HSRP Registration: ಎಚ್‌ಎಸ್‌ಆರ್‌ಪಿ ಹೆಸರಿನಲ್ಲಿ ಸೈಬರ್ ಖದೀಮರ ಕೈಚಳಕ
ಬೆಂಗಳೂರು, ಫೆಬ್ರವರಿ.19: ರಾಜ್ಯದಲ್ಲಿ ಈಗ ಏನಿದ್ದರೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ವಿಷಯವೇ ದೊಡ್ಡ ಸುದ್ದಿ. ಇದು ವಾಹನ ಸವಾರರಿಗೆ ಮಾತ್ರವಲ್ಲದೇ, ಮೋಸ ಮಾಡುವವರಿಗೂ ಲಾಭದಾಯಕವಾಗಿ ಕಾಣಿಸುತ್ತಿದ್ದು, ಸುಲಿಗೆ ಮಾಡಲು ಶುರು ಮಾಡಿದ್ದಾರೆ. ವಾಹನಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡುವ ಹಿನ್ನೆಲೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದರೆ, ಸೈಬರ್ ಖದೀಮರ ಕೈಚಳಕ ಆರಂಭವಾಗಿದೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ಸೈಬರ್ ಖದೀಮರು ವಾಹನ ಸವಾರರನ್ನು ವಂಚಿಸುವ ಹುನ್ನಾರ ಮಾಡುತ್ತಿದ್ದಾರೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಅರ್ಜಿ ಸಲ್ಲಿಸುವ ಮೊದಲು ಜನರು ಎಚ್ಚರವಹಿಸಬೇಕೆಂದು ಈಗಾಗಲೇ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೂ, ಎಚ್‌ಎಸ್‌ಆರ್‌ಪಿ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಕಲಿ ಕ್ಯೂಆರ್ ಕೋಡ್‌ಗಳು ಮತ್ತು ಲಿಂಕ್‌ಗಳು ಹರಿದಾಡುತ್ತಿವೆ.

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೊಂದಣಿ ಹೆಸರಲ್ಲಿ ಮೊದಲು ನಕಲಿ ಲಿಂಕ್‌ಗಳನ್ನು ಹರಿಬಿಟ್ಟು ಈ ಸೈಬರ್ ಖದೀಮರು ನೋಂದಣಿ ಮಾಡಿಸುತ್ತಾರೆ. ಈ ನಕಲಿ ಲಿಂಕ್‌ಗಳಲ್ಲಿ ನೋಂದಣಿ ಮಾಡಿದ ಬಳಿಕ ಒಂದು ಕ್ಯೂಆರ್ ಕೋಡ್ ಸಿಗುತ್ತೆ. ಒಂದು ವೇಳೆ ನಿಮಗೆ ಬಂದಿರುವ ಕ್ಯೂಆರ್ ಕೋಡ್ ಟಚ್ ಮಾಡಿದರೆ ಅಪರಿಚಿತರ ಖಾತೆಗೆ ನಿಮ್ಮ ಖಾತೆ ಲಿಂಕ್ ಆಗುತ್ತದೆ. ಈ ವೇಳೆ ಕೊಂಚ ಯಾಮಾರಿದರೆ ಸಾಕು ನಿಮ್ಮ ಖಾತೆಯಲ್ಲಿರುವ ಹಣ ಖದೀಮರ ಪಾಲು.
ಎಚ್‌ಎಸ್‌ಆರ್‌ಪಿ ಹೆಸರಿನಲ್ಲಿ ಸೈಬರ್ ಖದೀಮರ ಕೈಚಳಕ!
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆ 17 ಕೊನೆಯ ದಿನವಾಗಿತ್ತು. ಆದರೆ, ಸಾಕಷ್ಟು ಜನರಿಗೆ ಈ ಬಗ್ಗೆ ಮಾಹಿತಿಯೇ ಇರಲಿಲ್ಲ. ಕೆಲವರಿಗೆ ಇದನ್ನು ಹೇಗೆ ಪಡೆಯೋದು ಅನ್ನೋ ಗೊಂದಲವಿತ್ತು. ಇದನ್ನೇ ಎನ್‌ಕ್ಯಾಚ್ ಮಾಡಿಕೊಂಡ ಈ ಸೈಬರ್ ಖದೀಮರು, ನಕಲಿ ವೆಬ್‌ಸೈಟ್ ಮಾಡಿಕೊಂಡು ಹಣ ವಂಚನೆಗೆ ಇಳಿದಿದ್ದಾರೆ. ಈ ಬಗ್ಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಕೂಡ ಸೂಚಿಸಿದ್ದಾರೆ.

ಇನ್ನು, ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (High security registration plate) ಅಥವಾ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪಡೆಯಲು ಸಾರಿಗೆ ಇಲಾಖೆ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ವಾಹನದ ನಂಬರ್, ಚಾಸ್ಸಿ ನಂಬರ್ ನೀಡಿ ನೋಂದಣಿ ಮಾಡಿಸಬಹುದು. ಆದರೆ, ಆನ್‌ಲೈನ್‌ನಲ್ಲಿ ಎಚ್‌ಎಸ್‌ಆರ್‌ಪಿ ಎಂದು ಹುಡುಕಿದರೇ, ಸಾರಿಗೆ ಇಲಾಖೆ ವೆಬ್‌ಸೈಟ್ ಮಾದರಿಯಲ್ಲಿ ಸೈಬರ್ ವಂಚಕರ ನಕಲಿ ವೆಬ್‌ಸೈಟ್‌ಗಳು ಓಪನ್ ಆಗುತ್ತಿವೆ. ಇದರಿಂದ ವಾಹನ ಸವಾರರಿಗೆ ತಲೆ ಕೆಟ್ಟು ಹೋಗಿದೆ.
ಇದರ ಜೊತೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿಗೆ ಶುಲ್ಕವನ್ನು ಫೋನ್ ಪೇ, ಪೇಟಿಎಂ, ಡಿಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಕಟ್ಟಬೇಕಾಗಿದೆ. ಇದಕ್ಕೆ ನಿಮ್ಮ ಮೊಬೈಲ್‌ಗೆ ಒಟಿಪಿ ಕೂಡ ಬರುತ್ತಿದೆ. ಈ ಒಟಿಪಿ ಬಳಸಿಕೊಂಡು ಸೈಬರ್ ವಂಚಕರು ನಿಮ್ಮ ಬ್ಯಾಂಕ್ ಖಾತೆಗೆ ಕನ್ನಹಾಕಲಿದ್ದಾರೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ನಲ್ಲಿ ಏನೇನಿರುತ್ತೆ?
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ನಲ್ಲಿ ನಿಮ್ಮ ಕಾರು ಅಥವಾ ದ್ವಿಚಕ್ರ ವಾಹನದ ಸಂಪೂರ್ಣ ಮಾಹಿತಿ ಇರುತ್ತೆ. ವಾಹನದ ಎಂಜಿನ್ ಸಂಖ್ಯೆ, ಚಾಸ್ಸಿ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಇರುತ್ತವೆ. ಈ ಎಲ್ಲಾ ಮಾಹಿತಿ ಡೆಟಾಬೇಸ್‌ನಲ್ಲಿ ಸಂಗ್ರಹವಾಗಿರುತ್ತದೆ. ಒಂದು ವೇಳೆ ವಾಹನ ಕಳ್ಳತನವಾದರೆ ಈ ಮಾಹಿತಿ ಬಳಸಿಕೊಂಡು ಬೇಗ ಹುಡುಕಬಹುದು. ಇನ್ನು, ಎಚ್‌ಎಸ್‌ಆರ್‌ಪಿ ನೊಂದಣಿಗೆ ಫೆಬ್ರವರಿ 17 ಕ್ಕೆ ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications