಗಾಗಲೇ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31ರ ವರೆಗೆ ಗಡುವು ನೀಡಿದೆ. ಗಡುವು ಮುಕ್ತಾಯವಾದ ಬಳಿಕವೇ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿತ್ತು. ಆದರೆ, ಹೈಕೋರ್ಟ್ ಆದೇಶ ಬರುವವರೆಗೂ ಯಾವುದೇ ದಂಡ ವಿಧಿಸುವಂತಿಲ್ಲ. ಇದರಿಂದ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ ಅವರು ಮಾತನಾಡಿದ್ದು, ಕೋರ್ಟ್ ಡಿಸೆಂಬರ್ 31ರ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ಪಾಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಸ್ ಆಳವಡಿಸಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಿಕೊಳ್ಳಬೇಕಿದೆ. ಮತ್ತೊಂದೆಡೆ ಇನ್ನೂ ಹೆಚ್ಚಿನವರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಿಕೊಳ್ಳು ಮುಂದೆ ಬರುತ್ತಿಲ್ಲ. ಆದ್ದರಿಂದ ಸಾರಿಗೆ ಇಲಾಖೆಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜನೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.












Click it and Unblock the Notifications