Breaking; ಹುಬ್ಬಳ್ಳಿ-ನಿಜಾಮುದ್ದೀನ್ ರೈಲು ವೇಳಾಪಟ್ಟಿ
ಬೆಂಗಳೂರು, ಅಕ್ಟೋಬರ್ 11; ಹುಬ್ಬಳ್ಳಿ-ದೆಹಲಿ (ನಿಜಾಮುದ್ದೀನ್) ರೈಲಿಗೆ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಚಾಲನೆ ನೀಡಲಿದ್ದಾರೆ. ವಾರಕ್ಕೆ ಒಂದು ಬಾರಿ ಈ ರೈಲು ಸಂಚಾರ ನಡೆಸಲಿದೆ.
ಹುಬ್ಬಳ್ಳಿ-ನಿಜಾಮುದ್ದೀನ್ ರೈಲು ಹುಬ್ಬಳ್ಳಿ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿತ್ತು. ಈ ರೈಲಿನ ಮೂಲಕ ರಾಷ್ಟ್ರ ರಾಜಧಾನಿಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತದೆ.

ರೈಲು ಸಂಖ್ಯೆ 20657/ 20658 ಸೂಪರ್ ಫಾಸ್ಟ್ ರೈಲಿಗೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸಚಿವರು ಚಾಲನೆ ನೀಡಲಿದ್ದಾರೆ. ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಂತಾದವರು ಉಪಸ್ಥಿತರಿರುವರು.
ಈ ರೈಲು ಪ್ರತಿ ಶುಕ್ರವಾರ ರಾತ್ರಿ 11.50ಕ್ಕೆ ಹುಬ್ಬಳ್ಳಿಯಿಂದ ಹೊರಟು ಭಾನುವಾರ ಬೆಳಗ್ಗೆ 10.40ಕ್ಕೆ ತಲುಪಲಿದೆ. ಈ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಿ, ಪ್ರತಿದಿನ ರೈಲನ್ನಾಗಿ ಪರಿವರ್ತನೆ ಮಾಡಬೇಕು ಎಂಬ ಬೇಡಿಕೆಯೂ ಇದೆ.
ಹುಬ್ಬಳ್ಳಿ-ನಿಜಾಮುದ್ದೀನ್ ರೈಲು ಕೋಪರಗಾವ್‌ನಲ್ಲಿ ನಿಲುಗಡೆ ಹೊಂದಿದೆ. ಇದರಿಂದಾಗಿ ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗಲಿದೆ. ಬೆಳಗಾವಿ, ಪುಣೆ, ಅಹಮದ್ ನಗರ, ಇಟಾರ್ಸಿ, ಭೋಪಾಲ್, ಆಗ್ರಾ ಮೂಲಕ ಈ ರೈಲು ನವದೆಹಲಿ ತಲುಪಲಿದೆ.
ರೈಲಿನ ವೇಳಾಪಟ್ಟಿ

ಸದ್ಯದ ವೇಳಾಪಟ್ಟಿ ಪ್ರಕಾರ ಹುಬ್ಬಳ್ಳಿ-ನಿಜಾಮುದ್ದೀನ್ ರೈಲು ವಾರಕ್ಕೊಮ್ಮೆ ಸಂಚರಿಸಲಿದೆ. ಈ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಲು ಪ್ರಯತ್ನವನ್ನು ನಡೆಸಲಾಗುತ್ತದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸದ್ಯ ನಿಜಾಮುದ್ದೀನ್ ರೈಲು ನಿಲ್ದಾಣ ಸಂಚಾರ ದಟ್ಟಣೆಯಿಂದ ಕೂಡಿದೆ. ಪ್ರತಿದಿನದ ರೈಲಿಗೆ ಈಗ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇದೆ. ಜೋಡಿ ಹಳಿ ಕಾಮಗಾರಿ, ವಿದ್ಯುದೀಕರಣದ ಕಾಮಗಾರಿಯ ಕಾರಣದಿಂದ ಸದ್ಯ ವೇಳಾಪಟ್ಟಿ ಪರಿಷ್ಕರಣೆ ಕಷ್ಟ ಸಾಧ್ಯ ಎಂಬುದು ಅಧಿಕಾರಿಗಳ ಅಭಿಪ್ರಾಯ.












Click it and Unblock the Notifications