ಊಬ್ಲೋ ವಾಚ್ ವಿವಾದ : ಎಚ್ಡಿಕೆ ವಿರುದ್ಧ ತನಿಖೆಗೆ ಆದೇಶ!

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 05 : ವಜ್ರ ಖಚಿತ ಊಬ್ಲೋ ವಾಚ್ ವಿವಾದಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ನಡೆಸಲು ಕೋರ್ಟ್ ಆದೇಶ ನೀಡಿದೆ. ಊಬ್ಲೋ ವಾಚನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ನೀಡಿದ್ದಾರೆ.

ಬೆಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದೆ. ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಅವರು ಕುಮಾರಸ್ವಾಮಿ ಅವರ ವಿರುದ್ಧ ದೂರು ಕೊಟ್ಟಿದ್ದರು. [ವಜ್ರದ ವಾಚ್ ಕೊಟ್ಟ ಸಿದ್ದರಾಮಯ್ಯ ಹೇಳಿದ್ದೇನು?]

hd kumaraswamy

ಸ್ವತಃ ಮುಖ್ಯಮಂತ್ರಿಗಳೇ ಊಬ್ಲೋ ವಾಚ್ ಸ್ನೇಹಿತ ಗಿರೀಶ್ ಚಂದ್ರ ಶರ್ಮಾ ಕೊಟ್ಟಿದ್ದು ಎಂದು ಹೇಳಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ವಾಚ್‌ ಡಾ.ಸುಧಾಕರ ಶೆಟ್ಟಿ ಅವರಿಗೆ ಸೇರಿದ್ದು ಎಂದು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಹಗರಣದಲ್ಲಿ ಸಿಲುಕಿಸಲು ಕುಮಾರಸ್ವಾಮಿ ಸಂಚು ರೂಪಿಸಿದ್ದಾರೆ ಎಂದು ದೂರು ನೀಡಿದ್ದರು. [ವಾಚ್ ವಾರ್ : ಎಚ್ಡಿಕೆಯಿಂದ ಕಾಗೋಡು ತಿಮ್ಮಪ್ಪ ತನಕ!]

ಡಾ.ಸುಧಾಕರೆ ಶೆಟ್ಟಿ ಅವರು ವಾಚ್ ನನ್ನದಲ್ಲ ಎಂದು ಹೇಳಿದ್ದಾರೆ. ಆದರೆ, ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ತನಿಖಾಧಿಕಾರಿ ಜೊತೆ ಸೇರಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರ ವಿರುದ್ಧ ಒಳಸಂಚು ರೂಪಿಸಿದ್ದಾರೆ ಎಂದು ಶಂಕರ ಮುನವಳ್ಳಿ ದೂರು ಕೊಟ್ಟಿದ್ದರು. [ಗಡಿಯಾರದ ಗಲಾಟೆ, ಎಚ್ಡಿಕೆ ಬುಟ್ಟಿಯಲ್ಲಿ ಹೊಸ ಹಾವು!]

ಈ ದೂರಿನಲ್ಲಿ ಕುಮಾರಸ್ವಾಮಿ ಅವರು ಮೊದಲ ಆರೋಪಿಯಾಗಿದ್ದು, ಕಬ್ಬನ್ ಪಾರ್ಕ್ ತನಿಖಾಧಿಕಾರಿ 2ನೇ ಆರೋಪಿಯಾಗಿದ್ದಾರೆ. ಈ ದೂರನ್ನು ಆಧರಿಸಿ ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ನಡೆಸಲು ಜೆಎಂಎಫ್‌ಸಿ ಕೋರ್ಟ್ ಆದೇಶ ನೀಡಿದೆ. [ಸಖತ್ ಮಿಂಚುತ್ತಿರುವ ದುಬಾರಿ ಉಬ್ಲೋ ವಾಚುಗಳ ಕಥೆ]

ಏನಿದು ವಾಚ್ ವಿವಾದ? : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಲ್ಲಿ ವಜ್ರ ಖಚಿತ ಊಬ್ಲೋ ವಾಚ್ ಇದೆ ಎಂದು ಕುಮಾರಸ್ವಾಮಿ ಮೊದಲು ಆರೋಪ ಮಾಡಿದ್ದರು. ನಂತರ ರಾಜ್ಯದಲ್ಲಿ ವಾಚ್ ವಿವಾದದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಮಾರ್ಚ್ 2ರ ಬುಧವಾರ ಮಧ್ಯಾಹ್ನ 3.30ಕ್ಕೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ದುಬಾರಿ ಬೆಲೆಯ ಊಬ್ಲೋ ವಾಚ್‌ ಅನ್ನು ಪ್ರತಿಪಕ್ಷಗಳ ಗದ್ದಲದ ನಡುವೆಯೇ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Bengaluru Judicial Magistrate First Class court has ordered police investigation against Former CM H.D. Kumaraswamy and the investigation officer attached to Cubbon Park Police Station. Congress leader Shankar H. Munavalli filed the complaint to court that, Kumaraswamy had hatched a conspiracy along with the investigating officer to defame the reputation of Chief Minister Siddaramaiah in the Hublot watch issue.
Please Wait while comments are loading...