HSRP: ವಾಹನ ಸವಾರರಿಗೆ ಗುಡ್ ನ್ಯೂಸ್; ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗುದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡುವ ಮೂಲಕ ರಾಜ್ಯ ಸಾರಿಗೆ ಇಲಾಖೆ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹಾಗಾದರೆ ಎಲ್ಲಿಯವರೆಗೂ ಎನ್ನುವ ಮಾಹತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಇಲ್ಲಿವರೆಗೂ 6 ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ರಾಜ್ಯ ಸಾರಿಗೆ ಇಲಾಖೆ ಮತ್ತೆ ಇದೀಗ ಗುಡುವು ಮುಂದೂಡಿದೆ.

6 ಬಾರಿ ಗುಡುವು ವಿಸ್ತರಣೆ ಮಾಡಿದರೂ ಕೂಡ ವಾಹನ ಮಾಲೀಕರು ತಮ್ಮ ವಾಹನಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿಲ್ಲ. ಆದ್ದರಿಂದ ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ಕಲ್ಪಿಸಿದೆ. ಕಳೆದ ಬಾರಿ 2024ರ ಡಿಸೆಂಬರ್ 31ಕ್ಕೆ ಕೊನೇ ದಿನಾಂಕ ಎಂದು ಹೇಳಲಾಗಿತ್ತು. ಆದರೆ ಇದೀಗ 2025ರ ಜನವರಿ 31ರ ವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಸಮಯ ಮುಗಿದಿದೆ. ಆದರೂ ಕೂಡ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಈಗಾಗಲೇ 6 ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ.
ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51ರನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಕೆ ಮಾಡಬೇಕಿದೆ. ಕರ್ನಾಟಕದ ವಾಹಗಳಿಗೆ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ.
ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು. * ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.












Click it and Unblock the Notifications