HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ವಿಸ್ತರಣೆ-ಇಲ್ಲಿದೆ ಮಾಹಿತಿ
HSRP: 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈಗಾಗಲೇ ಇಲ್ಲಿವರೆಗೂ ನಾಲ್ಕು ಬಾರಿ ಗಡುವು ನೀಡಿತ್ತು. ಇದೀಗ ಮತ್ತೆ ಇಂದು (ಸೆಪ್ಟೆಂಬರ್ 18) ಗಡುವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದ ವಾಹನ ಸವಾರರಿಗೆ ಸಪ್ಟೆಂಬರ್ 16ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿತ್ತು. ಆದರೆ ಈ ವಿಚಾರಣೆ ಸದ್ಯ ಹೈಕೋರ್ಟ್‌ನಲ್ಲಿ ಇದ್ದುದರಿಂದ ಸೆಪ್ಟೆಂಬರ್ 18ರ ವರೆಗೂ ಮುಂದೂಡಿಕೆ ಮಾಡಲಾಗಿತ್ತು. ಇದೀಗ ನವೆಂನಬರ್ 20ರ ವರೆಗೂ ಅಂದರೆ ಮುಂದಿನ 2 ತಿಂಗಳವರೆಗೂ ನಂಬರ್ ಪ್ಲೇಟ್ ಅಳವಡಿಕೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು. * ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.
2019ರ ಏಪ್ರಿಲ್ 1ರ ಹಿಂದೆ ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೂ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ ಮಾಡಿಸಿಕೊಳ್ಳಲು ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಇದೆ ಎಂದು ಹೇಳಲಾಗಿತ್ತು. ಸೆಪ್ಟೆಂಬರ್ 16ರೊಳಗೆ ನೋಂದಣಿ ಮಾಡಿಸಿಕೊಂಡವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ, ನೋಂದಣಿ ಮಾಡಿಸಿಲ್ಲದವರು 500 ರೂಪಾಯಿ ದಂಡ ಕಟ್ಟಬೇಕಾಗುತ್ತದೆ ಎಂದು ತಿಳಿಸಿತ್ತು. ಆದರೆ ಈ ವಿಚಾರ ಕೋರ್ಟ್‌ನಲ್ಲಿದ್ದುದ್ದರಿಂದ ದಂಡಾಸ್ತ್ರದ ದಿನಾಂಕವಾನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಲಾಗಿತ್ತು.
ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಎಚ್‌ಎಸ್‌ಆರ್‌ಪಿ ನಂಬರ್ ಅಳವಡಿಕೆಗೆ ನವೆಂಬರ್ 20ರವರೆಗೂ ಅಂದರೆ 2 ತಿಂಗಳವರೆಗೂ ಮುದೂಡಿಕೆ ಮಾಡಿದೆ. ಇದರಿಂದ ವಿವಿಧಾ ಕಾರಣಗಳಿಂದ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಇದ್ದ ಆತಂಕ ದೂರ ಆದಂತಾಗಿದೆ.
ಕೇಂದ್ರ ಸಾರಿಗೆ ಇಲಾಖೆಯಿಂದ ದೇಶಾದ್ಯಂತ ಎಲ್ಲಾ ಮೋಟಾರು ವಾಹನಗಳಿಗೆ ಒಂದೇ ರೀತಿಯ ನಂಬರ್ ಪ್ಲೇಟ್ ಅಳವಡಿಸುವ ಉದ್ದೇಶದಿಂದ ಎಚ್‌ಎಸ್‌ಆರ್‌ಪಿ ನೋಂದಣಿಗೆ ಆದೇಶ ಹೊರಡಿಸಲಾಗಿತ್ತು. ಆಯಾ ರಾಜ್ಯದ ಸಾರಿಗೆ ಇಲಾಖೆಗಳಿಗೆ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಿದ್ದು, ಬಳಿಕ ದಂಡ ವಿಧಿಸಲು ಸೂಚನೆ ನೀಡಿತ್ತು.
ಈ ಹಿನ್ನೆಲೆ ರಾಜ್ಯ ಸರ್ಕಾರ ಈಗಾಗಲೇ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವುದಕ್ಕೆ 4 ಬಾರಿ ಗಡುವು ನೀಡಿದ್ದು, ಗಡುವು ವಿಸ್ತರಣೆ ಅವಧಿಯು ಸೆಪ್ಟೆಂಬರ್ 15ಕ್ಕೆ ಮುಕ್ತಾಯ ಆಗಿತ್ತು. ಇದೀಗ ಮತ್ತೆ ನವೆಂಬರ್ 20ರ ವರೆಗೂ ಗಡುವು ನೀಡಲಾಗಿದೆ.
ರಾಜ್ಯದಲ್ಲಿ ಒಟ್ಟು 2 ಕೋಟಿಗೂ ಅಧಿಕ ವಾಹನಗಳಿವೆ. ಆದರೆ, ಇಲ್ಲಿಯವರೆಗೆ ಕೇವಲ 51,00,000 ವಾಹನಗಳು ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ನೊಂದಣಿಯಾಗಿದ್ದು, ಉಳಿದ 1.49 ಕೋಟಿ ವಾಹನಗಳು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸಿಕೊಂಡಿಲ್ಲ. ಆದ್ದರಿಂದ ಸೆಪ್ಟೆಂಬರ್ 16ರಿಂದಲೇ ಸಾರಿಗೆ ಇಲಾಖೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಸ್ಪೆಷಲ್ ಡ್ರೈವ್ ಮಾಡಲು ಚಿಂತನೆ ಮಾಡಿದೆ. ಮೊದಲ ಬಾರಿಗೆ 500 ರೂಪಾಯಿ ದಂಡ, ಎರಡನೇ ಬಾರಿಗೆ 1000 ರೂಪಾಯಿ ದಂಡ ಹಾಕಲಾಗುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿತ್ತು. ಆದರೆ ಈ ದಿನಾಂಕ ಮತ್ತೆ ಮುಂದಿನ 2 ತಿಂಗಳವರೆಗೂ ವಿಸ್ತರಣೆಯಾಗಿದೆ.












Click it and Unblock the Notifications