HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ಸಾರಿಗೆ ಸಚಿವರು
HSRP Number Plate: ರಾಜ್ಯದಲ್ಲಿ ಏಪ್ರಿಲ್ 1, 2019ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಡ್ಡಾಯಗೊಳಿಸಿದೆ. ಈಗಾಗಲೇ ಈ ಸಂಬಂಧ 5 ಬಾರಿ ಗಡುವು ನೀಡಲಾದೆ. ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳನ್ನು (HSRP) ಹೊಂದಿಲ್ಲದ ವಾಹನ ಮಾಲೀಕರಿಗೆ ದಂಡಾಸ್ತ್ರ ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ. ಎಚ್‌ಎಸ್‌ಆರ್‌ಪಿ ಬಂಬರ್ ಪ್ಲೇಟ್ ಹೊಂದಿಲ್ಲದ ವಾಹನ ಮಾಲೀಕರಿಗೆ ಶೀಘ್ರದಲ್ಲೇ 500 ರಿಂದ 1,000 ರೂಪಾಯಿ ವರೆಗೂ ದಂಡ ವಿಧಿಸಲಾಗುತ್ತದೆ. ಇನ್ನು ಅಕ್ಟೋಬರ್ ಆರಂಭದಲ್ಲಿಯೇ ಈ ನಿಯಮವನ್ನು ಜಾರಿಗೊಳಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 2 ಕೋಟಿಗೂ ಅಧಿಕ ಹಳೆಯ ವಾಹನಗಳ ಪೈಕಿ ಕೇವಲ 53,00,000 ಲಕ್ಷ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಕರ್ನಾಟಕ ಸಾರಿಗೆ ಇಲಾಖೆಯು ಆಗಸ್ಟ್ 2023ರಲ್ಲಿ ಅಧಿಸೂಚನೆಯನ್ನು ಹೊರಡಿಸಿದ್ದು, ಏಪ್ರಿಲ್ 1, 2019ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸಿತ್ತು.
ಆರಂಭದಲ್ಲಿ, ಮೂರು ತಿಂಗಳ ಗಡುವು ನೀಡಲಾಯಿತು. ಆದರೆ ವಾಹನ ಮಾಲೀಕರಿಂದ ಪ್ರತಿಕ್ರಿಯೆಯ ಕೊರತೆ ಮತ್ತು ಲೋಕಸಭೆಯ ಚುನಾವಣೆ ಹಿನ್ನೆಲೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಯಿತು. ಇನ್ನು ಈ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಸೆಪ್ಟೆಂಬರ್ 15ಕ್ಕೆ ಕೊನೆಯ ಗಡುವು ನೀಡಲಾಗಿತ್ತು. ಮತ್ತೆ ಇದೀಗ ಅಕ್ಟೋಬರ್ 20ರ ವರೆಗೂ ವಿಸ್ತರಣೆ ಮಾಡಿ ಇತ್ತೀಚೆಗಷ್ಟೇ ಹೈಕೋರ್ಟ್ ಆದೇಶ ಹೊರಡಿಸಿತ್ತು.
"ಇತ್ತೀಚೆಗಷ್ಟೇ ಈ ಪ್ರಕರಣದ ವಿಚಾರಣೆ ಮುಂದೂಡಲಾಗಿದ್ದು, ಎಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಯಾವುದೇ ನಿರ್ದೇಶನವನ್ನು ನೀಡಿಲ್ಲ. ತಕ್ಷಣವೇ ದಂಡ ವಿಧಿಸುವ ಬದಲು, ವಾಹನ ಚಾಲಕರಿಗೆ ನಿಯಮವನ್ನು ಅನುಸರಿಸಲು ಇಲಾಖೆ 15 ದಿನಗಳ ಕಾಲಾವಕಾಶವನ್ನು ನೀಡಿದೆ. ಬಳಿಕ ಅಕ್ಟೋಬರ್ ಆರಂಭದಲ್ಲಿ ಇದನ್ನು ಜಾರಿ ಮಾಡಲಾಗುತ್ತದೆ," ಎಂದು ಸಚಿವ ರಾಮಲಿಗಾರೆಡ್ಡಿ ಅವರು ತಿಳಿಸಿದ್ದಾರೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ನಿಯಮವನ್ನು ಬೆಂಗಳೂರಿನಲ್ಲಿ ಹೆಚ್ಚಿನ ಜನರು ಅನುಸರಿಸುತ್ತಿರುವುದು ಕಂಡುಬಂದಿದೆ. ಎರಡನೇ ಹಂತದದಲ್ಲಿ ಇನ್ನಿತರೆ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಅಳವಡಿಕೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಲಾಖೆಯ ಅಧಿಕಾರಿಯೊಬ್ಬರ ಪ್ರಕಾರ, "ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕಡ್ಡಾಯದ ಅಧಿಸೂಚನೆಯನ್ನು ಆಗಸ್ಟ್ 2023ರಲ್ಲಿ ಜಾರಿ ಮಾಡಲಾಯಿತು. ನಂತರ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳ ಅಳವಡಿಕೆಗಾಗಿ ಹಲವು ಬಾರಿ ಗಡುವು ನೀಡುತ್ತಾ ಬಂದಿದ್ದೇವೆ. ಈ ಮೂಲಕ ವಾಹನ ಸವಾರರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ," ಎಂದು ಹೇಳಿದ್ದಾರೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪಡೆಯವುದೇಗೆ?
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿ ಇನ್ ಆಗಬೇಕು.
* ನಂತರ Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ.
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ.
* HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ.
* ಮೊಬೈಲ್ ನಂಬರ್‌ಗೆ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಕೆಗೆ ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.
ದಿಢೀರ್ ವಾಹನ ಟ್ರ್ಯಾಕಿಂಗ್ ಸಾಧನಗಳು ಮತ್ತು ಪ್ಯಾನಿಕ್ ಬಟನ್‌ಗಳನ್ನು ಕಡ್ಡಾಯವಾಗಿ ಅಳವಡಿಸುವ ಬಗ್ಗೆ ಸಾರ್ವಜನಿಕ ಸೇವಾ ವಾಹನಗಳಾದ ಬಸ್‌ಗಳು, ಶಾಲಾ ವ್ಯಾನ್‌ಗಳು ಮತ್ತು ಟ್ಯಾಕ್ಸಿಗಳ ಮಾಲೀಕರಿಂದ ವಿರೋಧವಿದೆ. ಈ ಸಾಧನಗಳಿಲ್ಲದೆ, ಫಿಟ್‌ನೆಸ್ ಪ್ರಮಾಣ ಪತ್ರ ನೀಡದಿರುವ ಸಾರಿಗೆ ಇಲಾಖೆಯ ನಿಲುವು ಸರಿಯಿಲ್ಲ. ಇದಕ್ಕೆ 15,000ರಿಂದ 18,000 ರೂಪಾಯಿವರೆಗೆ ವೆಚ್ಚ ಆಗುತ್ತದೆ ಇಷ್ಟೊಂದು ಹಣ ಹೊರೆಯಾಗಲಿದೆ ಎಂದು ಆಕ್ರೋಶ ಹೊರಹಾಕಿದ್ದರು. ಇನ್ನು ಈ ಸಾಧನಗಳ ಅಳವಡಿಕೆಗೆ ಆರಂಭಿಕ ಗಡುವು ಸೆಪ್ಟೆಂಬರ್ 10 ಆಗಿತ್ತು.
ಈ ಸಾಧನಗಳ ಕೊರತೆ, ಹೆಚ್ಚಿನ ವೆಚ್ಚ ಮತ್ತು ಇತರ ಸುರಕ್ಷತೆಯಂತಹ ಸಮಸ್ಯೆಗಳನ್ನು ಉಲ್ಲೇಖಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕಕರ ಸಂಘವು ಹೆಚ್ಚುವರಿ 6 ತಿಂಗಳ ಕಾಲಾವಕಾಶವನ್ನು ಕೋರಿದೆ. ಬಳಿಕ ರಾಷ್ಟ್ರೀಯ ಪರವಾನಿಗೆ ಹೊಂದಿರುವ ಟ್ರಕ್ ಮಾಲೀಕರು ಮತ್ತು ರಸ್ತೆ ಸಾರಿಗೆ ಸಂಸ್ಥೆ ನಿರ್ವಹಿಸುವ ಬಸ್‌ಗಳಿಗೆ ಇವುಗಳನ್ನು ಅಳವಡಿಸಲು ಹೆಚ್ಚಿನ ಸಮಯಾವಕಾಶ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನುಳಿಳಿದ ಸಾರ್ವಜನಿಕ ಸೇವಾ ವಾಹನಗಳಿಗೆ, ವಿಎಲ್‌ಟಿ ಮತ್ತು ಪ್ಯಾನಿಕ್ ಬಟನ್ ಸಾಧನಗಳನ್ನು ಅಳವಡಿಸಲಾಗಿದೆಯೇ ಎಂದು ಪರಿಶೀಲಿಸಲಾಗುತ್ತದೆ. ನಂತರ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ, ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.












Click it and Unblock the Notifications