ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲವ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 19: ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು.ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೊಂದು ಲಬ್ ಜಿಹಾದ್: ಗಲ್ಲು ಶಿಕ್ಷೆ ಆಗಲಿ ಪ್ರಲ್ಹಾದ್ ಜೋಶಿ
ನೇಹಾ ಯುವತಿಯ ಕೊಲೆ ಹಿಂದೆ ಲವ್ ಜಿಹಾದ್ ಇದ್ದು ಕೂಡಲೇ ಕೊಲೆಗಾರನಿಗೆ ಗಲದಲುಯ ಶಿಕ್ಷೆ ಆಗಲಿ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಆಗ್ರಹಿಸಿದರು.
ಪ್ರೀತಿ ನಿರಾಕರಿಸಿದ್ದಕ್ಕೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯನ್ನ ಹತ್ಯೆ ಮಾಡಿದ ಪ್ರಕರಣ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ಕೇಂದ್ರಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಯುವತಿ ನೇಹಾ ಹಿರೇಮಠ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಡಹಗಲೇ ಹತ್ಯೆ ಆಗಿರೋದು ನೋಡಿದ್ರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ. ಮೊನ್ನೆ ತಾನೇ ಐದು ಜನ ಯುವಕರು ಬೈಕ್ ಮೇಲೆ ಹೊಗೋವಾಗ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡೋ ಹೇಯ ಕೃತ್ಯ ನಡೆದಿತ್ತು. ಇಂಥ ಘಟನೆಗಳಿಗೆ ಸರ್ಕಾರದ ತುಷ್ಟೀಕರಣ ನೀತಿಯೇ ಕಾರಣ. ಸಮಾಜಘಾತಕರಿಗೆ ಭಯ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸರ್ಕಾರ ಈಗಲಾದರೂ ಗಂಭೀರವಾಗಿ ಪರಿಗಣಿಸಲಿ. ನಾನು ಮೃತ ಯುವತಿಯ ತಂದೆ ಜೊತೆಗೆ ಮಾತನಾಡಿದ್ದೇನೆ. ಯುವತಿ ಯಾವುದೇ ರೀತಿ ಲವ್ ಮಾಡಿಲ್ಲಾ ಅಂತ ಹೇಳಿದ್ರು. ಲವ್ ಮಾಡದಿದ್ರೆ ಕೊಲೆ ಮಾಡಬೇಕು ಅಂತಾ ಏನಾದ್ರೂ ಇದೆಯಾ? ಮಗಳ ಹತ್ಯೆ ಹಿಂದೆ ಲವ್ ಜಿಹಾದ್ ಬಗ್ಗೆ ತಂದೆಯೇ ಹೇಳಿದ್ದಾರೆ. ಈ ಬಗ್ಗೆ ಸರಿಯಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿದರಲ್ಲದೇ, ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರು ಏನು ಉತ್ತರ ಕೊಡ್ತಾರೆ? ಎಂದು ಪ್ರಶ್ನಿಸಿದರು.
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು.
— Siddaramaiah (@siddaramaiah) April 18, 2024
ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್…
ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ, ಹುಬ್ಬಳ್ಳಿ ಗಲಭೆ ಪ್ರಕರಣ, ರಾಮೇಶ್ವರ ಸ್ಫೋಟ, ದೇಶ ವಿರೋಧಿ ಘೋಷಣೆ, ಮುಸ್ಲಿಂ ಲೀಗ್ ಧ್ವಜ ಹೀಗೆ ಸಾಲು ಸಾಲು ಸಮಾಜಘಾತಕ, ದೇಶದ್ರೋಹಿ ಘಟನೆ ನಡೆದಿವೆ. ಆದರೆ ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಮತಕ್ಕಾಗಿ ತುಷ್ಟೀಕರಣ ಮಾಡುತ್ತಿದೆ. ಈಗ ನಡೆದಿರುವ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ಆರೋಪಿ ಪರ ಯಾರೂ ವಕಾಲತ್ತು ವಹಿಸಿಕೊಳ್ಳಬಾರದು ಎಂದು ಮನವಿ ಮಾಡಿದರು.












Click it and Unblock the Notifications