Hubballi-Bengaluru Train: ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಮತ್ತೆ ಆರಂಭ: ಮಾಹಿತಿ
ಹುಬ್ಬಳ್ಳಿ - ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ಸೂಪರ್ ಫಾಸ್ಟ್ ರೈಲು ಸೇವೆಯನ್ನು ಮತ್ತೆ ಆರಂಭಿಸಲಾಗಿದೆ. ಹಲವು ದಿನಗಳ ಹಿಂದೆ ಈ ರೈಲನ್ನು ಪ್ರಯಾಣಿಕರ ಕೊರತೆಯಿದೆ ಎಂದು ಹೇಳಿ ರದ್ದು ಮಾಡಲಾಗಿತ್ತು, ಆದರೆ ಇದಕ್ಕೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು.
ಜನಾಕ್ರೋಶ ಹೆಚ್ಚಾದ ಬೆನ್ನಲ್ಲೇ ಎಚ್ಚೆತ್ತ ರೈಲ್ವೆ ಇಲಾಖೆ ಮತ್ತೆ ಹುಬ್ಬಳ್ಳಿ ಬೆಂಗಳೂರು ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಿದೆ. ನವೆಂಬರ್ 30ರಿಂದ ಮತ್ತೆ 07339/40 ಹುಬ್ಬಳ್ಳಿ - ಬೆಂಗಳೂರು ನಡುವೆ ಸೂಪರ್‌ಫಾಸ್ಟ್ ವಿಶೇಷ ರೈಲು ಸಂಚರಿಸಲಿದೆ. ಈ ರೈಲು ಸೇವೆಯನ್ನು ನವೆಂಬರ್ 30ರಿಂದ 2024ರ ಫೆಬ್ರವರಿ 29ರವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ.

ಈ ತಿಂಗಳ ಆರಂಭದಲ್ಲಿ ಈ ಸೇವೆಗಳನ್ನು ಹಠಾತ್ ಹಿಂತೆಗೆದುಕೊಂಡ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ರೈಲ್ವೆ ಅಧಿಕಾರಿಗಳು ಪ್ರಯಾಣಿಕರ ಕೊರತೆ ಪ್ರಾಥಮಿಕ ಕಾರಣವೆಂದು ಉಲ್ಲೇಖಿಸಿದ್ದಾರೆ.
Hubballi-Bengaluru Superfast Express Special Train resumes service. Immediately after I returned from Rajasthan, I took up this issue with Railway authorities and they assured that the train will resume within couple of days and accordingly they have restored the train.
— Pralhad Joshi (@JoshiPralhad) November 26, 2023
I thank… pic.twitter.com/bR8wPvM4mk
ರೈಲು ಸೇವೆ ನಿಲ್ಲಿಸಿದ್ದಕ್ಕೆ ವ್ಯಾಪಕ ಆಕ್ರೋಶ
07339/40 ದೈನಂದಿನ ವಿಶೇಷ ಸೇವೆಗಳ ಹಠಾತ್ ರದ್ದತಿಯು ಪ್ರಯಾಣಿಕರಿಗೆ ಆಶ್ಚರ್ಯ ಮತ್ತು ಆತಂಕವನ್ನುಂಟು ಮಾಡಿದೆ. ಅನೇಕ ಪ್ರಯಾಣಿಕರು ರೈಲ್ವೆ ಅಧಿಕಾರಿಗಳು ನೀಡಿದ ವಿವರಣೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಲಾಗಿತ್ತು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸುವ ಜೊತೆಗೆ, ರೈಲು ಭರ್ತಿಯಾಗಿದ್ದಕ್ಕೆ ಸಾಕ್ಷಿ ಒದಗಿಸಲಾಗಿತ್ತು.
ಪ್ರಯಾಣಿಕರು ವ್ಯಕ್ತಪಡಿಸಿದ ಕಳವಳಗಳಿಗೆ ಪ್ರತಿಕ್ರಿಯೆಯಾಗಿ, ರದ್ದುಗೊಂಡ ದೈನಂದಿನ ವಿಶೇಷ ರೈಲು ಸೇವೆಗಳನ್ನು ಮರುಪರಿಶೀಲಿಸಲು ಮತ್ತು ಮರುಸ್ಥಾಪಿಸಲು ರೈಲ್ವೆಗೆ ಸಾಮೂಹಿಕ ಮನವಿ ಮಾಡಲಾಗಿತ್ತು. ಈ ರೈಲಿನ ಪ್ರಾಮುಖ್ಯತೆ ಮತ್ತು ಜನರಿಗೆ ಆಗುತ್ತಿರುವ ಅನುಕೂಲತೆ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ಬಂದಾಗ ರೈಲು ಸೇವೆಯನ್ನು ಮತ್ತೆ ಆರಂಭಿಸಲಾಗಿದೆ.
ಹುಬ್ಬಳ್ಳಿ-ಬೆಂಗಳೂರು ಮಾರ್ಗದ ಪ್ರಾಮುಖ್ಯತೆಯನ್ನು ಗುರುತಿಸಿ, ಭಾರತೀಯ ರೈಲ್ವೆಯು 07339/40 ಸೂಪರ್‌ಫಾಸ್ಟ್ ದೈನಂದಿನ ವಿಶೇಷ ರೈಲು ಸೇವೆಗಳನ್ನು ಪುನಃಸ್ಥಾಪಿಸಲು ನಿರ್ಧರಿಸಿದೆ. ನವೆಂಬರ್ 30 ರಿಂದ ದೈನಂದಿನ ವಿಶೇಷ ರೈಲು ಸೇವೆ ಆರಂಭವಾಗಲಿದೆ.
ಧನ್ಯವಾದ ತಿಳಿಸಿದ ಪ್ರಹ್ಲಾದ್ ಜೋಶಿ
ಇನ್ನು ಹುಬ್ಬಳ್ಳಿ-ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ ಮತ್ತೆ ಆರಂಭಿಸಿರುವುದಕ್ಕೆ ಪ್ರಹ್ಲಾದ್ ಜೋಶಿ ಧನ್ಯವಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಸ್ಥಗಿತಗೊಂಡಿದ್ದ ರೈಲು ಸೇವೆಯನ್ನು ಪುನರಾರಂಭ ಮಾಡುವ ಕುರಿತು ನಾನೂ ರಾಜಸ್ಥಾನದಿಂದ ಬಂದ ತಕ್ಷಣ ರೈಲ್ವೆ ಅಧಿಕಾರಿಗಳಿಗೆ ಪ್ರಸ್ತಾವಿಸಿದ್ದೆ ಅದರಂತೆ ನನ್ನ ಪ್ರಸ್ತಾವನೆಯನ್ನು ಪರಿಗಣಿಸಿ ತಕ್ಷಣವೇ ಆರಂಭಿಸಿ ಆದೇಶ ಹೊರಡಿಸಿದ ರೈಲ್ವೆ ಅಧಿಕಾರಿಗಳಿಗೆ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರಿಗೆ ಧನ್ಯವಾದಗಳು." ಎಂದು ಹೇಳಿದ್ದಾರೆ.
ಎಕ್ಸ್‌ಪ್ರೆಸ್ ರೈಲು ಈ ಹಿಂದೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಿತ್ತು ಮತ್ತು ಅದರ ಸೇವೆಗಳ ಪುನರಾರಂಭ ಮಾಡಿರುವುದು ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.












Click it and Unblock the Notifications