HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧಪಟ್ಟಂತೆ ಸಾರಿಗೆ ಇಲಾಖೆ ಆದೇಶ
ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಸಂಬಂಧಪಟ್ಟಂತೆ ಸಾರಿಗೆ ಇಲಾಖೆ ಅಧಿಸೂಚನೆ ಹೊರಟಿಸಿದೆ. ನವೆಂಬರ್ 17ರಂದು ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳಲು ಕೊನೆಯ ದಿನವಾಗಿತ್ತು ಈಗ ಈ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ದೀಪಾವಳಿ ಸಂದರ್ಭದಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಾಗಿ ಹೇಳಿದ್ದರು. ಈಗ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. 2024ರ ಫೆಬ್ರವರಿ 17ರವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಆದೇಶದಲ್ಲಿ ಏನಿದೆ?
ಸಾರಿಗೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ, ಕರ್ನಾಟಕ ರಾಜ್ಯದಲ್ಲಿ ದಿನಾಂಕ: 01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ನವೆಂಬರ್ 17, 2023 ರೊಳಗಾಗಿ ಹೆಚ್‌ಎಸ್ಆರ್.ಪಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಅಧಿಸೂಚನೆ ಸಂಖ್ಯೆ, ಟಿಡಿ 193 ಟಿಡಿಒ 2021, ದಿನಾಂಕ:17-8-2023 ರಂದು ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ ಅಧಿಸೂಚನೆ ಸಂಖ್ಯೆ, ಟಿಡಿ 193 ಟಿಡಿಒ 2021 ನವೆಂಬರ್ 16, 2023ರಂದು, ನವೆಂಬರ್ 17, 2023ರವರೆಗೆ ನೀಡಲಾಗಿದ್ದ ಕಾಲಾವಕಾಶ ವನ್ನು ಫೆಬ್ರವರಿ 17 2024ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದು ಹೇಳಿದೆ.
ಪತ್ರಿಕಾ ಪ್ರಕಟಣೆ
— ಸಾರಿಗೆ ಇಲಾಖೆ ,Transport Department Karnataka (@tdkarnataka) November 17, 2023
Press Release
HSRP ನಂಬರ್ ಪ್ಲೇಟ್ ಸಂಬಂಧಪಟ್ಟಂತೆ pic.twitter.com/STWpRZXlAE
ಏಪ್ರಿಲ್ 1, 2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳ ಮಾಲೀಕರು ಫೆಬ್ರವರಿ 17, 2024 ರೊಳಗಾಗಿ ತಮ್ಮ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಕೆ ಮಾಡಿಕೊಳ್ಳುವಂತೆ ಈ ಮೂಲಕ ಸಾರ್ವಜನಿಕರ ಮಾಹಿತಿಗಾಗಿ ತಿಳಿಸಲಾಗಿದೆ.
ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ. ಯನ್ನು ಅಳವಡಿಸದಿದ್ದಲ್ಲಿ ಸರ್ಕಾರಿ ಅಧಿಸೂಚನೆ ಸಂಖ್ಯೆ: ಟಿಡಿ 250 ಟಿಡಿಒ 2019, ಬೆಂಗಳೂರು ಪ್ರಕಾರ ಹಾಗೂ ಕಾಲ ಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳನ್ವಯ ದಂಡವನ್ನು ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಸವಾರರ ಆತಂಕ ದೂರ
ನವೆಂಬರ್ 17ರ ನಂತರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವ ವಾಹನಗಳಿಗೆ ದಂಡ ವಿಧಿಸುವ ಆದೇಶ ಇದ್ದ ಕಾರಣ ವಾಹನ ಸವಾರರು ಆತಂಕಗೊಂಡಿದ್ದರು, ಆದರೆ ಈಗ ಅವಧಿ ವಿಸ್ತರಣೆ ಮಾಡಿರುವುದು ಸವಾರರ ಆತಂಕವನ್ನು ದೂರವಾಗಿಸಿದೆ.
ಎಚ್‌ಎಸ್‌ಆರ್‌ಪಿ ಪಡೆಯುವುದು ಹೇಗೆ
1) ಕರ್ನಾಟಕ ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.siam.in ಭೇಟಿ ನೀಡಿ ಮತ್ತು 'Book HSRP' ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
2) ನಂಬರ್ ಪ್ಲೇಟ್ ಪಡೆಯುವ ವಾಹನ ತಯಾರಕರನ್ನು ಆಯ್ಕೆಮಾಡಿ ಮತ್ತು ನಿಮ್ಮ ವಾಹನದ ವಿವರವನ್ನು ಭರ್ತಿ ಮಾಡಬೇಕು.
3) ಎಚ್‌ಎಸ್‌ಆರ್‌ಪಿ ಜೋಡಣೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ ಮತ್ತು ಆನ್‌ಲೈನ್‌ನಲ್ಲಿ ಎಚ್‌ಎಸ್‌ಆರ್‌ಪಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. (ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿ ಮಾಡಬೇಕು).
4) ವಾಹನ ಮಾಲೀಕರ ಮೊಬೈಲ್‌ಗೆ ಒಟಿಪಿ ಸಂಖ್ಯೆ ಬರುತ್ತದೆ. ಮಾಲೀಕರು ಅವರ ಅನುಕೂಲಕ್ಕೆ ಮತ್ತು ವೆಬ್‌ಸೈಟ್‌ಗೆ ಅನುಗುಣವಾಗಿ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು.
5) ಮಾಲೀಕರು ನಂತರ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್ ಪಿ ಅಳವಡಿಸಲು ವಾಹನ ತಯಾರಕರು ಅಥವಾ ಡೀಲರ್ ಬಳಿ ಭೇಟಿ ನೀಡಬೇಕು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications