HSRP: ವಾಹನ ಸವಾರರಿಗೆ ಮತ್ತೊಮ್ಮೆ ಗುಡ್‌ನ್ಯೂಸ್; ನೋಂದಣಿ ಗಡುವು ವಿಸ್ತರಣೆ, ಎಷ್ಟಕ್ಕೆ?
HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರು ಗಡುವು ನೀಡಲಾಗಿದೆ. ಇತ್ತೀಚೆಗಷ್ಟೇ ಹೈಕೋರ್ಟ್ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು. ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟಕ್ಕೆ ಎಂದು ಇಲ್ಲಿ ತಿಳಿಯಿರಿ.
2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಇಲ್ಲಿವರೆಗೂ ಹಲವು ಬಾರಿ ಬಾರಿ ಗಡುವು ನೀಡಿತ್ತು. ಇದೀಗ ಮತ್ತೆ ವಿಸ್ತರಣೆ ಮಾಡಿದ್ದು, ವಾಹನ ಸವಾರರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ನೋಂದಣಿಯ ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31ರ ವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಹೈಕೋರ್ಟ್ ಡಿಸೆಂಬರ್ 3ರ ವರಗೆ ಗಡುವು ನೀಡಿತ್ತು. ಆದರೆ, ಇನ್ನು ಸಂಖ್ಯೆಯ ವಾಹನಗಳಿಗೆ ಎಚ್‌ಎಸ್‌ಆರ್ ಪ್ಲೇಟ್‌ಗಳನ್ನು ಅಳವಡಿಕೆ ಮಾಡಿಲ್ಲ ಎಂದು ಉಲ್ಲೇಖಿಸಿ ಸಾರಿಗೆ ಆಯುಕ್ತರ ಕಚೇರಿಯು ಸಾರಿಗೆ ಸಚಿವರು ಮತ್ತು ಕಾರ್ಯದರ್ಶಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 5ನೇ ಬಾರಿಗೆ ಗಡುವು ವಿಸ್ತರಿಸಲಾಗಿದೆ.
ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡದಿದ್ದರೇ ವಿಧಿಸಬೇಕಾದ ದಂಡ ಮತ್ತು ಸಂಭವನೀಯ ವಿಸ್ತರಣೆಯ ಕುರಿತು ನ್ಯಾಯಾಲಯದ ತೀರ್ಪು ಡಿಸೆಂಬರ್ 4ರಂದು ಪ್ರಕವಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ ಇನ್ನು ವಾಹನ ಸವಾರರು ಪೋರ್ಟಲ್ ಮೂಲಕ ಎಚ್‌ಎಸ್‌ಆರ್‌ಪಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಬರುತ್ತಿದೆ. ನಾವು ಈ ವರ್ಷದ ಡಿಸೆಂಬರ್ 31ರ ವರೆಗೆ ಗಡುವನ್ನು ವಿಸ್ತರಿಸಲು ಯೋಜಿಸುತ್ತಿದ್ದೇವೆ. ಸಹಜವಾಗಿ, ಇದು ಡಿಸೆಂಬರ್ 4ರ ಕೋರ್ಟ್ ತೀರ್ಪಿನ ಮೇಲೆ ಅವಲಂಬಿತವಾಗಿರುತ್ತದೆಂದು ಸಾರಿಗೆ ಸಚಿವ ರಾಮಲಿಂಗಾತರೆಡ್ಡಿಯವರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಗಡುವು ವಿಸ್ತರಣೆ ಮತ್ತು ನಿಯಮ ಪಾಲಿಸದ ವಾಹನ ಸವಾರರ ವಿರುದ್ಧ ಶಿಕ್ಷಾರ್ಹ ಕ್ರಮಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ತಯಾರಿಸಲು ನಿರ್ದಿಷ್ಟ ತಯಾರಕರಿಗೆ ಮಾತ್ರ ಅನುಮತಿ ನೀಡುವ ಸಾರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ಎಚ್‌ಎಸ್‌ಆರ್‌ಪಿ ತಯಾರಕರ ಸಂಘ ಸಲ್ಲಿಸಿದ್ದ ಪರಿಶೀಲನಾ ಅರ್ಜಿಗಳನ್ನು ಸಹ ವಿಚಾರಣೆ ನಡೆಸುತ್ತಿದೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.












Click it and Unblock the Notifications