ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಡ್‌ಹುಡ್‌ ಚಂಡಮಾರುತ, ಆಂಧ್ರಕ್ಕೆ ಕರ್ನಾಟಕದ ನೆರವು

|
Google Oneindia Kannada News

ಬೆಂಗಳೂರು, ಅ. 14 : ಆಂಧ್ರ ಪ್ರದೇಶದಲ್ಲಿ ಹುಡ್‌ಹುಡ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರ ನೆರವು ನೀಡಲಿದೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ವಿದ್ಯುತ್ ಇಲಾಖೆ ಸಿಬ್ಬಂದಿಗಳನ್ನು ಆಂಧ್ರ ಪ್ರದೇಶಕ್ಕೆ ಕಳುಹಿಸಲು ಒಪ್ಪಿಗೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್‌ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ ಸ್ಥಿತಿಗೆ ತರಲು ಕರ್ನಾಟಕ ಸರ್ಕಾರದ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು.[ಹುಡ್ ಹುಡ್ ಸೃಷ್ಟಿಸಿದ ಅವಾಂತರ ನೋಡಿ]

Karnataka to help for Andhra Pradesh to restore electricity

ಚಂಡಮಾರುತದಿಂದಾಗಿ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ, ವಿದ್ಯುತ್ ತಂತಿಗಳು ಕಡಿತಗೊಂಡಿವೆ ಹಾಗೂ ವಿದ್ಯುತ್ ಪರಿವರ್ತಕಗಳು ಕೆಟ್ಟು ಹೋಗಿವೆ. ಇವೆಲ್ಲವನ್ನೂ ದುರಸ್ತಿಪಡಿಸಲು ರಾಜ್ಯದ ಸಹಕಾರ ಒದಗಿಸುವಂತೆ ಚಂದ್ರಬಾಬು ನಾಯ್ಡು ಅವರು ಮಾಡಿದ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ಹಾಗೂ ಇತರೆ ವಿದ್ಯುತ್ ಸರಬರಾಜು ಸಂಸ್ಥೆಗಳಿಂದ ಇಂಜಿನಿಯರ್‌ಗಳನ್ನು ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡಲು ಸಮ್ಮತಿ ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿರುವುದಕ್ಕೆ ಚಂದ್ರಬಾಬು ನಾಯ್ಡು ಅವರು ಧನ್ಯವಾದ ಅರ್ಪಿಸಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮದ 2000 ತಾಂತ್ರಿಕ ಸಿಬ್ಬಂದಿಯನ್ನು ಆಂಧ್ರಪ್ರದೇಶಕ್ಕೆ ಕಳುಹಿಸಲು ಸಿಎಂ ಒಪ್ಪಿಗೆ ನೀಡಿದ್ದಾರೆ. ಮುಂದಿನ 10 ದಿನಗಳಲ್ಲಿ ಸಿಬ್ಬಂದಿ ಆಂಧ್ರಕ್ಕೆ ತೆರಳಲಿದ್ದು, ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

English summary
The Karnataka government agreed to provide manpower support to Andhra Pradesh to restore electricity supply in its Hudhud cyclone-hit areas. About 2,000 workers of the Karnataka Energy Department will head to Andhra Pradesh to help restore power in 5,000 villages over the next 10 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X