KKRTC: ಹುಬ್ಬಳ್ಳಿ-ವಿಜಯಪುರ ಬಸ್ ಅಪಘಾತ! 9 ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಸಾರಿಗೆ ಸಂಸ್ಥೆಯ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಮುಗುಚಿ ಬಿದ್ದು ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ ಒಟ್ಟು ಒಂಬತ್ತು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ವಾಣಿಜ್ಯ ನಗರ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ ನಗರದಿಂದ ಎಂದಿನಂತೆ ವಿಜಯಪುರಕ್ಕೆ ಬಸ್ ತೆರಳುತ್ತಿದ್ದ ವೇಳೆ ಭಾನುವಾ ಸಂಜೆ ಈ ಘಟನೆ ಸಂಭವಿಸಿದೆ. ಹುಬ್ಬಳ್ಳಿಯಿಂದ ಸಂಚಾರ ಆರಂಭಿಸಿ ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್ ಬಳಿ ರಸ್ತೆ ಪಕ್ಕಕ್ಕೆ ಬಸ್ ಉರುಳಿದ್ದು, ಬೋರಾಗಿ ಬಿದ್ದಿದೆ.

Hubballi- Vijayapura Bus

ಹುಬ್ಬಳ್ಳಿ-ಸೊಲ್ಲಾಪುರ ರಸ್ತೆಯ ಸಂಚಾರ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ವಿಜಯಪುರ 1ನೇ ಡಿಪೊಗೆ ಸೇರಿದ ಕೆಎ28 ಎಫ್ 2263 ಸಂಖ್ಯೆಯ ಬಸ್ ಇದಾಗಿದ್ದು, ಮಧ್ಯಾಹ್ನ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ರಾಷ್ಟ್ರೀಯ ಹೆದ್ದಾರಿ 218, ಹುಬ್ಬಳ್ಳಿ-ಸೊಲ್ಲಾಪುರ ರಸ್ತೆಯಲ್ಲಿ ಸಂಚಾರ ಆರಂಭಿಸಿತ್ತು. ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ರಸ್ತೆಯ ಪಕ್ಕಕ್ಕೆ ಮುಗುಚಿ ಅಪಘಾತ ಸಂಭವಿಸಿದೆ ಎಂದು ಚಾಲಕ, ಸಿಬ್ಬಂದಿಯು ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸದರಿ ಬಸ್‌ನಲ್ಲಿ ಒಟ್ಟು 38 ಜನ ಪ್ರಯಾಣಿಕರಿದ್ದರು. ನಿರ್ವಾಹಕ ಹಾಗೂ 8 ಪ್ರಯಾಣಿರು ಸೇರಿದಂತೆ 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುತ್ತವೆ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರ ಸಹಕಾರದಲ್ಲಿ ಗಾಯಾಳುಗಳಿಗೆ ನರಗುಂದ ಸಕಾ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕೊಡಿಸಲಾಗುತ್ತಿದೆ.

NWKRTC ಅಧಿಕಾರಿಗಳಿಂದ ಅಪಘಾತ ಮೇಲ್ವಿಚಾರಣೆ

NWKRTC ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ವಿಭಾಗೀಯ ತಾಂತ್ರಿಕ ಇಂಜಿನಿಯರ ದೀಪಕ ಜಾಧವ್‌, ವಿಭಾಗೀಯ ಸಂಚಾರ ಅಧಿಕಾರಿ ವೈ.ಎಂ.ಶಿವರಡ್ಡಿ ಹಾಗೂ ನವಲಗುಂದ ಡಿಪೊ ಮ್ಯಾನೇಜರ್ ಪ್ರಸಾದ ತಳವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪರಿಹಾರ ಕ್ರಮಗಳ ಮೇಲ್ವಿಚಾರಣೆ ಮಾಡಿದರು.

ಅಪಘಾತ ಸಂಭವಿಸಿದ ಸ್ಥಳದಲ್ಲಿ ರಸ್ತೆಯು ಪಕ್ಕದ ಹೊಲದಿಂದ 6 ರಿಂದ 8 ಅಡಿಗಳಷ್ಟು ಎತ್ತರದಲ್ಲಿದ್ದು ಬಸ್ಸು ನಿಧಾನವಾಗಿ ರಸ್ತೆ ಪಕ್ಕಕ್ಕೆ ವಾಲಿದ್ದರಿಂದ ಬಸ್ ರಸ್ತೆ ಪಕ್ಕ ಬೋರಲಾಗಿ ಉರುಳಿದೆ. ಸಣ್ಣ ಅಪಘಾತವಾಗಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಇಲಾಖಾ ಮಟ್ಟದ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+