ಉಬ್ಲೋ ವಾಚ್ ಉಡುಗೊರೆ ಬಗ್ಗೆ ಸಿಬಿಐ ತನಿಖೆ ಸಾಧ್ಯವಿಲ್ಲ!
ಬೆಂಗಳೂರು, ಜೂನ್ 12 : ಸಿದ್ದರಾಮಯ್ಯ ಉಬ್ಲೋ ವಾಚ್ ಪಡೆದಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅನುಪಮಾ ಶೆಣೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ಈ ಅರ್ಜಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿತು.
ಅರ್ಜಿಯನ್ನು ಅರ್ಜಿದಾರರು ಹಿಂಪಡೆಯಬಹುದು, ಅಗತ್ಯವಿದ್ದರೆ ಅರ್ಜಿದಾರರು ಬೇರೊಂದು ವೇದಿಕೆಯಲ್ಲಿ ಪ್ರಕರಣದ ಸಂಬಂಧ ಕಾನೂನು ಹೋರಾಟ ಮುಂದುವರೆಸಬಹುದು ಎಂದು ಹೇಳಿತು. ಅರ್ಜಿದಾರರ ಪರ ವಕೀಲ ಎನ್.ಪಿ.ಅಮೃತೇಶ್ ಅರ್ಜಿಯನ್ನು ವಾಪಸ್ ಪಡೆದರು.

ಪ್ರಸ್ತುತ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಡಾ.ಗಿರೀಶ್ ಚಂದ್ರ ವರ್ಮಾ ಅವರಿಂದ ದುಬಾರಿ ಮೌಲ್ಯದ ಉಬ್ಲೋ ವಾಚ್ ಉಡುಗೊರೆ ಪಡೆದಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅನುಪಮಾ ಶೆಣೈ ಅರ್ಜಿ ಸಲ್ಲಿಸಿದ್ದರು.
ಉಬ್ಲೋ ವಾಚ್ ಸರ್ಕಾರದ ಆಸ್ತಿ : 2016ರಲ್ಲಿ ಸಿದ್ದರಾಮಯ್ಯ ಅವರ ಕೈಯಲ್ಲಿ ವಜ್ರ ಖಚಿತ ಊಬ್ಲೋ ವಾಚ್ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಆರೋಪ ಮಾಡಿದ್ದರು.
ವಜ್ರ ಖಚಿತ ವಾಚ್ ವಿವಾದದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಮಾರ್ಚ್ 2ರಂದು ಸಿದ್ದರಾಮಯ್ಯ ಅವರು ವಾಚ್ ಅನ್ನು ಅಂದಿನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು, ಈಗ ವಾಚ್ ಸರ್ಕಾರದ ಆಸ್ತಿಯಾಗಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications