HSRP: ವಾಹನ ಸವಾರರಿಗೆ ಬಿಗ್ ಗುಡ್ ನ್ಯೂಸ್; ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರವು ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದರೆ ಎಲ್ಲಿಯವರೆಗೂ ಎನ್ನುವ ಸಂಪೂರ್ಣ ಮಾಹತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸದ್ದು, ಏಪ್ರಿಲ್ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರವು ಆಗಸ್ಟ್ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಕಾಲಮಿತಿಯನ್ನು ಕೂಡ ನಿಗದಿ ಪಡಿಸಿತ್ತು ಎಂದಿದೆ. ಈಗಾಗಲೇ ಹಲವು ಬಾರಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಗಡುವು ವಿಸ್ತರಿಸಿ, ವಾಹನ ಸವಾರರಿಗೆ ಶುಭಸುದ್ದಿ ನೀಡಿದೆ.

ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51ರನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಕೆ ಮಾಡಬೇಕಿದೆ. ಕರ್ನಾಟಕದ ವಾಹಗಳಿಗೆ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ.
ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.












Click it and Unblock the Notifications