Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಮಹತ್ವದ ನಿರ್ಧಾರ ತೆಗೆದುಕೊಂಡ ರಾಜ್ಯ ಸರ್ಕಾರ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣವು ರಾಜಕೀಯ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದ್ದೇವೆ. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಇನ್ನೂ ಕೂಡ ವಿವರವಾಗಿ ತನಿಖೆ ಮಾಡಬೇಕು ಎಂದು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಬೇಕಾದರೆ ತನಿಖೆಯಾಗಬೇಕು ಎಂದಿದ್ದಾರೆ.

Hubballi woman s undressing case Ka State government takes important decision

ಡಿ.ಕೆ.ಶಿವಕುಮಾರ್ ಜವಾಬ್ದಾರಿಯುತ ಸಚಿವರು ಮತ್ತು ಉಪ ಮುಖ್ಯಮಂತ್ರಿಗಳು. ಕುಮಾರಸ್ವಾಮಿ ಹೇಳುವ ಪ್ರಕಾರ ಹೆಚ್ಚಿನ ಅಧಿಕಾರ ಇಲ್ಲ ಎಂಬುದು ಸಂವಿಧಾನಾತ್ಮಕವಾಗಿ ಸರಿ ಇರಬಹುದು. ಆದರೆ, ಸರ್ಕಾರದ ಪ್ರತಿನಿಧಿಯಾಗಿ ಡಿ.ಕೆ.ಶಿವಕುಮಾರ್ ಅಲ್ಲಿಗೆ ಹೋಗಿರುವುದನ್ನು ತಪ್ಪು ಎಂದು ಹೇಳುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ಡೆಪ್ಯೂಟಿ ಚೀಫ್ ಮಿನಿಸ್ಟರ್ ಎಂದು ಪ್ರಮಾಣ ವಚನ ಕೊಟ್ಟಿದ್ದಾರೆ. ನಾನು ಹೋಗುವುದಕ್ಕೆ ಆಗಿಲ್ಲ. ಆ ಜವಾಬ್ದಾರಿಯಿಂದ ಅವರು ಹೋಗಿದ್ದಾರೆ ಎಂದಿದ್ದಾರೆ.

ನಾನು ಇಲಾಖೆಯ ಸಚಿವ. ಘಟನೆ ನಡೆದ ಕೂಡಲೇ ನಾನು ಹೋಗಿದ್ದರೆ, ಪೊಲೀಸರಿಗೆ ಏನೇನೋ ಸೂಚನೆಗಳನ್ನು ಕೊಟ್ಟಿದ್ದಾರೆ. ಅವರ ಪರವಾಗಿ ಸೂಚನೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತವೆ. ನಾವು ಭೇಟಿ ನೀಡುವಾಗ ಯೋಚನೆ ಮಾಡಿ, ತನಿಖೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣದಿಂದ ವಿಳಂಬ ಮಾಡುತ್ತೇವೆ. ಅದೇ ಕಾರಣದಿಂದ ಇದುವರೆಗೂ ಬಳ್ಳಾರಿಗೆ ಹೋಗಿಲ್ಲ.

ಉಪಮುಖ್ಯಮಂತ್ರಿಯಾಗಿ, ಸಚಿವರಾಗಿ, ಸರ್ಕಾರದ ಪ್ರತಿನಿಧಿಯಾಗಿ ಡಿ.ಕೆ.ಶಿವಕುಮಾರ್ ಅವರು ಹೋಗಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಮೃತ ಕುಟುಂಬಸ್ಥರನ್ನು ಭೇಟಿ ಮಾಡಿ, ಸಾಂತ್ವಾನ ಹೇಳಿದ್ದಾರೆ. ಇದು ತಪ್ಪು ಎನ್ನುವುದಾದರೆ ಏನು ಹೇಳಬೇಕು. ಸರ್ಕಾರದ ಪ್ರತಿನಿಧಿಯಾಗಿ ಭೇಟಿ ನೀಡಲು ಯಾರ ಅನುಮತಿ ಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ನಿಜವಾದ ಹಸ್ತಾಕ್ಷೇಪ ಮಾಡಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ಕೊಟ್ಟು, ಅದರ ತೀರ್ಮಾನದ ಮೇಲೆ ಬೇರೆ ರೀತಿಯ ಪರಿಣಾಮಗಳಾಗಿದ್ದರೆ ಕುಮಾರಸ್ವಾಮಿಯವರ ಹೇಳಿಕೆಯನ್ನು ಒಪ್ಪೋಣ. ಆದರೆ, ಜವಾಬ್ದಾರಿಯುತ ಸರ್ಕಾರದ ಪ್ರತಿನಿಧಿ ಭೇಟಿ ನೀಡಿರುವುದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದರು.

ಇದುವರೆಗೂ ನಮ್ಮ ತೀರ್ಮಾನಗಳಲ್ಲಿ ಯಾರು ಕೂಡ ಇಲ್ಲಿವರೆಗೆ ಹಸ್ತಕ್ಷೇಪ ಮಾಡಿಲ್ಲ. ಮುಖ್ಯಮಂತ್ರಿಗಳು ಮತ್ತು ನಾನು ಒಟ್ಟಾಗಿ ಚರ್ಚಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ. ಹುಬ್ಬಳ್ಳಿ ಪ್ರಕರಣವನ್ನು ಸಿಐಡಿಗೆ ವಹಿಸುತ್ತೇನೆ ಎಂದು ನಾನು ನೇರವಾಗಿ ಹೇಳಬಹುದಿತ್ತು. ಆದರೆ, ಸಿಎಂ ಗಮನಕ್ಕೆ ತರದೇ ಇಂತಹ ತೀರ್ಮಾನಗಳನ್ನು ಮಾಡಲಾಗುತ್ತದೆಯೇ ಎಂದು ಕೇಳಿದ್ದಾರೆ.

ಬಳ್ಳಾರಿ ವಲಯ ಐಜಿಪಿ ವರ್ಗಾವಣೆ ಮಾಡುವ ವಿಚಾರ ನನಗೆ ಗೊತ್ತಿಲ್ಲ ಎಂದು ನಾನು ಹೇಳಿಲ್ಲ. ನನಗೆ ಗೊತ್ತಿದೆ, ವರ್ಗಾವಣೆಯನ್ನು ಡಿಪಿಎಆರ್‌ನವರು ಮಾಡುತ್ತಾರೆ. ಆ ಅರ್ಥದಲ್ಲಿ ಹೇಳಿದ್ದೇನೆ. ಕಡತಕ್ಕೆ ಸಹಿ ಹಾಕಿ, ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವವರು ಮುಖ್ಯಮಂತ್ರಿ ಅವರು ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+