ಇಂದು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟ
ಕರ್ನಾಟಕ, ಸೆಪ್ಟೆಂಬರ್ 6: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಂದೇ ಫಲಿತಾಂಶ ಘೋಷಿಸಲಾಗುವುದು.
ಉತ್ತರ ಕರ್ನಾಟಕ ಭಾಗದ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಗಳ ಎಣಿಕೆ ನಡೆಯುತ್ತಿದ್ದು, ಈ ಪಾಲಿಕೆಗಳ ಚುನಾವಣಾ ಫಲಿತಾಂಶಗಳು ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ.
ರಾಜ್ಯದ ಉತ್ತರ ಭಾಗದಲ್ಲಿ ಇರುವ ಈ ಪಾಲಿಕೆಗಳಲ್ಲಿ ಜೆಡಿಎಸ್ ಪ್ರಭಾವ ಕಡಿಮೆ ಇರುವ ಕಾರಣ, ವಾಸ್ತವವಾಗಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತದೆ.

ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶೇ.58.59 ರಷ್ಟು ಮತದಾನ ದಾಖಲಾಗಿದ್ದರೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಶೇ.53.81 ರಷ್ಟು ಮತದಾನ ದಾಖಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿ- 300 ಅಭ್ಯರ್ಥಿಗಳು ಕಣದಲ್ಲಿದ್ದಾರೆ
55 ವಾರ್ಡ್‌ಗಳ ಕಲಬುರಗಿ ಮಹಾನಗರ ಪಾಲಿಕೆಗೆ 300 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ನಿಂದ 55, ಬಿಜೆಪಿಯಿಂದ 47, ಜಾತ್ಯತೀತ ಜನತಾ ದಳದಿಂದ 45, ಆಮ್ ಆದ್ಮಿ ಪಕ್ಷದಿಂದ (ಎಎಪಿ) 26 ಮತ್ತು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಿಂದ 83 ಸ್ವತಂತ್ರ ಅಭ್ಯರ್ಥಿಗಳಿದ್ದಾರೆ. ಕಣದಲ್ಲಿರುವ ಇತರ ಕೆಲವು ಪಕ್ಷಗಳು ಕಡಿಮೆ ಸಂಖ್ಯೆಯ ಅಭ್ಯರ್ಥಿಗಳನ್ನು ಹೊಂದಿವೆ.
ಹುಬ್ಬಳ್ಳಿ- ಧಾರವಾಡ ಪಾಲಿಕೆಯಲ್ಲಿ 420 ಅಭ್ಯರ್ಥಿಗಳು
82 ವಾರ್ಡ್‌ಗಳ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ 420 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲ ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸ್ಪರ್ಧಿಸಿವೆ. 82 ವಾರ್ಡ್‌ಗಳಲ್ಲಿ ಒಟ್ಟು 3,842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 100 ವಾರ್ಡ್‌ಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ.
Recommended Video
ಬೆಳಗಾವಿ - 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ
58 ವಾರ್ಡ್‌ಗಳ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು 2013 ರಲ್ಲಿ 82 ವಾರ್ಡ್‌ಗಳ ಹುಬ್ಬಳ್ಳಿ- ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ 55 ವಾರ್ಡ್‌ಗಳ ಕಲಬುರಗಿ ನಿಗಮವನ್ನು ಗೆದ್ದಿತ್ತು. ಬೆಳಗಾವಿ ನಿಗಮವು 58 ಸ್ಥಾನಗಳನ್ನು ಹೊಂದಿದೆ.












Click it and Unblock the Notifications