HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಮಾಡಿಸಿಕೊಳ್ಳುವ ವಾಹನ ಸವಾರರಿಗೆ ಮಹತ್ವದ ಮಾಹಿತಿ
HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗುದೆ. 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಈ ಬಗ್ಗೆ ವಾಹನ ಸವಾರರು ಗಮನಿಸಬೇಕಾದ ಮಹತ್ವದ ಅಪ್ಡೇಟ್‌ವೊಂದನ್ನು ಪೊಲೀಸರು ನೀಡಿದ್ದಾರೆ.
ಈಗಾಘಲೇ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಮಾಡಲಾಗಿದೆ. ಈವರೆಗೂ ರಾಜ್ಯ ಸಾರಿಗೆ ಇಲಾಖೆಯಿಂದ 6 ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇಷ್ಟು ಬಾರಿ ವಿಸ್ತರಣೆ ಆದರೂ ಕೂಡ ಇನ್ನೂ ಸಹ ಸಂಪೂರ್ಣವಾಗಿಲ್ಲ. ಯಾಕೆಂದರೆ ತುಂಬಾ ವಾಹನಗಳು ಇರುವುದರಿಂದ ಸಮಯ ಸಾಕಾಗುತ್ತಿಲ್ಲ ಎನ್ನುವ ಕೂಗುಗಳು ಕೇಳಿಬರುತ್ತಿವೆ. ಈ ನಡುವೆಯೇ ಸ್ಕ್ಯಾಮ್‌ವೊಂದು ಬಟಾಬಯಲಾಗಿದೆ.

ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯವೆಂಬ ಕಾನೂನು ತುಂಬಾ ದಿನಗಳಾದವು. ಆದ್ದರಿಂದ ವಾಹನ ಸವಾರರು ಅದರ ನೋಂದಣಿ ಮಾಡಿಕೊಳ್ಳಲು ಮಗಿಬಿದ್ದಿದ್ದಾರೆ. ಆದರೆ, ಆನ್‌ಲೈನ್‌ನಲ್ಲಿ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರವಾಗಿ ದೊಡ್ಡ ಮೋಸವೊಂದು ಹೊರಬುದ್ದಿದೆ. ಇದರಿಂದ ವಾಹನ ಸವಾರರು ಅಪ್ಪಿತಪ್ಪಿಯೂ ಯಾಮಾರಿದರೂ ಹಣ ಕಳೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಬಹುತೇಕ ಮಂದಿ ಆನ್‌ಲೈನ್‌ನಲ್ಲಿ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್‌ಗೆ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಆದರೆ ಆನ್‌ಲೈನ್‌ನಲ್ಲಿ ನಕಲಿ ಕ್ಯೂ ಆರ್ ಕೋಡ್ ಲಿಂಕ್‌ಗಳು ಹರಿದಾಡುತ್ತಿವೆ. ಅಪ್ಪಿತಪ್ಪಿಯೂ ಒಂದು ವೇಳೆ ಈ ನಕಲಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ಹಣ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ಸಂದೇಶವೊಂದು ಇದೀಗ ಹೊರಬಿದ್ದಿದೆ.
ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಿನಲ್ಲಿ ಸ್ಕ್ನಾಮ್ ಶುರು ಆಗಿದೆ. ನಕಲಿ ಲಿಂಕ್ ಹರಿಬಿಟ್ಟು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ನೋಂದಣಿ ಬಳಿಕ ಕ್ಯೂ ಆರ್ ಕೋಡ್ ನೀಡುತ್ತಾರೆ. ಆದರೆ ಕ್ಯೂ ಆರ್ ಕೋಡ್ ಟಚ್ ಮಾಡಿದರೆ ಅಪರಿಚಿತರಿಗೆ ಲಿಂಕ್ ರವಾನೆ ಆಗುತ್ತದೆ. ಸ್ವಲ್ಪ ಯಾಮಾರಿದರೂ ನಿಮ್ಮ ಹಣ ಕಳ್ಳ ಪಾಲಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಬೆಂಗಳೂರು ಪೊಲೀಸರು ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.
ಹೀಗೆ ಹಲವು ಮಂದಿ ಮೋಸ ಹೋಗಿರುವುದು ಬೆಳಕಿದೆ ಬಂದಿದೆ. ನಕಲಿ ಕ್ಯೂ ಆರ್ ಕೋಡ್ ಸ್ಕ್ಯಾಮ್‌ಗೆ ಬಲಿಯಾಗಬೇಡಿ. ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಂಗಳೂರು ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.
HSRP ನಂಬರ್ ಪ್ಲೇಟ್ ಪಡೆಯವ ವಿಧಾನ
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.












Click it and Unblock the Notifications